Featured

ನಾನೇ ಈಶ್ವರಪ್ಪನವರ ಮನೆಗೆ ಹೋಗುತ್ತೇನೆ ಅವರೇ ಗುಂಡು ಹೊಡೆಯಲಿ: ಡಿ.ಕೆ.ಸುರೇಶ್ – Vishwanews24

ನಾನೇ ಈಶ್ವರಪ್ಪನವರ ಮನೆಗೆ ಹೋಗುತ್ತೇನೆ ಅವರೇ ಗುಂಡು ಹೊಡೆಯಲಿ: ಡಿ.ಕೆ.ಸುರೇಶ್

ಬೆಂಗಳೂರು: ಬೇರೆಯವರು ಗುಂಡು ಹೊಡೆಯುವುದು ಬೇಡ. ಗುಂಡು ಹೊಡೆಯುವುದಾದರೆ ನಾನೇ ಈಶ್ವರಪ್ಪನವರ ಮನೆಗೆ ಹೋಗುತ್ತೇನೆ. ಅವರೇ ಗುಂಡು ಹೊಡೆಯಲಿ ಎಂದು ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಹುಶಃ ಇತಿಹಾಸ ನಿಮಗೆಲ್ಲಾ ಗೊತ್ತಿದೆ. ಮಹಾತ್ಮ ಗಾಂಧಿಯವರನ್ನ ಕೊಂದ ಪಕ್ಷ ಅವರದ್ದು. ನಾನೊಬ್ಬ ಸಣ್ಣ ವ್ಯಕ್ತಿ. ಕನ್ನಡಿಗರ ಪರವಾಗಿ ಮಾತನಾಡಿದ್ದಕ್ಕೆ‌ ಹೀಗೆ ಹೇಳಿರಬಹುದು. ಪಕ್ಷದಲ್ಲಿ ಅವರನ್ನ ಮೂಲೆ ಗುಂಪು ಮಾಡಿದ್ದಾರೆ. ಅದಕ್ಕೆ ಈಗ ಗಮನ ಸೆಳೆಯಲು ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ನಾನು ಡಿ.ಕೆ.ಸುರೇಶ್ ಗೆ ಗುಂಡು ಹೊಡೆಯಿರಿ ಅಂತ ಹೇಳಿಲ್ಲ ಎಂಬ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕನ್ನಡ, ಕರ್ನಾಟಕದ ಪರ ಧ್ವನಿ ಎತ್ತಿದ್ದಕ್ಕೆ ಗುಂಡಿಕ್ಕಿ ಕೊಲ್ಲಿ ಅಂತ ಹೇಳಿದ್ದಾರೆ ಎಂಬ ವರದಿ ಬರುತ್ತಿದೆ. ಬಿಜೆಪಿಯವರು ನಿಮ್ಮನ್ನು ಮೂಲೆಗುಂಪು ಮಾಡಿದ್ದಾರೆ ಅನಿಸತ್ತೆ. ಅದಕ್ಕೆ ಆಗಾಗ ಏನೇನೋ ಮಾತಾಡ್ತಿದ್ದೀರಿ. ಬೇರೆಯವರು ಯಾಕೆ ಗುಂಡಿಟ್ಟು‌ ಕೊಲ್ಲಬೇಕು, ದಯವಿಟ್ಟು ನೀವೇ ಆ ಆಸೆಯನ್ನು ಈಡೇರಿಸಿಕೊಳ್ಳಿ ಎಂದರು.

ನಿಮ್ಮ ನಾಯಕರಿಂದ ನೀವೇ ಶಬ್ಬಾಷ್ ಗಿರಿ ತೆಗೆದುಕೊಳ್ಳಿ. ನಾನೇ ಸಮಯ ಕೊಡ್ತೀನಿ ಒಂದು ವಾರದಲ್ಲಿ ಯಾವಾಗ ಅಂತ ಹೇಳ್ತೀನಿ. ನಾನೇ ಅವರ ಮನೆಗೆ ಹೋಗ್ತೀನಿ. ಅವರೇ ಗುಂಡು ಹೊಡೆಯಲಿ. ಈಶ್ವರಪ್ಪ ಅವರ ಮನೆಗೆ ನಾನೇ ಹೋಗ್ತೀನಿ ಅವರೇ ಗುಂಡು ಹೊಡೆಯಲಿ. ಬಡವರ ಮಕ್ಕಳನ್ನ ಹೇಳಿಕೆ ಮೂಲಕ ರೊಚ್ಚಿಗೆಬ್ಬಿಸುವುದು ಬೇಡ. ಅವರೇ ಆ ಕೆಲಸ ಮಾಡಲಿ. ಅಲ್ಲಿ ಇಲ್ಲಿ ಯಾಕೆ ಹುಡುಕುತ್ತೀರಾ..?, ನಾನೇ ನಿಮ್ಮ ಮನೆಗೆ ಬರುತ್ತೇನೆ. ಒಂದು ವಾರದಲ್ಲಿ ಸಮಯ ನಿಗದಿ ಮಾಡ್ತೀನಿ, ನಿಮ್ಮ ಭೇಟಿ ಮಾಡ್ತೀನಿ. ಸಿದ್ಧರಾಗಿ ಗುಂಡುಕ್ತೀರಾ, ಕೊಲ್ತೀರಾ ನೋಡೋಣ ಎಂದು ಡಿಕೆ ಸುರೇಶ್‌ ಸವಾಲೆಸೆದಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

9 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

9 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

10 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

10 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

10 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

10 hours ago