ಗೋವಾ : ಗೋವಾ ರಾಜ್ಯಕ್ಕೆ ಮೂರು ದಿನ ಪ್ರವಾಸ ಕೈಗೊಂಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ “ನಾನು ಸಿಎಂ ಆಗಲು ಇಲ್ಲಿ ಬಂದಿಲ್ಲ, ಆದರೆ ಕೇಂದ್ರಕ್ಕೆ ದಾದಾಗಿರಿ ಮಾಡಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ. ಗುರುವಾರ ಸಂಜೆ ಮಮತಾ ಬ್ಯಾನರ್ಜಿ ಗೋವಾ ತಲುಪಿದ್ದರು.
“ಮೀನು ಮತ್ತು ಫುಟ್ಬಾಲ್” ಬಂಗಾಳ ಮತ್ತು ಗೋವಾವನ್ನು ಸಂಪರ್ಕಿಸುವ ಎರಡು ವಿಷಯಗಳಾಗಿವೆ ಎಂದು ಹೇಳಿರುವ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ರಾಜ್ಯದಲ್ಲಿ ಕೇಂದ್ರದ “ದಾದಾಗಿರಿ” ನಡೆಯಲು ಬಿಡುವುದಿಲ್ಲ ಎಂದು ಹೇಳಿದರು. ಆದಾಗ್ಯೂ, ಅಧಿಕಾರ ಹಿಡಿಯಲು ಅಥವಾ ಗೋವಾದ ಮುಖ್ಯಮಂತ್ರಿಯಾಗಲು ರಾಜ್ಯಕ್ಕೆ ಬಂದಿಲ್ಲ ಎಂದು ಅವರು ಹೇಳಿದ್ದಾರೆ. “ದೆಲ್ಲಿಚಿ ದಾದಾಗಿರಿ ಅನಿಕ್ ನಾಕಾ (ಇನ್ನು ಮುಂದೆ ದೆಹಲಿಯಿಂದ ದಬ್ಬಾಳಿಕೆ ಬೇಡ). ನಾನು ಹೊರಗಿನವಳಲ್ಲ, ಗೋವಾದ ಸಿಎಂ ಆಗಲು ಬಯಸುವುದಿಲ್ಲ” ಎಂದು ಕೊಂಕಣ ಭಾಷೆಯಲ್ಲಿ ಪಣಜಿಯಲ್ಲಿ ಮಮತಾ ಬ್ಯಾನರ್ಜಿ ಮಾತನಾಡಿದ್ದಾರೆ.
“ನಾನು ಭಾರತೀಯಳು, ನಾನು ಎಲ್ಲಿ ಬೇಕಾದರೂ ಹೋಗಬಹುದು, ಬಂಗಾಳ ನನ್ನ ತಾಯಿನಾಡು, ಗೋವಾ ಕೂಡ ನನ್ನ ತಾಯಿನಾಡು, ನಾನು ಗೋವಾಕ್ಕೆ ಬರುತ್ತೇನೆ, ಅವರು ನನ್ನ ಪೋಸ್ಟರ್‌ಗಳನ್ನು ಹಾಳು ಮಾಡುತ್ತಾರೆ, ಅವರು (ಬಿಜೆಪಿ) ಮಾನಸಿಕ ಅರೋಗ್ಯ ಸರಿಯಿಲ್ಲ, ಅವರು ನನಗೆ ಕಪ್ಪು ಬಾವುಟ ತೋರಿಸಿದರು ಆದರೆ ನಾನು ನಮಸ್ತೆ ಹೇಳಿದೆ,” ಎಂದು ಮಮತಾ ಹೇಳಿದ್ದಾರೆ. ಮಮತಾ ಬ್ಯಾನರ್ಜಿ ಅವರ ಭೇಟಿಗೆ ಮುನ್ನ ಗೋವಾದಲ್ಲಿ ಅವರ ಚಿತ್ರಗಳನ್ನು ಹೊಂದಿರುವ ಹಲವಾರು ಹೋರ್ಡಿಂಗ್‌ಗಳನ್ನು ವಿರೂಪಗೊಳಿಸಲಾಗಿತ್ತು. ಇದು ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಸಂಘರ್ಷಕ್ಕೆ ಕಾರಣವಾಗಿತ್ತು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…