ಬೆಂಗಳೂರು: ಸ್ಯಾಂಡಲ್ ವುಡ್ ನಟನೊಬ್ಬ ವೇಶ್ಯಾವಾಟಿಕೆ ಜಾಲದಲ್ಲಿ ತೊಡಗಿಸಿಕೊಂಡಿರುವ ಆರೋಪ ಕೇಳಿಬಂದಿತ್ತು. ಈ ಕುರಿತು ಮಂಜುನಾಥ್ ಅಲಿಯಾಸ್ ಸಂಜು ಸ್ಪಷ್ಟನೆ ನೀಡಿದ್ದಾರೆ.
ನನ್ನನ್ನೇ ಹೋಲುವ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ, ನಾನು ಯಾವುದೇ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಆಯಪ್‌ನಲ್ಲಿ ಯುವ ನಟ ವೇಶ್ಯಾವಾಟಿಕೆ ಜಾಲದಲ್ಲಿ ತೊಡಗಿಕೊಂಡು ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದ ಆರೋಪದಡಿ ಅವರನ್ನು ಸುದ್ದುಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿತ್ತು.
‘ನನ್ನ ಹಾಗೇ ಇರುವ ಮಂಜುನಾಥ್ ಅಲಿಯಾಸ್ ಸಂಜು ಎಂಬಾತನನ್ನು ವೇಶ್ಯಾವಾಟಿಕೆ ಆರೋಪದಡಿ ಬಂಧಿಸಿದ್ದಾರೆ.
ಆದರೆ, ಮಾಧ್ಯಮಗಳಲ್ಲಿ ನನ್ನ ಹೆಸರು ಪ್ರಸ್ತಾಪಿಸಲಾಗಿತ್ತು. ಈ ಸುದ್ದಿ ನೋಡಿದಾಕ್ಷಣ ನಾನೇ ಆತಂಕಕ್ಕೆ ಒಳಗಾದೆ. ಕೂಡಲೇ ಸ್ನೇಹಿತರು, ಸಂಬಂಧಿಕರೆಲ್ಲರೂ ಫೋನ್ ಮಾಡಿ ವಿಚಾರಿಸಿದ್ದರು. ನಾನು ಮನೆಯಲ್ಲೇ ಇದ್ದೇನೆ. ನನ್ನನ್ನು ಪೊಲೀಸರು ಬಂಧಿಸಿಲ್ಲ’ ಎಂದು ಹೇಳಿದ್ದಾರೆ.
ಘಟನೆ ಹಿನ್ನೆಲೆ:
ಖಾಸಗಿ ಆಯಪ್‌ನಲ್ಲಿ ಮಹಿಳೆಯರ ನಕಲಿ ಫೋಟೋ ಸೃಷ್ಟಿಸಿ ಗ್ರಾಹಕರನ್ನು ವೇಶ್ಯಾವಾಟಿಕೆ ದಂಧೆಗೆ ಸೆಳೆದು ಅಕ್ರಮವಾಗಿ ಹಣ ಸಂಪಾದನೆಯಲ್ಲಿ ಮಾಡುತ್ತಿದ್ದ ಆರು ಮಂದಿ ದಂಧೆಕೋರರನ್ನು ಸುದ್ದುಗುಂಟೆಪಾಳ್ಯ ಪೊಲೀಸರು ಸೆರೆಹಿಡಿದಿದ್ದರು. ಗ್ರಾಹಕರು ನೀಡಿದ ದೂರು ಆಧರಿಸಿ ವೇಶ್ಯಾವಾಟಿಕೆ ಜಾಲದಲ್ಲಿ ತೊಡಗಿದ್ದ ಮಂಜುನಾಥ್, ಮಲ್ಲಿಕಾರ್ಜುನಯ್ಯ, ಮಂಜುನಾಥ್, ಮೋಹನ್, ಹನುಮೇಶ್ ಮತ್ತು ರಾಜೇಶ್ ಎಂಬುವರನ್ನು ಬಂಧಿಸಲಾಗಿತ್ತು.
Join our Whatsapp group by clicking the below link 👇👇
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…