Featured

ನಾನು ರಾಜ್ಯದ 30 ಜಿಲ್ಲೆಗಳ ಹಾಗೂ ಎಲ್ಲ ಜನರ ಸಿಎಂ. ; ಯಾವುದೇ ವಿಚಾರದಲ್ಲಿ ಬೇಧ ಭಾವ ಇಲ್ಲ..:ಸಿಎಂ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ನಾನು ರಾಜ್ಯದ 30 ಜಿಲ್ಲೆಗಳ ಹಾಗೂ ಎಲ್ಲ ಜನರ ಸಿಎಂ. ಈ ವಿಚಾರದಲ್ಲಿ ಯಾವುದೇ ಬೇಧ ಭಾವ ಇಲ್ಲ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಬಜೆಟ್‌ನಲ್ಲಿ ತಾರತಮ್ಯದ ಆರೋಪದಲ್ಲಿ ತೊಡಗಿರುವ ಮಾಧ್ಯಮಗಳ ವಿರುದ್ಧ ಸಿಎಂ ಹರಿಹಾಯ್ದಿದ್ದಾರೆ. 

ಮೋದಿ ಸರಕಾರ ಇಂಧನದ ಮೇಲೆ ಹತ್ತು ರೂ. ಸೆಸ್ ಜಾಸ್ತಿ ಮಾಡಿದರೂ ಮಾಧ್ಯಮಗಳು ಹೊಗಳುತ್ತವೆ. ಆದರೆ ನಮ್ಮ ಸರಕಾರದ ಮೇಲೆ ಮಾತ್ರ ಯಾಕೆ ಟೀಕೆ ಮಾಡುತ್ತಿದೆ ಎಂದು ಸಿಎಂ ಪ್ರಶ್ನೆ ಮಾಡಿದ್ದಾರೆ. ರೈತ ಕುಟುಂಬಗಳಲ್ಲಿ ನಡೆಯುತ್ತಿರುವ ಅತ್ಮಹತ್ಯೆ ತಪ್ಪಿಸಲು ಸಾಲ ಮನ್ನಾ ನಿರ್ಧಾರ ಮಾಡಲಾಗಿದೆ. ಇದು ಕಷ್ಟದ ಕೆಲಸ ಎಂದೂ ಹೇಳಿದ್ದಾರೆ. ಜತೆಗೆ, ಮುಂದಿನ ತಿಂಗಳಿನಿಂದ ವಿಶೇಷ ಚೇತನ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಹಾಗೂ ಕ್ಷೀರಭಾಗ್ಯ ಯೋಜನೆ ಆರಂಭವಾಗಲಿದೆ ಎಂದು ಸಿಎಂ ಪ್ರಕಟಿಸಿದ್ದಾರೆ. 

‘ನನ್ನ ಮೇಲೆ ನಿಮಗೆ ಯಾಕಿಷ್ಟು ಕೋಪ ? ನಾನೇನು ಅನ್ಯಾಯ ಮಾಡಿದ್ದೇನೆ’

‘ನನ್ನ ಮೇಲೆ ನಿಮಗೆ ಯಾಕಿಷ್ಟು ಕೋಪ ? ನಾನೇನು ಅನ್ಯಾಯ ಮಾಡಿದ್ದೇನೆ’…ಇದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳಿಗೆ  ಕೇಳಿದ ಪ್ರಶ್ನೆ.

ಕರ್ನಾಟಕ ವಿಕಲಚೇತನ ಸೇವಾ  ಸಂಸ್ಥೆ ಒಕ್ಕೂಟ ಆಯೋಜಿಸಿದ್ದ ಸ್ಪಂದನ ಕಾರ್ಯಕ್ರಮದಲ್ಲಿ  ಸಿಎಂ ಮಾಧ್ಯಮಗಳ ವಿರುದ್ದ ತೀವ್ರ ಆಕ್ರೋಶ ಹೊರ ಹಾಕಿ ಹಲವು ಪ್ರಶ್ನೆಗಳನ್ನು ಮುಂದಿಟ್ಟರು.

‘ನಾನು ಪೆಟ್ರೋಲ್‌ ಡಿಸೇಲ್‌ ಬೆಲೆ ಕೇವಲ 1 ರೂಪಾಯಿ ಹೆಚ್ಚು ಮಾಡಿದರೆ ಮಂಗಳೂರಿನ ಮೀನುಗಾರರ ಮಹಿಳೆಯ ಬಳಿ ”ಕುಮಾರಸ್ವಾಮಿ ಇಸ್‌ ನಾಟ್‌ ಅವರ್‌ ಸಿಎಂ” ಅಂತ ಹೇಳಿಸುತ್ತೀರಿ. ಪ್ರಧಾನಿ ನರೇಂದ್ರ ಮೋದಿ 11 ಬಾರಿ ಬೆಲೆ ಏರಿಕೆ ಮಾಡಿದಾಗ ಚಕಾರ ಎತ್ತಿಲ್ಲ ಯಾಕೆ’ ಎಂದು ಪ್ರಶ್ನಿಸಿದರು.

‘ನಾನು ಜನಸಾಮಾನ್ಯರ ಪರವಾಗಿರುವ ಸಿಎಂ. ವಿದ್ಯುತ್‌ ಬಿಲ್‌ 10 ರೂಪಾಯಿ ಮಾತ್ರ ಏರಿಕೆ ಮಾಡಿದ್ದೇನೆ. ಬಡವರೂ ಕೂಡ 20 ರೂಪಾಯಿ ಕೊಟ್ಟು ಮಿನರಲ್‌ ವಾಟರ್‌ ಖರೀದಿಸುತ್ತಾರೆ’ ಎಂದು ತನ್ನ ಸರ್ಕಾರ ತೆರಿಗೆ ಹೆಚ್ಚಳದ ಕ್ರಮವನ್ನು ಸಮರ್ಥಿಸಿಕೊಂಡರು.

‘ನಾನು ಮುಖ್ಯಮಂತ್ರಿ ಆಗಿ ಕೇವಲ 2 ತಿಂಗಳು ಆಗಿದೆ. ಸಮಸ್ಯೆಗಳೆಲ್ಲಾ 70 ವರ್ಷಗಳಿಂದ ಇರಲಿಲ್ಲವೇ? ನಾನು ಬಡವರ ಪರ ಕಾಳಜಿಯುಳ್ಳ ಎಲ್ಲಾ ಜಿಲ್ಲೆಗಳ ಸಿಎಂ. ಟೀಕೆ ಮಾಡುವುದನ್ನ ನಿಲ್ಲಿಸಿ. ನನಗೆ ಸ್ವಲ್ಪ ಕಾಲಾವಕಾಶ ನೀಡಿ’ ಎಂದು ಮನವಿ ಮಾಡಿದರು.

‘ಮಾಧ್ಯಮಗಳು ಯಾವುದೇ ವಿಷಯವಿಲ್ಲದೆ ಸುದ್ದಿ ಮಾಡುತ್ತೀರಿ. ಜನರ ನಡುವೆ ಕಂದಕ ಸೃಷ್ಟಿಸುತ್ತೀರಿ ನಮ್ಮ ನಡುವೆ ಅನುಮಾನ ಮೂಡಿಸುತ್ತೀರಿ’ ಎಂದು ಕಿಡಿ ಕಾರಿದರು.

‘ನನ್ನ ಮೇಲೆ ನಿಮಗೆ ಕನಿಕರ ಇಲ್ಲವೆ ? ಯಾಕೆ ನನ್ನ ಮೇಲೆ ಇಷ್ಟು ಕೋಪ ? ಎಷ್ಟು ದಿನ ಅಂತ ನನ್ನ ಮೇಲೆ ಸುಳ್ಳು ಸುದ್ದಿ ಮಾಡುತೀರಿ? ಅಪಪ್ರಚಾರ ಮಾಡಬೇಡಿ’ ಎಂದು ತೀವ್ರ ಅಸಮಾಧಾನ ಹೊರ ಹಾಕಿದರು.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago