Featured

ನಾಮಪತ್ರ ಸಲ್ಲಿಸಿದ ಅರುಣ್ ಪುತ್ತಿಲ – ಮೆರವಣಿಗೆಯಲ್ಲಿ ಕೇಸರಿ ಕಲರವ , ಹತ್ತು ಸಾವಿರಕ್ಕೂ ಅಧಿಕ ಮಂದಿ ಭಾಗಿ   – Vishwanews24

ನಾಮಪತ್ರ ಸಲ್ಲಿಸಿದ ಅರುಣ್ ಪುತ್ತಿಲ – ಮೆರವಣಿಗೆಯಲ್ಲಿ ಕೇಸರಿ ಕಲರವ , ಹತ್ತು ಸಾವಿರಕ್ಕೂ ಅಧಿಕ ಮಂದಿ ಭಾಗಿ

ಪುತ್ತೂರು : ಸಂಘ ಪರಿವಾರದ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದು ಮೆರವಣಿಗೆಯಲ್ಲಿ ಹತ್ತು ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗುವ ಮೂಲಕ ಇತಿಹಾಸ ಸೃಷ್ಟಿಸಿತು.

ಮೆರವಣಿಗೆಯ ಮೊದಲು ಅರುಣ್ ಪುತ್ತಿಲ ಅವರು ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದರ್ಬೆಯಲ್ಲಿ ಶಂಖನಾದ, ಕಹಳೆ ಮೊಳಗುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಪುತ್ತೂರು ಸೇರಿದಂತೆ ಹಲವೆಡೆಯಿಂದ ಅಪಾರ ಸಂಖ್ಯೆಯಲ್ಲಿ ಬೆಂಬಲಿಗರು ನೆರೆದಿದ್ದರು. ಹಿಂದೂ ಮುಖಂಡ ದಿವಂಗತ ಮೂಲ್ಕಿ ಸುಖಾನಂದ ಶೆಟ್ಟಿ ಅವರ ಸಹೋದರ ಸಂತೋಷ್ ಶೆಟ್ಟಿ, ಲಕ್ಷ್ಮೀಶ ತಂತ್ರಿ ಅವರು ಕಹಳೆ ಊದಿ ಚಾಲನೆ ನೀಡಿದರು.

ಕೇಸರಿ ಶಾಲು ಧರಿಸಿದ ಸಾವಿರಾರು ಕಾರ್ಯಕರ್ತರು ಶಾಲು ಮೇಲೆತ್ತಿ ಬೀಸುವ ಮೂಲಕ ಅರುಣ್ ಪುತ್ತಿಲ ಅವರಿಗೆ ಸ್ವಾಗತ ಕೋರಿದರು. ಬ್ಯಾಂಡ್, ವಾದ್ಯದ ಮೂಲಕ ಮೆರವಣಿಗೆಯಲ್ಲಿ ಸಾಗಿ ಬಂದ ಪುತ್ತಿಲ ಅವರಿಗೆ ರಸ್ತೆಯುದ್ದಕ್ಕೂ ಹೂವಿನ ಹಾರ ಹಾಕಲಾಯಿತು. ದರ್ಬೆಯಿಂದ ಮುಖ್ಯ ರಸ್ತೆ ಮೂಲಕ‌ ಸಾಗಿ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

 ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ : ಕಾಪು ತಾಲೂಕು ಪಡುಬಿದ್ರಿ ಬೇಂಗ್ರೆ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಮಾಡಿಕೊಂಡಿದ್ದ ಕೂಲಿ…

2 minutes ago

ಕಾರ್ಕಳದಲ್ಲಿ ಕಾಂಗ್ರೆಸ್ ಪ್ರತಿಭಟನೆ: ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹ ; ಕಚೇರಿಗೆ ಮುತ್ತಿಗೆ ಯತ್ನ  -vishwanews24

ಕಾರ್ಕಳದಲ್ಲಿ ಕಾಂಗ್ರೆಸ್ ಪ್ರತಿಭಟನೆ: ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹ ; ಕಚೇರಿಗೆ ಮುತ್ತಿಗೆ ಯತ್ನ  ಕಾರ್ಕಳ: ಸಚಿವ ನಾಗೇಂದ್ರ ರಾಜೀನಾಮೆ…

24 minutes ago

ಅಯೋಧ್ಯೆ ರಾಮಮಂದಿರದ ಸಿಇಓ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರಾ ನೇಮಕ -vishwanews24

ಅಯೋಧ್ಯೆ ರಾಮಮಂದಿರದ ಸಿಇಓ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರಾ ನೇಮಕ ಲಕ್ನೋ: ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ…

42 minutes ago

ರಾಹುಲ್ ಗಾಂಧಿಯನ್ನ ರಾಜಕೀಯವಾಗಿ ಮುಗಿಸಲು ಬಿಜೆಪಿ ಸಂಚು ಮಾಡಿದೆ : ಸಿದ್ದರಾಮಯ್ಯ -vishwanews24

ರಾಹುಲ್ ಗಾಂಧಿಯನ್ನ ರಾಜಕೀಯವಾಗಿ ಮುಗಿಸಲು ಬಿಜೆಪಿ ಸಂಚು ಮಾಡಿದೆ : ಸಿದ್ದರಾಮಯ್ಯ ಬೆಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ…

52 minutes ago

ಕುಂದಾಪುರ: ಗಂಗೊಳ್ಳಿಯಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆ; 6 ಮೀನುಗಾರರ ರಕ್ಷಣೆ -vishwanews24

ಕುಂದಾಪುರ: ಗಂಗೊಳ್ಳಿಯಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆ; 6 ಮೀನುಗಾರರ ರಕ್ಷಣೆ ಕುಂದಾಪುರ : ಮೀನುಗಾರಿಕೆಗೆ ತೆರಳುತ್ತಿದ್ದ ಮೀನುಗಾರಿಕಾ ಬೋಟ್‌ವೊಂದು…

1 hour ago

ರಾಜ್ಯಾದ್ಯಂತ ಆಹಾರ ತಯಾರಿಕಾ ಕೇಂದ್ರಗಳ ತಪಾಸಣೆ: ನಿಯಮ ಮೀರಿದರೆ ಕಠಿಣ ಕ್ರಮದ ಎಚ್ಚರಿಕೆ -vishwanews24

ರಾಜ್ಯಾದ್ಯಂತ ಆಹಾರ ತಯಾರಿಕಾ ಕೇಂದ್ರಗಳ ತಪಾಸಣೆ: ನಿಯಮ ಮೀರಿದರೆ ಕಠಿಣ ಕ್ರಮದ ಎಚ್ಚರಿಕೆ ಮಂಗಳೂರು: ರಾಜ್ಯದಲ್ಲಿ ಆಹಾರ ಸುರಕ್ಷತೆ ಮತ್ತು…

5 hours ago