Featured

ನಾನು ಸೋಲು ಕಂಡಾಗಲೆಲ್ಲ ಮತ್ತೆ ಪಕ್ಷವನ್ನು ನೆಲಮಟ್ಟದಿಂದ ಕಟ್ಟಿ ಬೆಳೆಸಿದ್ದೇನೆ ; ಮತ್ತೇ ಹೇಗೆ ಕಟ್ಟಬೇಕು ಎಂಬುದು ನನಗೆ ಗೊತ್ತು : ಎಚ್.ಡಿ.ದೇವೇಗೌಡ -Vishwanews24

ಬೆಂಗಳೂರು: ’ನಾನು ಸೋಲು ಕಂಡಾಗಲೆಲ್ಲ ಮತ್ತೆ ಪಕ್ಷವನ್ನು ನೆಲಮಟ್ಟದಿಂದ ಕಟ್ಟಿ ಬೆಳೆಸಿದ್ದೇನೆ. ಯಾವ ಶಾಸಕರೂ ಎದೆಗುಂದಬಾರದು. ಮೈತ್ರಿ ಸರ್ಕಾರಕ್ಕೆ ಒಂದಿಷ್ಟು ತೊಂದರೆ ಆಗದಂತೆ ನೋಡಿಕೊಳ್ಳುತ್ತೇನೆ‘ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಜೆಡಿಎಸ್ ಶಾಸಕರಿಗೆ ಭರವಸೆ ನೀಡಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಜೆಪಿ ನಗರದ ನಿವಾಸದಲ್ಲಿ ಮಂಗಳವಾರ ರಾತ್ರಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರನ್ನುದ್ದೇಶಿಸಿ ಮಾತನಾಡಿದ ಅವರು, ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಧೈರ್ಯ ತುಂಬಿದರು.

‘ಆಪರೇಶನ್ ಕಮಲದ ಭೀತಿಗೆ ಸರ್ಕಾರ ಸಿಲುಕಬಾರದು. ನಮ್ಮ ಪಕ್ಷದ ಯಾವ ಶಾಸಕರೂ ಅತ್ತಿತ್ತ ಹೊರಳಬಾರದು. ನಮ್ಮ ಪಕ್ಷದ ಶಾಸಕರು ಕ್ಷೇತ್ರಗಳ ಅಭಿವೃದ್ಧಿ ಕಡೆಗೆ ಗಮನ ಕೊಟ್ಟು ಕೆಲಸ ಮಾಡಿದರೆ ಸಾಕು. ಪಕ್ಷವನ್ನು ಮತ್ತೇ ಹೇಗೆ ಕಟ್ಟಬೇಕು ಎಂಬುದು ನನಗೆ ಗೊತ್ತು’ ಎಂದು ಹೇಳಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ , ‘ಜೆಡಿಎಸ್ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ನಮ್ಮ ಪಕ್ಷದ ಶಾಸಕರು ಕಾರ್ಯಕ್ರಮಗಳ ಪಟ್ಟಿ ಕೊಟ್ಟರೆ ಸಾಕು. ಅವುಗಳ ಅನುಷ್ಠಾನ ನನ್ನ ಜವಾಬ್ದಾರಿ. ಈಗಾಗಲೇ ಸಾಕಷ್ಟು ಕೆಲಸಗಳಿಗೆ ಸರ್ಕಾರ ಆಧ್ಯತೆ ನೀಡಿದೆ. ಪಕ್ಷಕ್ಕೆ ಧಕ್ಕೆ ಆಗುವ ರೀತಿಯಲ್ಲಿ ಯಾರೂ ಮಾತನಾಡಬಾರದು’ ಎಂದು ಮನವಿ ಮಾಡಿದರು.

ಸಭೆಯಲ್ಲಿ ಸರ್ಕಾರ ಸುರಕ್ಷಿತವಾಗಿಡುವ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ ರಾಜೀನಾಮೆ ನೀಡಲು ಎಲ್ಲ ಸಚಿವರೂ ಸಿದ್ದರಿದ್ದೇವೆ ಎಂದು ಸಚಿವರು ಅಭಯ ನೀಡಿದರು ಎನ್ನಲಾಗಿದೆ.

 

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

20 hours ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

20 hours ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

20 hours ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

21 hours ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

21 hours ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

21 hours ago