Featured

ನಾನು ರಾಷ್ಟ್ರಪತಿಯಾದರೆ ಯಾವುದೇ ಕಾರಣಕ್ಕೂ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗಲು ಬಿಡುವುದಿಲ್ಲ : ಯಶವಂತ್ ಸಿನ್ಹಾ – Vishwanews24

ನಾನು ರಾಷ್ಟ್ರಪತಿಯಾದರೆ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗಲು ಬಿಡುವುದಿಲ್ಲ : ಯಶವಂತ್ ಸಿನ್ಹಾ

ನವದೆಹಲಿ: ನಾನು ರಾಷ್ಟ್ರಪತಿಯಾಗಿ ಆಯ್ಕೆಯಾದರೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ ಮಾಡದಂತೆ ಅವಶ್ಯ ಕ್ರಮ ವಹಿಸುವುದಾಗಿ ವಿರೋಧಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಹೇಳಿದ್ದಾರೆ.

ಅಸ್ಸಾಂನ ವಿರೋಧ ಪಕ್ಷದ ಶಾಸಕರೊಂದಿಗೆ ಸಂವಾದ ನಡೆಸಿದ ಅವರು, ಬಿಜೆಪಿ ಸರ್ಕಾರವು ಮೂರ್ಖತನದಿಂದ ಪೌರತ್ವ ತಿದ್ದುಪಡಿ ಕಾಯಿದೆಯನ್ನು ತರಾತುರಿಯಲ್ಲಿ ಜಾರಿಗೆ ತರಲು ಸಿದ್ದತೆ ನಡೆಸಿತ್ತು. ಆದರೆ ಈವರೆಗೆ ಅದು ಸಾಧ್ಯವಾಗಿಲ್ಲ. ಮುಂದೆ ನಾನು ರಾಷ್ಟ್ರಪತಿಯಾಗಿ ಆಯ್ಕೆಯಾದಲ್ಲಿ ಯಾವುದೇ ಕಾರಣಕ್ಕೂ ಈ ಕಾಯಿದೆಯನ್ನು ಜಾರಿಗೊಳಿಸಲು ಬಿಡುವುದಿಲ್ಲ ಎಂದರು.

ಅಸ್ಸಾಂಗೆ ಪೌರತ್ವ ಎಂಬುದು ಪ್ರಮುಖ ವಿಷಯವಾಗಿದೆ. ದೇಶಾದ್ಯಂತ ಈ ಕಾಯಿದೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಬಹಳ ಉತ್ಸುಕವಾಗಿದೆ. ಆದರೆ ಅದನ್ನು ಇನ್ನೂ ಜಾರಿಗೊಳಿಸಲು ಸಾಧ್ಯವಾಗಿಲ್ಲ. ಮುಂದೆಯೂ ಜಾರಿಗೊಳಿಸಲು ಬಿಡುವುದಿಲ್ಲ. ಸಂವಿಧಾನವು ಇಂದು ಅಪಾಯದಲ್ಲಿದ್ದು, ಅದನ್ನು ಅಧಿಕಾರದಲ್ಲಿ ಇರುವವವರಿಂದ ರಕ್ಷಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ರಾಷ್ಟ್ರಪತಿ ಭವನದಲ್ಲಿ ನಾನಿದ್ದರೆ ಖಂಡಿತಾ ಅದನ್ನು ಮಾಡುತ್ತೇನೆ ಎಂದು ತಿಳಿಸಿದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

24 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago