ಕಾಪು: ನಾಮ ಪತ್ರ ಸಲ್ಲಿಕೆಗೂ ಮುನ್ನ ಕಾಪು ಬಿಜೆಪಿ ಅಭ್ಯರ್ಥಿ ಕಾಪು ಮಾಜಿ ಶಾಸಕ ಲಾಲಜಿ ಆರ್ ಮೆಂಡನ್ ಕಾಪು ಲಕ್ಷ್ಮೀ ಜನಾರ್ದನ ದೇವಸ್ಥಾನ,ಹಾಗೂ ಕಾಪುವಿನ ಮೂರು ಮಾರಿಗುಡಿ ಮತ್ತು ಕಟಪಾಡಿ ಶ್ರೀ ವಿಶ್ವನಾಥನ ಸನ್ನಿಧಿಯಲ್ಲಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು.
ತದನಂತರ ಮಾಧ್ಯಮದವರೊಂದಿಗೆ ಮಾತನಾಡಿ” ರಾಜ್ಯದಲ್ಲಿ ಕಾಂಗ್ರೆಸ್ ಸಂಪೂರ್ಣ ಹದಗೆಟ್ಟು ಹೋಗಿದೆ, ಕಾಪುವಿನ ಶಾಸಕ ವಿನಯ್ ಕುಮಾರ್ ಸೊರಕೆ ಬಂಡವಾಳ ಶಾಹಿಗಳ ಪರ ಧ್ವನಿ ಎತ್ತುತ್ತಿದ್ದಾರೇ ಹೊರತು ಬಡವರ ಬಗ್ಗೆ ಒಂದಿಷ್ಟು ಕಾಳಜಿ ಇಲ್ಲದಂತಾಗಿದೆ. ಸೊರಕೆ ಸೂಟು ಬೂಟಿನ ನಾಟಕದ ರಾಜಕೀಯದಲ್ಲಿ ತೊಡಗಿದ್ದಾರೆ, ಶಾಶ್ವತ ಕುಡಿಯುವ ನೀರಿನ ಯೋಜನೆ ಕನಸಾಗಿಯೇ ಉಳಿದಿದೆ,ಪುರಸಭೆ ನಗರಾಭಿವೃದ್ದಿ ಪ್ರಾಧಿಕಾರದಿಂದ ಜನರಿಗೆ ಒಂದು ಪೈಸೆಯ ಲಾಭವಾಗದಿದ್ದರೂ ಅವರ ಚೇಳಗಳನ್ನು ಸಮಾಧಾನ ಪಡಿಸುವ ಉದ್ದೇಶವಾಗಿದೆ.” ಮತ್ತು ಗುರ್ಮೆ ಸುರೇಶ್ ಶೆಟ್ಟಿ ಪ್ರಚಾರಕ್ಕೆ ಬರುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು “ಗುರ್ಮೆಯವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ್ದೇನೆ ಮತ್ತು ಅವರು ನಮ್ಮ ಪಕ್ಷದ ನಾಯಕರು,ಮುಂದಿನ ದಿನದಲ್ಲಿ ಅವರಿಗೂ ಪಕ್ಷ ಉನ್ನತ ಸ್ಥಾನಮಾನ ನೀಡುವುದರಲ್ಲಿ ಯಾವುದೆ ಅನುಮಾನವಿಲ್ಲ ಮತ್ತು ಪ್ರಚಾರ ಕಾರ್ಯದಲ್ಲಿ ಅವರು ಸಕ್ರೀಯರಾಗಿ ಭಾಗವಹಿಸುವ ನಿರೀಕ್ಷೆಯಿದೆ, ಯಾವುದೇ ಗೊಂದಲ ಇಲ್ಲ ಎಂದರು.ಈ ಸಂದರ್ಭ ಬಿಜೆಪಿಯ ವಿವಿಧ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…