Featured

ನಾನು ರಾಜಕೀಯಕ್ಕೆ ಬರುವುದಕ್ಕೆ ಕಾರಣ ಮುಸ್ಲಿಂ ಗುರುಗಳಲ್ಲ , ಆದಿಚುಂಚನಗಿರಿ ಸ್ವಾಮಿಗಳು : ಜಮೀರ್‌ – Vishwanews24

ನಾನು ರಾಜಕೀಯಕ್ಕೆ ಬರುವುದಕ್ಕೆ ಕಾರಣ ಮುಸ್ಲಿಂ ಗುರುಗಳಲ್ಲ , ಆದಿಚುಂಚನಗಿರಿ ಸ್ವಾಮಿಗಳು : ಜಮೀರ್‌

ಹಾವೇರಿ: ‘ನಾನು ರಾಜಕೀಯಕ್ಕೆ ಬರುವುದಕ್ಕೆ ಕಾರಣ ಮುಸ್ಲಿಂ ಗುರುಗಳಲ್ಲ. ಆದಿಚುಂಚನಗಿರಿ ಸ್ವಾಮಿಗಳು. ನಾನು 4 ಬಾರಿ ಶಾಸಕ, 2 ಬಾರಿ ಮಂತ್ರಿಯಾಗಿದ್ದೇನೆ. ಒಕ್ಕಲಿಗರ ಮಠದಲ್ಲಿ ಬೆಳೆದ ಹುಡುಗ ನಾನು’ ಎಂದು ಶಾಸಕ ಜಮೀರ್‌ ಅಹಮದ್‌ ಖಾನ್‌ ಹೇಳುವ ಮೂಲಕ ಒಕ್ಕಲಿಗರ ವಿರೋಧಿಯಲ್ಲ ಎಂಬುದನ್ನು ಸ್ಪಷ್ಟಪಡಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಆದಿಚುಂಚನಗಿರಿ ಸ್ವಾಮೀಜಿಗಳ ಆದೇಶದ ಮೇರೆಗೆ ನಾನು ಜೆಡಿಎಸ್‌ಗೆ ಹೋಗಿದ್ದು. ಸ್ವಾಮೀಜಿ ಹಾಗೂ ಒಕ್ಕಲಿಗರ ಜೊತೆ ನನಗೆ ಎಂಥ ಬಾಂಧವ್ಯವಿದೆ ಎಂಬುದನ್ನು ಆ ಮಠದಲ್ಲಿ ಹೋಗಿ ಕೇಳಿ ನಿಮಗೆ ಗೊತ್ತಾಗುತ್ತೆ’ ಎಂದರು.

ನಾನು ಕಾಂಗ್ರೆಸ್ ಪಕ್ಷದಲ್ಲಿ ಇದ್ದೇನೆ. ಆದರೂ ನನ್ನ ರಾಜಕೀಯ ಗುರುಗಳು ದೇವೇಗೌಡರು. 2005ರಲ್ಲಿ ನನ್ನನ್ನು ಗೆಲ್ಲಿಸಿ ಈ ಮಟ್ಟಕ್ಕೆ ಬೆಳೆಸಿದ್ದಾರೆ. ದೇವೇಗೌಡರಿಂದಲೇ ನಾನು ಈ ಮಟ್ಟಕ್ಕೆ ಬೆಳೆದಿರೋದು. ಜಾತಿಗಳನ್ನು ಚೀಪಾಗಿ ನೋಡ್ತಿರೋದು ಬಿಜೆಪಿಯವರು’ ಎಂದು ಜಮೀರ್‌ ಹೇಳುವ ಮೂಲಕ ಸಚಿವ ಆರ್‌.ಅಶೋಕ್‌ ಹೇಳಿಕೆಗೂ ತಿರುಗೇಟು ನೀಡಿದರು.

ಭಾರತ್ ಮಾತಾ ಕಿ ಜೈ ಅನ್ನೋದು ಆಗಲೂ ಇದೆ, ಅದನ್ನು ಹೇಳಿಯೇ ಕಾಂಗ್ರೆಸ್ ಇದುವರೆಗೂ ಮತ ಪಡೆದಿದೆ. ಈ ರೀತಿ ಮಾತನಾಡಿ ಬಿಜೆಪಿಯರವರು ದೇಶ ಹಾಳು ಮಾಡಿದ್ದಾರೆ. ಹಿಂದೂ-ಮುಸಲ್ಮಾನರ ನಡುವೆ ಜಗಳ ತಂದಿಟ್ಟು, ಅಧಿಕಾರಕ್ಕೆ ಬರುತ್ತಾರೆ ಎಂದು ಟೀಕಿಸಿದರು.

ಇದನ್ನೂ ಓದಿ : ಸೋನಿಯಾ ಗಾಂಧಿ ವಿಚಾರಣೆ ವೇಳೆ ಕಾಂಗ್ರೆಸ್ ನಾಯಕರ ಪ್ರತಿಭಟನೆ : ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ – Vishwanews24 

Vishwa News 24

Recent Posts

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

30 minutes ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

38 minutes ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

46 minutes ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 hour ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 hours ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

3 hours ago