Featured

ನಾನೇನಾದ್ರು ಬಿಎಸ್​ ಯಡಿಯೂರಪ್ಪ ಜಾಗದಲ್ಲಿ ಇದ್ದರೆ ರಾಜೀನಾಮೆ ನೀಡುತ್ತಿದ್ದೆ : ಎಂ.ಬಿ ಪಾಟೀಲ್ -Vishwanews24

ವಿಜಯಪುರ: ಸಿಎಂ ಯಡಿಯೂರಪ್ಪ ಅವರು ತಂತಿ ಮೇಲೆ ನಡೆಯುತ್ತಿದ್ದಾರೋ, ಬೆಂಕಿ ಮೇಲೆ ನಡೆಯುತ್ತಿದ್ದಾರೋ ಗೊತ್ತಿಲ್ಲ, ಈ ಬಗ್ಗೆ ಯಡಿಯೂರಪ್ಪ ಅವರೇ ಹೇಳಬೇಕು ಎಂದು ಅವರು ಮಂಗಳವಾರ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ವೀರಶೈವ ಸಮಾಜ ಯಡಿಯೂರಪ್ಪ ಉಳಿಸಿದ್ದಾರೆ ಅನ್ನೋ ಶಾಮನೂರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದರು. ನಾವು ವೀರಶೈವ ಧರ್ಮದಲ್ಲಿ ಕೈ ಹಾಕಿಲ್ಲ, ನಮ್ಮದು ಲಿಂಗಾಯತ ಧರ್ಮ, ಲಿಂಗಾಯತ ಹೋರಾಟ ನಮ್ಮ ಅಸ್ಮಿತೆ ಇದರಲ್ಲಿ ಎರಡು ಮಾತಿಲ್ಲ, ಜೈನ್ ಧರ್ಮಕ್ಕೆ ಮಾನ್ಯತೆ ನೀಡಿದಂತೆ ನಮ್ಮ ಧರ್ಮಕ್ಕೂ ಮಾನ್ಯತೆ ನೀಡಬೇಕು ಲಿಂಗಾಯತ ಹೋರಾಟದ ಬಗ್ಗೆ ಮುಂದಿನ ದಿನಗಳಲ್ಲಿ ಕಾದು ನೋಡಿ ಎಂದರು.

ಅಲ್ಲದೇ ನೇರೆ ಪರಿಹಾರ ವಿಚಾರದಲ್ಲಿ ಕೇಂದ್ರದ ಮಲತಾಯಿ ದೋರಣೆ ನಡೆಯುತ್ತಿದೆ. ನಾನೇನಾದ್ರು ಬಿಎಸ್​ ಯಡಿಯೂರಪ್ಪ ಜಾಗದಲ್ಲಿ ಇದ್ದರೆ ರಾಜೀನಾಮೆ ನೀಡುತ್ತಿದ್ದೆ. ಯಡಿಯೂರಪ್ಪಗೆ ಉತ್ತರ ಕರ್ನಾಟಕ ಕೈ ಹಿಡಿದಿದೆ. ಆದರೆ, ಇದೀಗ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಅವರು ನುಡಿದರು.

ಅಲ್ಲದೇ ಈಶ್ವರಪ್ಪ, ತೇಜಸ್ವಿ ಸೂರ್ಯ ಪ್ರವಾಹದಲ್ಲಿ ಸಿಲುಕಲಿ. ಆಗ ಅವರಿಗೆ ಪ್ರವಾಹದ ಬಗ್ಗೆ ತಿಳಿಯುತ್ತೆ, ಪ್ರವಾಹ ಸಂತ್ರಸ್ತರಿಗೆ ಸರಿಯಾದ ಪರಿಹಾರ ಕೈಗೊಂಡಿಲ್ಲ, ಸ್ಥಳಾಂತರ ಮಾಡುವ ವಿಚಾರದಲ್ಲಿ ಯಾವುದೇ ಕಾರ್ಯ ಮಾಡಿಲ್ಲ, ಉತ್ತರ ಕರ್ನಾಟಕದ ಜನರ ಶಾಪ ಸರ್ಕಾರಕ್ಕೆ ತಟ್ಟಲಿದೆ, ನಾನು ಸ್ವತಃ ಪ್ರವಾಹ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದೇನೆ. ಸರ್ಕಾರ ಪ್ರವಾಹ ಸಂತ್ರಸ್ತರಿಗೆ ನೀರಿಕ್ಷಿತ ಮಟ್ಟದಲ್ಲಿ ಸಹಾಯ ಮಾಡಿಲ್ಲ ಎಂದು ಕಾಂಗ್ರೆಸ್​ ಮುಖಂಡ ಎಂ.ಬಿ ಪಾಟೀಲ್ ಅವರು ಹೇಳಿದರು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

13 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

18 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

18 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

18 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago