ಬೆಂಗಳೂರು: ಅಧರ್ಮದ ಜಗತ್ತನ್ನ ತೊರೆದು ಸತ್ಯದ ಕಡೆ ಹೋಗುತ್ತಿದ್ದೇನೆ, ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಬೇಡಿ ಎಂದು ಬರೆದು ಬೆಂಗಳೂರಿನ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದಾನೆ.
ಮೋಹಿತ್ ಋಷಿ ನಾಪತ್ತೆಯಾದ ವಿದ್ಯಾರ್ಥಿ. ವಿದ್ಯಾರಣ್ಯಪುರದ ನಿವಾಸಿ ಅರ್ಜುನ್ ಕುಮಾರ್ ಎಂಬುವವರ ಪುತ್ರ ಮೋಹಿತ್ ಋಷಿ ಬಿಇಎಲ್ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದ.
ಜನವರಿ 16ರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮನೆಯಲ್ಲೇ ಮೊಬೈಲ್ ಬಿಟ್ಟು ಇದ್ದಕ್ಕಿದ್ದಂತೆ ಮನೆ ಬಿಟ್ಟು ಹೋಗಿದ್ದಾನೆ. ಪುಸ್ತಕದಲ್ಲಿ ಅಸತ್ಯದ ಪ್ರಪಂಚದಲ್ಲಿ ಸತ್ಯ ಹುಡುಕಲು ಹೋಗುತ್ತಿದ್ದೇನೆ ಎಂದು ಬರೆದಿದ್ದಾನೆ.
ಈ ಬಗ್ಗೆ ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಯ ಪೋಷಕರು ದೂರು ನೀಡಿದ್ದಾರೆ. ಸದ್ಯ ಉತ್ತರ ಪ್ರದೇಶದ ಪ್ರಯಾಜ್ ರಾಜ್‌ನಲ್ಲಿ ಕುಂಭಮೇಳ ನಡೆಯುತ್ತಿರುವುದರಿಂದ ಮೋಹಿತ್ ಪ್ರಯಾಗ್ ರಾಜ್‌ಗೆ ಹೋಗಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಸಿಸಿಟಿವಿ ಪರಿಶೀಲನೆ ಮಾಡಿ ಹುಡುಕಾಡುತ್ತಿರುವ ಪೊಲೀಸರು, ಮೋಹಿತ್ ಪ್ರಯಾಗ್‌ರಾಜ್‌ಗೆ ಹೋಗಿರುವ ಸಾಧ್ಯತೆ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.
ವಿದ್ಯಾರ್ಥಿಯ ಪೋಷಕರು ಸೋಷಿಯಲ್ ಮೀಡಿಯಾದಲ್ಲಿಯೂ ಫೋಟೋ ಹಾಕಿ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…