ಬೆಂಗಳೂರು: ಬಿಜೆಪಿಗೆ ಯಾರಿಂದ ತೊಂದರೆಯಾಗುತ್ತಿದೆ, ಅಂತಹವರನ್ನು ನಿರ್ನಾಮ ಮಾಡುವ ಕೆಲಸ ನಡೆಯುತ್ತಿದೆ. ಒಂದೋ ಅವರೊಂದಿಗೆ ಹೋಗಬೇಕು ಇಲ್ಲವೇ ಅವರಿಗೆ ಶರಣಾಗಬೇಕು. ಚಾರ್ಜ್ ಶೀಟ್‌ನಿಂದ ಹೊಸದಾಗಿ ಏನೂ ಸೃಷ್ಟಿ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಕಾಯಾಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.
ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಸಿದೆ. ಈ ಹಿನ್ನೆಲೆ ಪ್ರತಿಕ್ರಿಯೆ ನೀಡಿದ ಅವರು ನ್ಯಾಯ, ನೀತಿ, ಸತ್ಯ, ಧರ್ಮ, ಕಾನೂನು ಎಲ್ಲದರಲ್ಲೂ ನನಗೆ ನಂಬಿಕೆ ಇದೆ. ನಾನು ತಪ್ಪು ಮಾಡಿಲ್ಲ ಎಂಬುದು ನನಗೆ ಗೊತ್ತಿದೆ. ನಾನು ಇದನ್ನು ಎದುರಿಸುತ್ತೇನೆ ಎಂದರು.
ಚಾರ್ಜ್ ಶೀಟ್ ಫೈಲ್ ಮಾಡಿರುವ ಬಗ್ಗೆ ನನಗೆ ಮಾಧ್ಯಮದಿಂದ ತಿಳಿಯಿತು. ನನಗೆ ಅದರ ಕಾಪಿ ಇನ್ನೂ ಸಿಕ್ಕಿಲ್ಲ. ಸಾಮಾನ್ಯವಾಗಿ 6 ತಿಂಗಳಲ್ಲಿ ಚಾರ್ಜ್ ಶೀಟ್ ಫೈಲ್ ಮಾಡುತ್ತಾರೆ. ನನ್ನ ಮೇಲೆ ಬಹಳ ದೊಡ್ಡ ತನಿಖೆ ನಡೆದಿದೆ. ಆದರೆ ಅವರು ಹೊಸದಾಗಿ ಏನನ್ನೂ ಸೃಷ್ಟಿಸಲು ಸಾಧ್ಯವಿಲ್ಲ. ನನಗೆ ಅದರ ಕಾಪಿ ಬರಲಿ. ಸತ್ಯ, ಧರ್ಮ, ಕಾನೂನು ಇರುವ ದೇಶದಲ್ಲಿ ಇದನ್ನೆಲ್ಲಾ ಎದುರಿಸುತ್ತೇನೆ ಎಂದರು.
ನಾನೇನೂ ತಪ್ಪು ಮಾಡಿಲ್ಲ ಎನ್ನುವುದು ರಾಜ್ಯಕ್ಕೆ, ದೇಶಕ್ಕೆ ಗೊತ್ತಿದೆ. ಆದರೆ ಬಿಜೆಪಿಯವರು ನನ್ನ ಮೇಲೆ ರಾಜಕೀಯದ ಎಲ್ಲಾ ಅಸ್ತ್ರಗಳನ್ನೂ ಉಪಯೋಗಿಸುತ್ತಿದ್ದಾರೆ ಎಂದು ಆರೋಪಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…