Featured

ನಾಯಕರುಗಳನ್ನು ಬ್ಲಾಕ್‍ಮೇಲ್ ಮಾಡಲು ಬಿಜೆಪಿ ಸರ್ಕಾರ ಎಲ್ಲಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ : ಪ್ರಿಯಾಂಕ್ ಖರ್ಗೆ -Vishwanews24

ಕಲಬುರಗಿ: ವಿವಿಧ ಕಡೆ ಬಿಜೆಪಿಯೇತರ ನಾಯಕರುಗಳನ್ನು ಬ್ಲಾಕ್‍ಮೇಲ್ ಮಾಡಲು ಭಾರತೀಯ ಜನತಾ ಪಕ್ಷ ಸಿಬಿಐ, ಐಟಿ, ಇಡಿ ಸೇರಿದಂತೆ ಎಲ್ಲಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಕಲಬುರಗಿಯಲ್ಲಿಂದು ಸುದ್ದಿಗಾರರದಿಗೆ ಮಾತನಾಡಿದ ಅವರು, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಪ್ಪಿತಸ್ಥರು ಎಂದು ಎಲ್ಲಿಯೂ ಕಂಡುಬಂದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ಥಿರಗೊಳ್ಳುತ್ತಿದೆ. ಹೀಗಾಗಿ ವಿರೋಧ ಪಕ್ಷಗಳನ್ನು ನಿಯಂತ್ರಣದಲ್ಲಿಡಬೇಕೆಂಬ ಕಾರಣಕ್ಕಾಗಿ ಕೇಂದ್ರ ಸರ್ಕಾರ ಸಂವಿಧಾನಿಕ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಈ ಮೂಲಕ ವಿರೋಧ ಪಕ್ಷಗಳನ್ನು ದುರ್ಬಲಗೊಳಿಸುವ ಪ್ರಯತ್ನ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೊಲೆ ಆರೋಪಿ ಪರ ಹೇಳಿಕೆ ಆಧಾರದ ಮೇಲೆ ಚಾರ್ಜ್ ಶೀಟ್ ಇಲ್ಲದೆಯೇ ರಾತ್ರೋರಾತ್ರಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ಬಂಧಿಸಿದರು ಎಂದು ದೂರಿದ ಪ್ರಿಯಾಂಕ್ ಖರ್ಗೆ ಅವರು, ಈ ರಾಜಕೀಯ ಹುನ್ನಾರಕ್ಕೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago