ನಾನು ರಾಜೀನಾಮೆ ನೀಡಲ್ಲ , ನಿಮ್ಮ ಷಡ್ಯಂತ್ರವನ್ನು ಸೋಲಿಸುತ್ತೇನೆ : BJP-JDS ಗೆ ಎಚ್ಚರಿಕೆ ನೀಡಿದ ಸಿ.ಎಂ. – vishwanews24

Featured, ರಾಜ್ಯ ನ್ಯೂಸ್

ನಾನು ರಾಜೀನಾಮೆ ನೀಡಲ್ಲ , ನಿಮ್ಮ ಷಡ್ಯಂತ್ರವನ್ನು ಸೋಲಿಸುತ್ತೇನೆ : BJP-JDS ಗೆ ಎಚ್ಚರಿಕೆ ನೀಡಿದ ಸಿ.ಎಂ.

ಬೆಂಗಳೂರು :ನಾನು ಹೆದರಲ್ಲ: ರಾಜೀನಾಮೆ ನೀಡಲ್ಲ. ನಾನು ಹೋರಾಟದಿಂದ ಬಂದವನು. ನಿಮ್ಮ ಷಡ್ಯಂತ್ರವನ್ನು ಸೋಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು BJP-JDS ಗೆ ನೇರ ಎಚ್ಚರಿಕೆ ನೀಡಿದರು.

ಯಲಹಂಕದ ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ 370 ಮೆ.ವ್ಯಾ ಸಾಮರ್ಥ್ಯದ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, ನಾನು ರಾಜೀನಾಮೆ ಕೊಡ್ತೀನಿ ಅಂತ ಕಾಯ್ಕೊಂಡು ಕೂತಿದ್ದೀರಾ? ಯಾವ ತಪ್ಪನ್ನೂ ಮಾಡದ ನನ್ನನ್ನು ಷಡ್ಯಂತ್ರದಿಂದ ಇಳಿಸಲು ನೋಡುತ್ತಿದ್ದೀರ. ಇದು ಅಸಾಧ್ಯ. ನಾನು ಹೋರಾಟ ರಾಜಕಾರಣದಿಂದ ಬಂದವನು. ನಿಮ್ಮನ್ನು ರಾಜಕೀಯವಾಗಿ ಎದುರಿಗೆ ಗೆಲ್ತೀನಿ. ನಿಮ್ಮ ಷಡ್ಯಂತ್ರ ಸೋಲಿಸ್ತೀನಿ ಎಂದು ಬಹಿರಂಗವಾಗಿ ತೊಡೆತಟ್ಟಿದರು.

ತಿಮ್ಮಪ್ಪನ ಸನ್ನಿಧಿಗೆ ಎರಡು ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಸರಬರಾಜು – vishwanews24

 

Leave a Reply