ಕಲಬುರಗಿ: ವಿವಿಧ ಕಡೆ ಬಿಜೆಪಿಯೇತರ ನಾಯಕರುಗಳನ್ನು ಬ್ಲಾಕ್‍ಮೇಲ್ ಮಾಡಲು ಭಾರತೀಯ ಜನತಾ ಪಕ್ಷ ಸಿಬಿಐ, ಐಟಿ, ಇಡಿ ಸೇರಿದಂತೆ ಎಲ್ಲಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಕಲಬುರಗಿಯಲ್ಲಿಂದು ಸುದ್ದಿಗಾರರದಿಗೆ ಮಾತನಾಡಿದ ಅವರು, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಪ್ಪಿತಸ್ಥರು ಎಂದು ಎಲ್ಲಿಯೂ ಕಂಡುಬಂದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ಥಿರಗೊಳ್ಳುತ್ತಿದೆ. ಹೀಗಾಗಿ ವಿರೋಧ ಪಕ್ಷಗಳನ್ನು ನಿಯಂತ್ರಣದಲ್ಲಿಡಬೇಕೆಂಬ ಕಾರಣಕ್ಕಾಗಿ ಕೇಂದ್ರ ಸರ್ಕಾರ ಸಂವಿಧಾನಿಕ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಈ ಮೂಲಕ ವಿರೋಧ ಪಕ್ಷಗಳನ್ನು ದುರ್ಬಲಗೊಳಿಸುವ ಪ್ರಯತ್ನ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೊಲೆ ಆರೋಪಿ ಪರ ಹೇಳಿಕೆ ಆಧಾರದ ಮೇಲೆ ಚಾರ್ಜ್ ಶೀಟ್ ಇಲ್ಲದೆಯೇ ರಾತ್ರೋರಾತ್ರಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ಬಂಧಿಸಿದರು ಎಂದು ದೂರಿದ ಪ್ರಿಯಾಂಕ್ ಖರ್ಗೆ ಅವರು, ಈ ರಾಜಕೀಯ ಹುನ್ನಾರಕ್ಕೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…