ಉಡುಪಿ,:ಪ್ರಮೋದ್ ಮಧ್ವರಾಜ್ ಅವರು ಲೋಕಸಭೆ ಚುನಾವಣೆ ಸಮಯದಲ್ಲಿ ತಾಂತ್ರಿಕ ಕಾರಣಕ್ಕೆ ಜೆಡಿಎಸ್ ಪಕ್ಷ ಸೇರಿದ್ದರು, ಕೆಲವು ದಿನಗಳ ಹಿಂದಷ್ಟೆ ಜೆಡಿಎಸ್‌ಗೆ ರಾಜೀನಾಮೆ ಸಲ್ಲಿಸಿದ್ದರು.
ಇದರ ಬಗ್ಗೆ ಪ್ರತಿಕ್ರಿಯಿಸಿದ್ದ ಶಾಸಕ ರಘುಪತಿ ಭಟ್, ‘ಪ್ರಮೋದ್ ಮಧ್ವರಾಜ್ ಅವರಿಗೆ ಬಿಜೆಪಿ ಗೇಟ್ ಓಪನ್ ಆಗಿದೆ’ ಎಂದಿದ್ದರು. ರಘುಪತಿ ಭಟ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರಮೋದ್ ಮಧ್ವರಾಜ್, ‘ಶಾಸಕ ರಘುಪತಿ ಭಟ್ ನನ್ನ ರಾಜಕೀಯ ನಡೆಯ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳೂವುದು ಬೇಡ ಅದರ ಬದಲು ಅವರು ಕ್ಷೇತ್ರದ ಜನತೆಯ ಬಗ್ಗೆ ತಲೆ ಕೆಡಿಸಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ. ‘
ರಘುಪತಿ ಭಟ್ ಅನೇಕ ಸುಳ್ಳುಗಳನ್ನು ಹೇಳಿ ಕಳೆದ ಚುನಾವಣೆಯಲ್ಲಿ ಹಿಂದುತ್ವದ ಹೆಸರಿನಲ್ಲಿ ಗೆದ್ದಿದ್ದಾರೆ ಅವರು ಕೊಟ್ಟ ಯಾವುದೇ ಆಶ್ವಾಸನೆ ಈಡೇರಿಸಿಲ್ಲ. ಪ್ರಮುಖವಾಗಿ ತಾನು ಗೆದ್ದ 30 ದಿನಗಳ ಒಳಗೆ ಮರಳಿನ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದರು ಆದರೆ ಸಮಸ್ಯೆ ಇನ್ನೂ ಬಗೆಹರಿದಿಲ್ಲ’ ಎಂದರು.
ನಾನು ಶಾಸಕನಾಗಿ, ಮಂತ್ರಿಯಾಗಿ ಉಡುಪಿಗೆ ಮಂಜೂರು ಮಾಡಿದ ಕಾಮಾಗಾರಿಗಳೇ ಮುಂದುವರೆಯುತ್ತಿವೆ ಹೊರತು ಹೊಸ ಯಾವುದೇ ಕಾಮಗಾರಿಗಳು ಬಂದಿಲ್ಲ. ಕೆಲವೊಂದು ತಾನು ಮಂಜೂರು ಮಾಡಿದ ಕಾಮಾಗಾರಿಗಳಿಗೂ ತಡೆಯೊಡ್ಡುವ ಕೆಲಸವನ್ನು ರಘುಪತಿ ಭಟ್ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.
ರಘುಪತಿ ಭಟ್ ಅವರು ಶಾಸಕನಾಗಿ ಈಗಾಗಲೇ ವಿಫಲವಾಗಿದ್ದಾರೆ, ಇನ್ನಾದರೂ ಅವರು ಕ್ಷೇತ್ರದ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲಿ. ನನ್ನ ರಾಜಕೀಯ ನಡೆಯ ಬಗ್ಗೆ ರಘುಪತಿ ಭಟ್ ಹೆಚ್ಚು ತಲೆಕೆಡಿಸಿಕೊಳ್ಳೂವುದು ಬೇಡ ಅದರ ಬದಲು ಅವರು ಕ್ಷೇತ್ರದ ಜನತೆಯ ಬಗ್ಗೆ ತಲೆ ಕೆಡಿಸಿಕೊಳ್ಳಲಿ ಎಂದು ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…