ನಾನು ರಾಜೀನಾಮೆ ಕೊಟ್ಟಿರೋದು ನಿಜ ; ಬೇಕಾದರೆ ಮತ್ತೊಮ್ಮೆ ರಾಜೀನಾಮೆ ನೀಡುತ್ತೇನೆ : ಆನಂದ್ ಸಿಂಗ್ -Vishwanews24

Featured, ರಾಜ್ಯ ನ್ಯೂಸ್
ಬೆಂಗಳೂರು: ಶಾಸಕ ಸ್ಥಾನಕ್ಕೆ ತಾವು ರಾಜಿನಾಮೆ ನೀಡಿರುವ ವಿಷಯವನ್ನು ಆನಂದ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ..
ರಾಜಭವನದ ಎದುರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಈಗಾಗಲೇ ಸ್ಪೀಕರ್ ಅವರಿಗೆ ರಾಜೀನಾಮೆಯನ್ನು ನೀಡಿದ್ದು, ಬೇಕಾದರೆ ಮತ್ತೊಮ್ಮೆ ರಾಜೀನಾಮೆ ನೀಡುತ್ತೇನೆ ಎಂದರು. ಈ ವೇಳೆ ತಮ್ಮ ರಾಜೀನಾಮೆ ನಿರ್ಧಾರದ ಕಾರಣವನ್ನು ತಿಳಿಸಲು ಇಚ್ಛಿಸದ ಅವರು, ನಾನು ಸದ್ಯ ರಾಜ್ಯಪಾಲರ ಭೇಟಿಗೆ ಆಗಮಿಸಿದ್ದೇನೆ. ಅವರ ಭೇಟಿಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡುತ್ತೇನೆ ಎಂದರು.
ಸ್ಪೀಕರ್ ರಮೇಶ್ ಕುಮಾರ್ ಅವರು ನನ್ನ ರಾಜಿನಾಮೆ ಪತ್ರ ಸಿಕ್ಕಿಲ್ಲ ಎಂದು ಹೇಳಿದ್ದಾರೆ, ಹೀಗಾಗಿ ಮತ್ತೊಮ್ಮೆ ರಾಜಿನಾಮೆ ಪತ್ರ ಸಲ್ಲಿಸುವೆ ಎಂದು ಹೇಳಿದ್ದಾರೆ.
ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದ ನಂತರ ಎಲ್ಲಾ ವಿಷಯಗಳನ್ನು ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ.