ಬೆಂಗಳೂರು: ಕಾಂಗ್ರೆಸ್ ನಾಯಕತ್ವದ ಕುರಿತು ರಾಷ್ಟ್ರಮಟ್ಟದಲ್ಲಿ ಅಪಸ್ವರ ಎದ್ದಿರುವ ಬೆನ್ನಲ್ಲೇ, ನಾಯಕತ್ವವನ್ನು ಟೀಕಿಸುತ್ತಿರುವ ಮುಖಂಡರ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದು, ‘ಈ ನಾಯಕರು ಪಕ್ಷವನ್ನು ಆಂತರಿಕವಾಗಿ ದುರ್ಬಲಗೊಳಿಸುತ್ತಿದ್ದಾರೆ’ ಎಂದು ಕಿಡಿ ಕಾರಿದ್ದಾರೆ.
‘ಪಕ್ಷದ ಕೆಲವು ನಾಯಕರು ಪಕ್ಷ ಮತ್ತು ನಮ್ಮ ನಾಯಕರ ವಿರುದ್ಧವೇ ಮಾತನಾಡಿರುವುದು ನೋವುಂಟು ಮಾಡಿದೆ’ ಕೆಪಿಸಿಸಿ ಕಚೇರಿಯಲ್ಲಿ ನಡೆದ ಇಂದಿರಾಗಾಂಧಿಯವರ ಜನ್ಮದಿನದ ಕಾರ್ಯಕ್ರಮದಲ್ಲಿ ಹೇಳಿದರು.
‘ಒಂದು ಕಡೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಮ್ಮ ಬೆನ್ನ ಹಿಂದಿವೆ. ಇನ್ನೊಂದು ಕಡೆ ಆಂತರಿಕ ಭಿನ್ನಾಭಿಪ್ರಾಯ ಮತ್ತು ಕಿತ್ತಾಟ ನಡೆದಿದೆ. ಪಕ್ಷವನ್ನು ಆಂತರಿಕವಾಗಿ ದುರ್ಬಲಗೊಳಿಸುತ್ತಾ ಹೋದರೆ ನಾವು ಮುನ್ನಡೆಯಲು ಸಾಧ್ಯವಿಲ್ಲ. ಪಕ್ಷದ ಸಿದ್ಧಾಂತ ನಾಶವಾದರೆ, ನಾವೆಲ್ಲ ನಾಶವಾಗುತ್ತೇವೆ’ ಎಂದು ಎಚ್ಚರಿಸಿದರು.
ಬಿಹಾರ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ಕಾರಣ ನಾಯಕತ್ವದ ಸಾಮರ್ಥ್ಯದ ಬಗ್ಗೆ ಪ್ರಶ್ನೆಗಳು ಎದ್ದಿರುವ ಬೆನ್ನಲ್ಲೇ ಖರ್ಗೆ ಅವರು ‘ಗಾಂಧಿ ಪರಿವಾರ’ವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.
‘ಗಾಂಧಿ ಪರಿವಾರ ಮತ್ತು ನಾಯಕತ್ವವನ್ನು ಟೀಕಿಸುತ್ತಿರುವವರು ತಾವಿರುವ ಪ್ರದೇಶದಲ್ಲಿ ಒಬ್ಬ ಕಾರ್ಪೋರೇಟರ್ ಅನ್ನು ಗೆಲ್ಲಿಸುವ ಶಕ್ತಿ ಹೊಂದಿಲ್ಲ. ಪಕ್ಷ ಸುಸ್ಥಿತಿಯಲ್ಲಿ ಇದ್ದಾಗ ಎಲ್ಲರೂ ಹೊಗಳುತ್ತಾರೆ. ಸೋತಾಗ ಅದಕ್ಕೆ ರಾಹುಲ್ ಗಾಂಧಿ, ಸೋನಿಯಾಗಾಂಧಿ ಕಾರಣರೆಂದು ಗೂಬೆ ಕೂರಿಸುತ್ತಾರೆ’ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…