ವಿಜಯಪುರ: ಸಿಎಂ ಯಡಿಯೂರಪ್ಪ ಅವರು ತಂತಿ ಮೇಲೆ ನಡೆಯುತ್ತಿದ್ದಾರೋ, ಬೆಂಕಿ ಮೇಲೆ ನಡೆಯುತ್ತಿದ್ದಾರೋ ಗೊತ್ತಿಲ್ಲ, ಈ ಬಗ್ಗೆ ಯಡಿಯೂರಪ್ಪ ಅವರೇ ಹೇಳಬೇಕು ಎಂದು ಅವರು ಮಂಗಳವಾರ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ವೀರಶೈವ ಸಮಾಜ ಯಡಿಯೂರಪ್ಪ ಉಳಿಸಿದ್ದಾರೆ ಅನ್ನೋ ಶಾಮನೂರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದರು. ನಾವು ವೀರಶೈವ ಧರ್ಮದಲ್ಲಿ ಕೈ ಹಾಕಿಲ್ಲ, ನಮ್ಮದು ಲಿಂಗಾಯತ ಧರ್ಮ, ಲಿಂಗಾಯತ ಹೋರಾಟ ನಮ್ಮ ಅಸ್ಮಿತೆ ಇದರಲ್ಲಿ ಎರಡು ಮಾತಿಲ್ಲ, ಜೈನ್ ಧರ್ಮಕ್ಕೆ ಮಾನ್ಯತೆ ನೀಡಿದಂತೆ ನಮ್ಮ ಧರ್ಮಕ್ಕೂ ಮಾನ್ಯತೆ ನೀಡಬೇಕು ಲಿಂಗಾಯತ ಹೋರಾಟದ ಬಗ್ಗೆ ಮುಂದಿನ ದಿನಗಳಲ್ಲಿ ಕಾದು ನೋಡಿ ಎಂದರು.
ಅಲ್ಲದೇ ನೇರೆ ಪರಿಹಾರ ವಿಚಾರದಲ್ಲಿ ಕೇಂದ್ರದ ಮಲತಾಯಿ ದೋರಣೆ ನಡೆಯುತ್ತಿದೆ. ನಾನೇನಾದ್ರು ಬಿಎಸ್ ಯಡಿಯೂರಪ್ಪ ಜಾಗದಲ್ಲಿ ಇದ್ದರೆ ರಾಜೀನಾಮೆ ನೀಡುತ್ತಿದ್ದೆ. ಯಡಿಯೂರಪ್ಪಗೆ ಉತ್ತರ ಕರ್ನಾಟಕ ಕೈ ಹಿಡಿದಿದೆ. ಆದರೆ, ಇದೀಗ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಅವರು ನುಡಿದರು.
ಅಲ್ಲದೇ ಈಶ್ವರಪ್ಪ, ತೇಜಸ್ವಿ ಸೂರ್ಯ ಪ್ರವಾಹದಲ್ಲಿ ಸಿಲುಕಲಿ. ಆಗ ಅವರಿಗೆ ಪ್ರವಾಹದ ಬಗ್ಗೆ ತಿಳಿಯುತ್ತೆ, ಪ್ರವಾಹ ಸಂತ್ರಸ್ತರಿಗೆ ಸರಿಯಾದ ಪರಿಹಾರ ಕೈಗೊಂಡಿಲ್ಲ, ಸ್ಥಳಾಂತರ ಮಾಡುವ ವಿಚಾರದಲ್ಲಿ ಯಾವುದೇ ಕಾರ್ಯ ಮಾಡಿಲ್ಲ, ಉತ್ತರ ಕರ್ನಾಟಕದ ಜನರ ಶಾಪ ಸರ್ಕಾರಕ್ಕೆ ತಟ್ಟಲಿದೆ, ನಾನು ಸ್ವತಃ ಪ್ರವಾಹ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದೇನೆ. ಸರ್ಕಾರ ಪ್ರವಾಹ ಸಂತ್ರಸ್ತರಿಗೆ ನೀರಿಕ್ಷಿತ ಮಟ್ಟದಲ್ಲಿ ಸಹಾಯ ಮಾಡಿಲ್ಲ ಎಂದು ಕಾಂಗ್ರೆಸ್ ಮುಖಂಡ ಎಂ.ಬಿ ಪಾಟೀಲ್ ಅವರು ಹೇಳಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…