ಬೆಂಗಳೂರು: ’ನಾನು ಸೋಲು ಕಂಡಾಗಲೆಲ್ಲ ಮತ್ತೆ ಪಕ್ಷವನ್ನು ನೆಲಮಟ್ಟದಿಂದ ಕಟ್ಟಿ ಬೆಳೆಸಿದ್ದೇನೆ. ಯಾವ ಶಾಸಕರೂ ಎದೆಗುಂದಬಾರದು. ಮೈತ್ರಿ ಸರ್ಕಾರಕ್ಕೆ ಒಂದಿಷ್ಟು ತೊಂದರೆ ಆಗದಂತೆ ನೋಡಿಕೊಳ್ಳುತ್ತೇನೆ‘ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಜೆಡಿಎಸ್ ಶಾಸಕರಿಗೆ ಭರವಸೆ ನೀಡಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಜೆಪಿ ನಗರದ ನಿವಾಸದಲ್ಲಿ ಮಂಗಳವಾರ ರಾತ್ರಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರನ್ನುದ್ದೇಶಿಸಿ ಮಾತನಾಡಿದ ಅವರು, ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಧೈರ್ಯ ತುಂಬಿದರು.
‘ಆಪರೇಶನ್ ಕಮಲದ ಭೀತಿಗೆ ಸರ್ಕಾರ ಸಿಲುಕಬಾರದು. ನಮ್ಮ ಪಕ್ಷದ ಯಾವ ಶಾಸಕರೂ ಅತ್ತಿತ್ತ ಹೊರಳಬಾರದು. ನಮ್ಮ ಪಕ್ಷದ ಶಾಸಕರು ಕ್ಷೇತ್ರಗಳ ಅಭಿವೃದ್ಧಿ ಕಡೆಗೆ ಗಮನ ಕೊಟ್ಟು ಕೆಲಸ ಮಾಡಿದರೆ ಸಾಕು. ಪಕ್ಷವನ್ನು ಮತ್ತೇ ಹೇಗೆ ಕಟ್ಟಬೇಕು ಎಂಬುದು ನನಗೆ ಗೊತ್ತು’ ಎಂದು ಹೇಳಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ , ‘ಜೆಡಿಎಸ್ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ನಮ್ಮ ಪಕ್ಷದ ಶಾಸಕರು ಕಾರ್ಯಕ್ರಮಗಳ ಪಟ್ಟಿ ಕೊಟ್ಟರೆ ಸಾಕು. ಅವುಗಳ ಅನುಷ್ಠಾನ ನನ್ನ ಜವಾಬ್ದಾರಿ. ಈಗಾಗಲೇ ಸಾಕಷ್ಟು ಕೆಲಸಗಳಿಗೆ ಸರ್ಕಾರ ಆಧ್ಯತೆ ನೀಡಿದೆ. ಪಕ್ಷಕ್ಕೆ ಧಕ್ಕೆ ಆಗುವ ರೀತಿಯಲ್ಲಿ ಯಾರೂ ಮಾತನಾಡಬಾರದು’ ಎಂದು ಮನವಿ ಮಾಡಿದರು.
ಸಭೆಯಲ್ಲಿ ಸರ್ಕಾರ ಸುರಕ್ಷಿತವಾಗಿಡುವ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ ರಾಜೀನಾಮೆ ನೀಡಲು ಎಲ್ಲ ಸಚಿವರೂ ಸಿದ್ದರಿದ್ದೇವೆ ಎಂದು ಸಚಿವರು ಅಭಯ ನೀಡಿದರು ಎನ್ನಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…