ಬೆಂಗಳೂರು: ನಾನು ವಿಮಾನದಲ್ಲಿ ಚಿನ್ನವನ್ನು ತಂದೇ ಇಲ್ಲ ಎಂದು ನಟಿ ರನ್ಯಾ ರಾವ್ ದೂರು ನೀಡಿದ್ದಾಳೆ.
ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ರನ್ಯಾ ರಾವ್ ಈಗ ದೂರು ನೀಡುವ ಮೂಲಕ ಪ್ರಕರಣಕ್ಕೆ ಟ್ವಿಸ್ಟ್ ನೀಡಿದ್ದಾಳೆ.
ಪರಪ್ಪನ ಅಗ್ರಹಾರ ಜೈಲರ್‌ಗೆ ದೂರು ನೀಡಿರುವ ರನ್ಯಾ ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಯಾರನ್ನೋ ಬಚಾವ್ ಮಾಡಲು ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದಾಳೆ.
ನಾನು ವಿಮಾನದಲ್ಲಿ ಚಿನ್ನವನ್ನು ತಂದೇ ಇಲ್ಲ. ಈ ಪ್ರಕರಣದಲ್ಲಿ ನಾನು ನಿರಪರಾಧಿಯಾಗಿದ್ದೇನೆ. ದುಬೈನಲ್ಲಿ ನನಗೆ ರಿಯಲ್ ಎಸ್ಟೇಟ್ ಬಿಸಿನೆಸ್ ಮಾಡುತ್ತಿದ್ದೆ. ಈ ಕಾರಣಕ್ಕೆ ನಾನು ದುಬೈಗೆ ತೆರಳಿದ್ದೆ. ಮಾರ್ಚ್ 3 ರಂದು ಬೆಳಗ್ಗೆ ಹೋಗಿ ಕೆಲಸ ಮುಗಿಸಿದ ಬಳಿಕ ತಕ್ಷಣ ಮರಳಿದ್ದೇನೆ ಎಂದು ಹೇಳಿದ್ದಾಳೆ.
ಜೈಲರ್‌ಗೆ ಸಲ್ಲಿಸಿದ ದೂರನ್ನು ಪೊಲೀಸ್ ಅಧಿಕಾರಿಗಳು ಡಿಆರ್‌ಐಗೆ ವರ್ಗಾವಣೆ ಮಾಡಿದ್ದಾರೆ. ಈಗ ಡಿಆರ್‌ಐ ಅಧಿಕಾರಿಗಳು ದೂರನ್ನು ಪರಿಶೀಲನೆ ಮಾಡುತ್ತಿದ್ದಾರೆ.
ರನ್ಯಾ ಬಂಧನವಾಗುವ 2 ವಾರಗಳ ಹಿಂದೆ ರನ್ಯಾ ದುಬೈಗೆ ಹೋಗಿ ಬಂದಿದ್ದಳು. ಆಗ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಕಸ್ಟಮ್ ಅಧಿಕಾರಿಗಳೊಂದಿಗೆ ಕಿರಿಕ್ ಮಾಡಿಕೊಂಡು, ನಾನು ಡಿಜಿಪಿ ಮಗಳು ಎಂದು ತಪಾಸಣೆಗೆ ಒಳಗಾಗದೇ ಹೊರಗೆ ಬರುತ್ತಿದ್ದದ್ದಳು. ಪ್ರತಿ ಬಾರಿ ಆಕೆಯನ್ನು ಕರೆದೊಯ್ಯಲು ವಿಮಾನ ನಿಲ್ದಾಣ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಬಸವರಾಜು ಹೋಗುತ್ತಿದ್ದರು. ಈ ಜಗಳದ ಬಳಿಕ ರನ್ಯಾಳ ಮೇಲೆ ಕಣ್ಣಿಟ್ಟಿದ್ದ ಡಿಆರ್‌ಐ ಅಧಿಕಾರಿಗಳು ಆಕೆಯ ವಿದೇಶ ಪ್ರಯಾಣದ ಮೇಲೆ ಕಣ್ಣಿಟ್ಟಿದ್ದರು.
ರನ್ಯಾ ಮತ್ತೆ ದುಬೈಗೆ ಪ್ರಯಾಣ ಬೆಳೆಸಿದ ಬೆನ್ನಲ್ಲೇ ಜಾಗೃತರಾದ ಅಧಿಕಾರಿಗಳು ರನ್ಯಾ ಬರುವಿಕೆಗಾಗಿಯೇ ಕಾಯುತ್ತಿದ್ದರು. ಮಾ. 3 ರಂದು ರನ್ಯಾ ಪತಿ ಜೊತೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಣಕ್ಕೆ ಬಂದಿಳಿಯುತ್ತಿದ್ದಂತೆ ಡಿಆರ್‌ಐ ಅಧಿಕಾರಿಗಳು ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಆಗಲೂ ಸಹ ರನ್ಯಾಳನ್ನು ತಪಾಸಣೆ ಇಲ್ಲದೇ ಹೊರಗೆ ಕರೆತರಲು ವಿಮಾನ ನಿಲ್ದಾಣ ಠಾಣೆ ಹೆಡ್ ಕಾನ್‌ಸ್ಟೇಬಲ್ ಬಸವರಾಜ್ ತೆರಳಿದ್ದರು. ರನ್ಯಾಳನ್ನ ಅಧಿಕಾರಿಗಳು ವಶಕ್ಕೆ ಪಡೆದಾಗ ಅವರು ಡಿಜಿಪಿ ರಾಮಚಂದ್ರರಾವ್ ಅವರ ಮಗಳು ಎಂದಿದ್ದಾರೆ.
ಕೂಡಲೇ ರನ್ಯಾಳನ್ನು ಲೋಹ ಪರಿಶೋಧಕ ಕಚೇರಿಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ 1 ಕೆಜಿ ತೂಕದ 14 ಗೋಲ್ಡ್ ಬಿಸ್ಕೆಟ್ ತಂದಿರುವುದು ತಿಳಿದಿದೆ. ತೊಡೆಯ ಭಾಗಕ್ಕೆ 14 ಬಿಸ್ಕೆಟ್‌ಗಳನ್ನು ಗಮ್ ಹಾಕಿ ಅಂಟಿಸಿಕೊಂಡು ಬಳಿಕ ಟೇಪ್‌ನಿಂದ ಸುತ್ತಿಕೊಂಡಿದ್ದಳು. ಯಾವುದೇ ಸ್ಕ್ಯಾನರ್‌ನಲ್ಲಿ ಅನುಮಾನ ಬಾರದಂತೆ ಕ್ರ್ಯಾಂಪ್ ಬ್ಯಾಂಡೇಜ್ ಹಾಕಿಕೊಂಡು ಬಂದಿದ್ದಳು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…