ನಾನು ಯಾವುದೇ ವೇಶ್ಯಾವಾಟಿಕೆ ಪ್ರಕರಣದಲ್ಲಿ ಭಾಗಿಯಾಗಿಲ್ಲ , ನನ್ನನ್ನು ಪೊಲೀಸರು ಬಂಧಿಸಿಲ್ಲ : ನಟ ಮಂಜುನಾಥ್‌ ಸ್ಪಷ್ಟನೆ – Vishwanews24

Featured, ರಾಜ್ಯ ನ್ಯೂಸ್

ನಾನು ಯಾವುದೇ ವೇಶ್ಯಾವಾಟಿಕೆ ಪ್ರಕರಣದಲ್ಲಿ ಭಾಗಿಯಾಗಿಲ್ಲ , ನನ್ನನ್ನು ಪೊಲೀಸರು ಬಂಧಿಸಿಲ್ಲ : ನಟ ಮಂಜುನಾಥ್‌ ಸ್ಪಷ್ಟನೆ

ಬೆಂಗಳೂರು: ಸ್ಯಾಂಡಲ್‌ ವುಡ್‌ ನಟನೊಬ್ಬ ವೇಶ್ಯಾವಾಟಿಕೆ ಜಾಲದಲ್ಲಿ ತೊಡಗಿಸಿಕೊಂಡಿರುವ ಆರೋಪ ಕೇಳಿಬಂದಿತ್ತು. ಈ ಕುರಿತು ಮಂಜುನಾಥ್‌ ಅಲಿಯಾಸ್‌ ಸಂಜು ಸ್ಪಷ್ಟನೆ ನೀಡಿದ್ದಾರೆ.

ನನ್ನನ್ನೇ ಹೋಲುವ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ, ನಾನು ಯಾವುದೇ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಆಯಪ್​​ನಲ್ಲಿ ಯುವ ನಟ ವೇಶ್ಯಾವಾಟಿಕೆ ಜಾಲದಲ್ಲಿ ತೊಡಗಿಕೊಂಡು ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದ ಆರೋಪದಡಿ ಅವರನ್ನು ಸುದ್ದುಗುಂಟೆಪಾಳ್ಯ‌ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿತ್ತು.

‘ನನ್ನ ಹಾಗೇ ಇರುವ ಮಂಜುನಾಥ್ ಅಲಿಯಾಸ್ ಸಂಜು ಎಂಬಾತನನ್ನ‌ು ವೇಶ್ಯಾವಾಟಿಕೆ ಆರೋಪದಡಿ ಬಂಧಿಸಿದ್ದಾರೆ.

ಉಪ್ಪಿನಂಗಡಿ: ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟ :- ಕಾರ್ಮಿಕ ಸಾವು – Vishwanews24

ಆದರೆ, ಮಾಧ್ಯಮಗಳಲ್ಲಿ‌ ನನ್ನ ಹೆಸರು ಪ್ರಸ್ತಾಪಿಸಲಾಗಿತ್ತು. ಈ ಸುದ್ದಿ ನೋಡಿದಾಕ್ಷಣ ನಾನೇ‌ ಆತಂಕಕ್ಕೆ‌ ಒಳಗಾದೆ. ಕೂಡಲೇ‌ ಸ್ನೇಹಿತರು, ಸಂಬಂಧಿಕರೆಲ್ಲರೂ ಫೋನ್ ಮಾಡಿ ವಿಚಾರಿಸಿದ್ದರು. ನಾನು ಮನೆಯಲ್ಲೇ‌ ಇದ್ದೇನೆ. ನನ್ನನ್ನು ಪೊಲೀಸರು ಬಂಧಿಸಿಲ್ಲ’ ಎಂದು ಹೇಳಿದ್ದಾರೆ.

ಘಟನೆ ಹಿನ್ನೆಲೆ:

ಖಾಸಗಿ ಆಯಪ್‌ನಲ್ಲಿ ಮಹಿಳೆಯರ ನಕಲಿ‌ ಫೋಟೋ ಸೃಷ್ಟಿಸಿ ಗ್ರಾಹಕರನ್ನು ವೇಶ್ಯಾವಾಟಿಕೆ ದಂಧೆಗೆ ಸೆಳೆದು ಅಕ್ರಮವಾಗಿ ಹಣ‌ ಸಂಪಾದನೆ‌ಯಲ್ಲಿ ಮಾಡುತ್ತಿದ್ದ ಆರು ಮಂದಿ‌ ದಂಧೆಕೋರರನ್ನು ಸುದ್ದುಗುಂಟೆಪಾಳ್ಯ ಪೊಲೀಸರು ಸೆರೆಹಿಡಿದಿದ್ದರು. ಗ್ರಾಹಕರು ನೀಡಿದ‌ ದೂರು ಆಧರಿಸಿ ವೇಶ್ಯಾವಾಟಿಕೆ ಜಾಲದಲ್ಲಿ ತೊಡಗಿದ್ದ ಮಂಜುನಾಥ್, ಮಲ್ಲಿಕಾರ್ಜುನಯ್ಯ, ಮಂಜುನಾಥ್, ಮೋಹನ್, ಹನುಮೇಶ್ ಮತ್ತು ರಾಜೇಶ್ ಎಂಬುವರನ್ನು ಬಂಧಿಸಲಾಗಿತ್ತು.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Leave a Reply