ಕಾರ್ಕಳ : ತನ್ನ ಮೇಲೆ ರಾಜ್ಯದ ಯಾವುದೇ ಪೊಲೀಸ್ ಠಾಣೆಯಲ್ಲಿ ದೇಶದ್ರೋಹದ ಕೇಸು ದಾಖಲಾಗದಿದ್ದರೂ ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್, ಬಿಜೆಪಿ ಪದಾಧಿಕಾರಿಗಳು ದೇಶದ್ರೋಹದ ಹೇಳಿಕೆ ನೀಡಿದ್ದು, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಿದ್ದೆನೆ ಎಂದು ರಾಧಾಕೃಷ್ಣ ಹಿರ್ಗಾನ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೇನಾದರು ದೇಶದ್ರೋಹ ಪೋಸ್ಟ್ ಹಾಕಿದ ಕೆಲಸ ಮಾಡಿದ್ದರೆ, ಸೈನಿಕರಿಗೆ ಅವಹೇಳನ ಮಾಡಿದ್ದರೆ ಯಾವುದೇ ಶಿಕ್ಷೆ ಅನುಭವಿಸಲು ಸಿದ್ದ. ಗಲ್ಲಿಗೇರಲು ಸಿದ್ದನಿದ್ದೇನೆ. ಆದರೆ ಶಾಸಕರು ಅಥವಾ ಅವರ ಯಾರೇ ಪದಾಧಿಕಾರಿಗಳು ಯಾವುದೇ ಪವಿತ್ರ ಸ್ಥಳದಲ್ಲಿ ಪ್ರಮಾಣಿಸಲು ಸಿದ್ದರಿದ್ದಾರೆಯೇ ಎಂದು ಸವಾಲೆಸೆದರು
ಈ ಹಿಂದೆ ನಾನು ಮೂರ್ನಾಲ್ಕು ಬಾರಿ ಠಾಣೆಗೆ ಹಾಜರಾದ ಸಂದರ್ಭ ಒಂದು ಬಾರಿ ನನ್ನ ಹೇಳಿಕೆಯನ್ನು ಪಡೆದಿದ್ದು, ಪ್ರತಿ ಬಾರಿಯೂ ಸಂದರ್ಶಕರ ಪುಸ್ತಕದಲ್ಲಿ ಸಹಿ ಹಾಕಿದ್ದೆ. ಅದಾಗ್ಯೂ ತಾನು ತಲೆ ಮರೆಸಿಕೊಂಡಿದ್ದೆ ಎಂದು ಶಾಸಕರು ಸುಳ್ಳು ಹೇಳಿದ್ದಾರೆ ಎಂದು ರಾಧಾಕೃಷ್ಣ ನಾಯಕ್ ಆರೋಪಿಸಿದರು.
ಸಾಮಾಜಿಕ ಜಾಲತಾಣದಲ್ಲಿ ಯೋಧರ ವಿರುದ್ಧ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ವಿಚಾರಣೆ ಸಂದರ್ಭದಲ್ಲಿ ರಾಧಾಕೃಷ್ಣ ನಾಯಕ್ ಅವರಿಗೆ ಕಾರ್ಕಳ ಟೌನ್ ಎಸ್ ಐ ಮಧು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…