ಮಂಗಳೂರು: ‘ವಿಧಾನಪರಿಷತ್ ಚುನಾವಣೆಯ ಅಭ್ಯರ್ಥಿ ಘೋಷಣೆಯಲ್ಲಿ ಬಿಜೆಪಿಯಿಂದ ಕರಾವಳಿಗೆ ಆದ ಭೌಗೋಳಿಕ ಅನ್ಯಾಯ, ಆಯ್ಕೆಯ ಮಾನದಂಡದಲ್ಲಾದ ವ್ಯತ್ಯಾಸದ ಕಾರಣಕ್ಕಾಗಿ ನಾನು ಕರ್ನಾಟಕ ನೈಋತ್ಯ ಪದವೀಧರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಯಾರನ್ನೂ ಸೋಲಿಸುವ ಉದ್ದೇಶ ನನ್ನಲ್ಲಿಲ್ಲ, ಬದಲಾಗಿ ಗೆದ್ದು, ಪದವೀಧರ ಕ್ಷೇತ್ರದ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡುತ್ತೇನೆ’ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಶಾಸಕ ಕೆ. ರಘುಪತಿ ಭಟ್ ಹೇಳಿದರು.
ಮಂಗಳೂರಿನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರಿಷತ್ ಸದಸ್ಯನಾಗಿ ಆಯ್ಕೆಯಾದರೆ ಪದವೀಧರ ಕ್ಷೇತ್ರಗಳಲ್ಲಿನ ಸಮಸ್ಯೆಗಳ ಪರಿಹಾರಕ್ಕಾಗಿ ಪೂರ್ತಿ ಸಮಯ ನೀಡಿ, ಆ ಸ್ಥಾನಕ್ಕೆ ನ್ಯಾಯ ನೀಡುವ ಕೆಲಸ ಮಾಡುತ್ತೇನೆ. ನಾನೇನು ಪಕ್ಷಕ್ಕೆ ದ್ರೋಹ ಮಾಡಿಲ್ಲ. ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಬೇಸರ, ನೋವಿನಿಂದ ಸ್ಪರ್ಧಿಸುತ್ತಿದ್ದೇನೆ’ ಎಂದರು.
‘ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವಾಗ ಬೂತ್ ಮಟ್ಟದಿಂದಲೇ ಹೆಸರು ಪಡೆದು, ಮಂಡಲದಲ್ಲಿ ಚರ್ಚೆಯಾಗಿ ಅಂತಿಮವಾಗಿ ಜಿಲ್ಲೆಯಿಂದ ಒಂದು ಹೆಸರು ಅಂತಿಮವಾಗಿ ರಾಜ್ಯದ ಮೂಲಕ ಕೇಂದ್ರಕ್ಕೆ ಕಳುಹಿಸಲಾಗುತ್ತಿತ್ತು. ಆದರೆ, ಈಗ ರಾಜ್ಯದಿಂದ ಹೋದ ಹೆಸರು ಕೇಂದ್ರದಲ್ಲಿ ಬದಲಾಗುತ್ತದೆ. ಈಗ ಕಾಂಗ್ರೆಸ್‌ನ ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ’ ಎಂದು ಆಕ್ರೋಶ ಹೊರ ಹಾಕಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…