Featured

ನಾನು ರೆಬಲ್‌ ಅಲ್ಲ, ಲಾಯಲ್ , ನಿಯಮ ಪಾಲನೆಗಾಗಿ ಈ ರೀತಿಯ ಪತ್ರ ಬರೆದಿದ್ದೇನೆ : ಕೆ.ಎಸ್ ಈಶ್ವರಪ್ಪ -Vishwanews24

ನಾನು ರೆಬಲ್‌ ಅಲ್ಲ, ಲಾಯಲ್ , ನಿಯಮ ಪಾಲನೆಗಾಗಿ ಈ ರೀತಿಯ ಪತ್ರ ಬರೆದಿದ್ದೇನೆ : ಕೆ.ಎಸ್ ಈಶ್ವರಪ್ಪ -Vishwanews24

ಮೈಸೂರು, : “ನಾನು ರೆಬಲ್‌ ಅಲ್ಲ, ಲಾಯಲ್‌‌. ನಿಯಮ ಪಾಲನೆಗಾಗಿ ಈ ರೀತಿಯ ಪತ್ರ ಬರೆದಿದ್ದೇನೆ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪ ಸಿಎಂ ಬಿ.ಎಸ್‌.ವೈ ಅವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನಿಯಮಗಳ ಅನುಸಾರ ಅನುದಾನ ಬಿಡುಗಡೆ ಮಾಡಿದ್ದರೆ ನಾನು ಆಕ್ಷೇಪ ಮಾಡುತ್ತಿರಲಿಲ್ಲ. ಬಜೆಟ್‌ನಲ್ಲಿ ಘೋಷಣೆಯಾದ ಹಣವನ್ನು ಆರ್ಥಿಕ ಇಲಾಖೆ ಆಯಾ ಇಲಾಖೆಗೆ ಬಿಡುಗಡೆ ಮಾಡಲಿದೆ. ಆದರೆ, ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ನಿಯಮ ಮೀರಿ ಮಧ್ಯಪ್ರವೇಶ ಮಾಡಿದ್ದು, ಕಾನೂನು ಉಲ್ಲಂಘನೆ ಮಾಡಿ ಅನುದಾನ ಬಿಡುಗಡೆಗೆ ಪತ್ರದ ಮೂಲಕ ತಿಳಿಸಿದ್ದಾರೆ. ನಾನು ಇದಕ್ಕೆ ಆಕ್ಷೇಪಿಸಿದ್ದೇನೆ” ಎಂದಿದ್ದಾರೆ.

ರಾಜ್ಯದಲ್ಲಿ ಕೊರೊನಾ ಅಬ್ಬರ : ಇಂದು ಹೊಸ ಮಾರ್ಗಸೂಚಿ ಬಿಡುಗಡೆ : ಸಚಿವ ಸುಧಾಕರ್​-Vishwanews24

“ಸಿಎಂ ಯಡಿಯೂರಪ್ಪ ಅವರು ನನ್ನ ಇಲಾಖೆಯ ಪ್ರಿನ್ಸ್‌‌ಪಲ್‌ ಸೆಕ್ರೇಟರಿಗೆ 65 ಕೋಟಿ ಅನುದಾನ ಬಿಡುಗಡೆ ಬಗ್ಗೆ ತಡೆ ಹಿಡಿಯಲಾಗಿದ್ದಂತ ಅನುದಾನವನ್ನು ಬಿಡುಗಡೆ ಮಾಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದರು. ನಮ್ಮ ಸೆಕ್ರೇಟರಿ ನನ್ನ ಬಳಿ ಕೇಳಿದಾಗ ನಿಯಮದ ಪ್ರಕಾರ ಏನು ಕ್ರಮ ಕೈಗೊಳ್ಳುತ್ತೀರೋ ಕೈಗೊಳ್ಳಿ ಎಂದು ಹೇಳಿದ್ದೆ. ಈ ಬಗ್ಗೆ ನಾನು ವಿವಿಧ ಅಧಿಕಾರಿಗಳ ಬಳಿ ಇದು ಸರಿನಾ ಎಂದು ಚರ್ಚೆ ನಡೆಸಿದಾಗ ಇದು ನಿಯಮಾನುಸಾರ ತಪ್ಪು ಎಂದು ತಿಳಿಯಿತು” ಎಂದು ಹೇಳಿದ್ದಾರೆ.

“ಇಲಾಖೆಯ ಹಣವನ್ನು ಸಂಬಂಧಿಸಿದ ಸಚಿವರ ಗಮನಕ್ಕೆ ಬಾರದಂತೆ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಮರಿಸ್ವಾಮಿಗೆ ನಿಯಮಬಾಹಿರವಾಗಿ ಬಿಡುಗಡೆಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎಂದರೆ ಇದು ಎಷ್ಟು ಸರಿ. ಈ ಕಾರಣಕ್ಕಾಗಿ ನಾನು ಸಿಎಂ ಅವರ ನಡೆಯ ಬಗ್ಗೆ ರಾಜ್ಯಪಾಲರಿಗೆ ಹಾಗೂ ಉಸ್ತುವಾರಿ ಸಚಿವ ಅರುಣ್‌‌ ಸಿಂಗ್‌ ಅವರಿಗೆ ಪತ್ರ ಬರೆದಿದ್ದೆ” ಎಂದು ತಿಳಿಸಿದ್ದಾರೆ,

ದ. ಕ.ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎಸ್.ಆರ್.ಭಗವಾನ್ ಅಧಿಕಾರ ಸ್ವೀಕಾರ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

12 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

21 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

21 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

21 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

21 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago