Featured

ನಾನು ಯಾವುದೇ ಸ್ಥಾನಮಾನ ಕೇಳಿಲ್ಲ, ಹೈಕಮಾಂಡ್ ಜವಾಬ್ದಾರಿ ವಹಿಸಿದರೆ ನಿಭಾಯಿಸುವೆ: ಯು.ಟಿ. ಖಾದರ್ – vishwanews24

ನಾನು ಯಾವುದೇ ಸ್ಥಾನಮಾನ ಕೇಳಿಲ್ಲ, ಹೈಕಮಾಂಡ್ ಜವಾಬ್ದಾರಿ ವಹಿಸಿದರೆ ನಿಭಾಯಿಸುವೆ: ಯು.ಟಿ. ಖಾದರ್

ಮಂಗಳೂರು: ಸದ್ಯ ನಾನು ರಾಜ್ಯ ವಿಧಾನಸಭೆಯ ಅಧ್ಯಕ್ಷನಾಗಿದ್ದೇನೆ. ನೂತನ ಸಂಪುಟಕ್ಕೆ ಸಂಬಂಧಿಸಿ ನಾನು ಯಾವುದೇ ಸ್ಥಾನಮಾನ ಕೇಳಿಲ್ಲ, ಹೈಕಮಾಂಡ್ ಜವಾಬ್ದಾರಿ ವಹಿಸಿದರೆ ಅದನ್ನು ನಿಭಾಯಿಸುವೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದರು.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಖಾದರ್ ಸಾಮಾಜಿಕ ಜಾಲತಾಣಗಳನ್ನು ಗಮನಿಸಿ ಯಾರೂ ಅಧಿಕಾರ ನೀಡುವುದಿಲ್ಲ. ನಮ್ಮ ಕೆಲಸ ಕಾರ್ಯ ನೋಡಿ ಜವಾಬ್ದಾರಿ ವಹಿಸುತ್ತಾರೆ. ನನಗೆ ಯಾವ ಸ್ಥಾನಮಾನ ನೀಡಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ ಎಂದರು.

ಉಪಮುಖ್ಯಮಂತ್ರಿ ಹುದ್ದೆಗೆ ತಮ್ಮ ಹೆಸರು ಹರಿದಾಡಿದ ಬಗ್ಗೆ ಪ್ರತಿಕ್ರಿಯಿಸಿದ ಖಾದರ್, ನನಗೆ ಆ ವಿಚಾರ ಗೊತ್ತಿಲ್ಲ. ಸರಕಾರ ಸೂಚಿಸಿದಾಗ ವಿಧಾನಸಭಾ ಅಧಿವೇಶನಕ್ಕೆ ಏರ್ಪಾಟು ಮಾಡುವೆ. ಸಚಿವನಾಗಿ ಕಾರ್ಯನಿರ್ವಹಿಸು ಅಂದರೆ ಅದನ್ನು ಪಾಲಿಸುವೆ. ಉಪ ಮುಖ್ಯಮಂತ್ರಿ ಜವಾಬ್ದಾರಿ ನಿಭಾಯಿಸು ಅಂದರೆ ಅದನ್ನೂ ಮಾಡುವೆ. ಎಲ್ಲವನ್ನೂ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ನಾನು ಅದಕ್ಕೆ ಬದ್ಧನಾಗಿರುವೆ ಎಂದರು.

ನಾನು ಶಾಸಕನಾಗಿದ್ದಾಗ ಸದನವೀರ ಪ್ರಶಸ್ತಿ ಬಂತು. ಆರೋಗ್ಯ ಸಚಿವನಾಗಿದ್ದಾಗ ರಾಷ್ಟ್ರೀಯ ಪ್ರಶಸ್ತಿ ಬಂತು. ನಗರಾಭಿವೃದ್ಧಿ ಹಾಗೂ ವಸತಿ ಸಚಿವನಾಗಿ ಮಾಡಿದ ಸಾಧನೆ ನೋಡಿ ನನ್ನನ್ನು ಸದನದ ಉಪನಾಯಕನನ್ನಾಗಿ ನೇಮಿಸಿತು. ಅದರ ನಿರ್ವಹಣೆ ನೋಡಿ ನನ್ನನ್ನು ವಿಧಾನ ಸಭಾಧ್ಯಕ್ಷನನ್ನಾಗಿ ಆಯ್ಕೆ ಮಾಡಲಾಯಿತು. ಪಕ್ಷ ನೀಡಿದ ಎಲ್ಲ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಸ್ಪೀಕರ್ ಸ್ಥಾನದಲ್ಲಿ ಕುಳಿತ ಬಳಿಕ ಪಕ್ಷಾತೀತನಾಗಿ ಕೆಲಸ ಮಾಡಿದ್ದೇನೆ ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖಾದರ್ ಈ ಹಿಂದೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವನಾಗಿ ಜಿಲ್ಲೆಯಲ್ಲಿ ವಿಡಿಯೊ ಗೇಮ್, ಸ್ಕಿಲ್ ಗೇಮ್, ಹುಕ್ಕಾಬಾರ್ ನಿಷೇಧಿಸಿ ಅನೇಕ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿಸಿದ್ದೆ. ಸ್ಯಾಂಡ್ ಬಜಾರ್ ಆ್ಯಪ್ ಜಾರಿಗೊಳಿಸಿದ್ದೆ ಎಂದು ನುಡಿದರು.

ನನಗೆ ಕ್ಷೇತ್ರದ ಜನರು ಮುಖ್ಯ. ಜಾತಿ ಹಾಗೂ ಧರ್ಮ ಒಂದು ಗೌರವ ಮಾತ್ರ. ಯಾವುದೇ ಸ್ಥಾನವನ್ನು ಅಲಂಕರಿಸಿದರೂ ಪಕ್ಷದ ತತ್ವ ಸಿದ್ಧಾಂತದಡಿ ಕೆಲಸ ಮಾಡಬೇಕು. ದೇಶದ ಸಂವಿಧಾನದ ವ್ಯಾಪ್ತಿಯಲ್ಲಿ ಕೆಲಸ ಮಾಡುವುದು ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವಾಗಿದೆ ಎಂದು ಖಾದರ್ ಹೇಳಿದರು.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

7 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

7 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

8 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

9 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

12 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

12 hours ago