ಉಡುಪಿ ಕೃಷ್ಣ ಮಠದ ಜಾಗವನ್ನು ಮುಸ್ಲಿಂ ರಾಜರು ಕೊಟ್ಟಿದ್ದಾರೆ ಎಂಬ ತಮ್ಮ ಹೇಳಿಕೆಯ ಬಗ್ಗೆ ಕಾಂಗ್ರೆಸ್ ನಾಯಕ ಮಿಥುನ್ ರೈ ಸ್ಪಷ್ಟನೆ ನೀಡಿದ್ದು, ಈ ವಿಚಾರ ತಪ್ಪು ಎಂದಾದರೆ ಕ್ಷಮೆ ಯಾಚಿಸಲು ಸಿದ್ಧ ಎಂದಿದ್ದಾರೆ.
ದ.ಕ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುತ್ತಿಗೆಯ ನೂರಾನಿ ಮಸೀದಿಯಲ್ಲಿ ನಡೆದ ʻನಮ್ಮೂರ ಮಸೀದಿ ನೋಡ ಬನ್ನಿʼ ಕಾರ್ಯಕ್ರಮದಲ್ಲಿ ಮಾತನಾಡಿದ ಮಿಥುನ್ ರೈ ಅವರು, ಉಡುಪಿಯ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು ಎಂಬ ಹೇಳಿಕೆ ನೀಡಿದ್ದರು. ಇದು ಆಕ್ರೋಶಕ್ಕೆ ಕಾರಣವಾದಾಗ ಮಿಥುನ್ ರೈ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.
ಇದೀಗ ಉಡುಪಿ ಶಾಸಕ ಕೆ. ರಘುಪತಿ ಅವರು ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬಳಿಕ ಮತ್ತೊಮ್ಮೆ ಮೂಡುಬಿದಿರೆಯಲ್ಲಿ ಮಾತನಾಡಿದ ಅವರು, ನಾನೇನೂ ಇತಿಹಾಸಕಾರನಲ್ಲ. ಪೂಜ್ಯರಾದ ಪೇಜಾವರ ಹಿರಿಯ ಶ್ರೀಗಳು ಹೇಳಿದ ವಿಚಾರವನ್ನು ಪತ್ರಿಕೆಯಲ್ಲಿ ಓದಿದ್ದೆ. ಅದನ್ನೇ ಹೇಳಿದ್ದೆನೆ ಎಂದಿದ್ದಾರೆ.
ಅವತ್ತು ನಾನು ಈ ಮಾತುಗಳನ್ನು ಹೇಳುವಾಗ ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಕೂಡ ವೇದಿಕೆಯಲ್ಲಿದ್ದರು. ದೇವಸ್ಥಾನದ ಅರ್ಚಕರೂ ಇದ್ದರು. ನನಗೆ ಈ ಮಾತು ಹೇಳುವಲ್ಲಿ ಬೇರೆ ಯಾವ ಉದ್ದೇಶವೂ ಇರಲಿಲ್ಲ. ನಮ್ಮ ಜಿಲ್ಲೆಯ ಸೌಹಾರ್ದ ಪರಂಪರೆ ತುಂಬ ಪುರಾತನವಾದುದು. ಸೌಹಾರ್ದತೆಗೆ ನಾನೂ ನೂರಾರು ಉದಾಹರಣೆಗಳನ್ನು ಕೊಡಬಲ್ಲೆ. ಅದರಲ್ಲಿ ಇದೊಂದು ಎಂದು ಹೇಳಿ ಪೇಜಾವರ ಶ್ರೀಗಳು ಹೇಳಿದ ಮಾತನ್ನು ಪುನರುಚ್ಚರಿಸಿದ್ದೆ ಎಂದು ಮಿಥುನ್ ರೈ ಹೇಳಿದ್ದಾರೆ.
ʻʻನಾನು ಉಡುಪಿ ಮಠದ ಪೇಜಾವರ ಶ್ರೀಗಳು ಈ ಹಿಂದೆ ಹೇಳಿದ್ದನ್ನೆ ಪುನರುಚ್ಚರಿಸಿದ್ದೇನೆ. ಅವರು ಹೇಳಿದ ಮಾತನ್ನೇ ಪತ್ರಿಕೆಯಲ್ಲಿ ವರದಿ ಮಾಡಿದ್ದರು. ಅದನ್ನೇ ನಾನು ಉಲ್ಲೇಖಿಸಿದ್ದೇನೆ. ನಾನು ಯಾವುದೇ ತಪ್ಪು ಸಂದೇಶ ನೀಡಲು ಹೊರಟಿರಲಿಲ್ಲʼʼ ಎಂದಿರುವ ಅವರು, ತಪ್ಪಾಗಿದ್ರೆ ನಾನು ಕ್ಷಮಾಪಣೆ ಬೇಕಾದರೂ ಕೇಳುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…