Featured

ನಾನು ‘ಹೆಮ್ಮೆಯ ಹಿಂದೂ ; ‘ಜೈ ಶ್ರೀ ರಾಮ್’  : ವದಂತಿಗಳಿಗೆ ಕಂಗನಾ ತಿರುಗೇಟು – Vishwanews24

ನಾನು ‘ಹೆಮ್ಮೆಯ ಹಿಂದೂ ; ‘ಜೈ ಶ್ರೀ ರಾಮ್’  : ವದಂತಿಗಳಿಗೆ ಕಂಗನಾ ತಿರುಗೇಟು​

ದೆಹಲಿ: ನಟಿ ಕಂಗನಾ ರಣಾವತ್ ಹಿಮಾಚಲ ಪ್ರದೇಶದ ಲೋಕಸಭೆ ಕ್ಷೇತ್ರ ಮಂಡಿಯ ಅಭ್ಯರ್ಥಿಯಾಗಿ ಸ್ವರ್ಧಿಸುತ್ತಿದ್ದಾರೆ. ಈ ಹಿಂದೆಯೂ ಅವರು ಸಾಮಾಜಿಕ ಜಾಲತಾಣದಲ್ಲಿ ಅನೇಕ ವಿಚಾರಗಳಿಂದ ಸುದ್ದಿಯಾಗಿತ್ತಿದ್ದರು. ಇದೀಗ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭೆಯಲ್ಲಿ ಸ್ಪರ್ಧಿಸುತ್ತಿರುವ ಕಾರಣ ಇದೀಗ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಸುದ್ದಿಯಾಗುತ್ತಿದ್ದಾರೆ. ಕಂಗನಾ ತಮ್ಮ ಎಕ್ಸ್​​​ ಖಾತೆಯಲ್ಲಿ ಗೋಮಾಂಸ ಅಥವಾ ಇತರ ಯಾವುದೇ ರೀತಿಯ ಕೆಂಪು ಮಾಂಸವನ್ನು ಸೇವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್‌ನ ವಿಜಯ್ ವಾಡೆಟ್ಟಿವಾರ್ ಅವರು ಕಂಗನಾ ಅವರು ಗೋಮಾಂಸವನ್ನು ಇಷ್ಟಪಡುತ್ತಾರೆ ಹಾಗೂ ಸೇವನೆ ಮಾಡುತ್ತಾರೆ ಎಂದು ಎಕ್ಸ್​​ನಲ್ಲಿ ಹೇಳಿಕೆ ನೀಡಿದರು. ಈ ಹೇಳಿಕೆಯಿಂದ ಎಕ್ಸ್​​ನಲ್ಲಿ​​​ ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ಅವರ ಹೇಳಿಕೆಗೆ ಎಕ್ಸ್​ನಲ್ಲೇ ಕಂಗನಾ ತಿರುಗೇಟು ನೀಡಿದ್ದಾರೆ.

ನನ್ನ ವಿರುದ್ಧ ಸಂಪೂರ್ಣ ಆಧಾರರಹಿತ ವದಂತಿಗಳು ಮಾಡಲಾಗುತ್ತಿದೆ. ಅವುಗಳು ‘ನಾಚಿಕೆಗೇಡಿನ’ ವಿಚಾರ ಎಂದು ಹೇಳಿದ್ದಾರೆ. ನಾನು ದಶಕಗಳಿಂದ ಯೋಗ ಮತ್ತು ಆಯುರ್ವೇದ ಜೀವನ ವಿಧಾನವನ್ನು ಪಾಲಿಸುತ್ತಿದ್ದೇನೆ ಹಾಗೂ ಪ್ರಚಾರ ಮಾಡುತ್ತಿದ್ದೇನೆ. ಆದರೆ ಇದೀಗ ನನ್ನ ಮೇಲೆ ಕೆಟ್ಟ ಆರೋಪಗಳನ್ನು ಮಾಡುತ್ತಿದ್ದಾರೆ. ಇಂತಹ ಆರೋಪಗಳಿಂದ ನನ್ನ ಇಮೇಜ್​​​ನ್ನು ಹಾಳು ಮಾಡುವುದಿಲ್ಲ ಎಂದು ಹೇಳಿದ್ದಾರೆ.

ನನ್ನ ಜನರಿಗೆ ನಾನು ‘ಹೆಮ್ಮೆಯ ಹಿಂದೂ’ ಎಂದು ಗೊತ್ತಿದೆ. ನನ್ನ ಮೇಲೆ ಇಂತಹ ಆರೋಪಗಳನ್ನು ಮಾಡಿ ಅವರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ, ‘ಜೈ ಶ್ರೀ ರಾಮ್’ ಎಂದು ನಟಿ ಕಂಗನಾ ರಣಾವತ್ ಎಕ್ಸ್​​ನಲ್ಲಿ ಟ್ವೀಟ್​​​ ಮಾಡಿದ್ದಾರೆ. ಇನ್ನು ಕಾಂಗ್ರೆಸ್‌ನ ವಿಜಯ್ ವಾಡೆಟ್ಟಿವಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿಯ ಶೈನಾ ಎನ್‌ಸಿ ವಿಜಯ್ ವಾಡೆಟ್ಟಿವಾರ್ ಅವರು ಮಹಾರಾಷ್ಟ್ರದ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದು, ಅವರು ಕಂಗನಾ ರಣಾವತ್ ಅವರಿಗೆ ಗೋಮಾಂಸ ತಿನ್ನುವ ಕಾರಣಕ್ಕಾಗಿ ಟಿಕೆಟ್ ನೀಡಲಾಗಿದೆ ಎಂದು ಹೇಳುವ ಧೈರ್ಯವಿದೆ. ಕಾಂಗ್ರೆಸ್ ಇಂತಹ ಹಾಸ್ಯಾಸ್ಪದ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago