Featured

ನಾಯಕರ ಹೆಸರಿನಲ್ಲಿ ಮತ ಕೇಳುವ ಬದಲು ಅಭಿವೃದ್ಧಿ ಆಧಾರದಲ್ಲಿ ಮತಯಾಚಿಸಿ ಭ್ರಷ್ಠಾಚಾರ ರಹಿತ ಆಡಳಿತ ನಡೆಸುತ್ತೇವೆ : ಜೆ.ಪಿ. ಹೆಗ್ಡೆ – Vishwanews24

ನಾಯಕರ ಹೆಸರಿನಲ್ಲಿ ಮತ ಕೇಳುವ ಬದಲು ಅಭಿವೃದ್ಧಿ ಆಧಾರದಲ್ಲಿ ಮತಯಾಚಿಸಿ ಭ್ರಷ್ಠಾಚಾರ ರಹಿತ ಆಡಳಿತ ನಡೆಸುತ್ತೇವೆ : ಜೆ.ಪಿ. ಹೆಗ್ಡೆ

ಚಿಕ್ಕಮಗಳೂರು: ನಾಯಕರ ಹೆಸರಿನಲ್ಲಿ ಮತ ಕೇಳುವ ಬದಲು ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಮತಯಾಚಿಸಿ ಭ್ರಷ್ಠಾಚಾರರಹಿತ ಆಡಳಿತ ನಡೆಸುತ್ತೇವೆ ಎಂದು ಜನರನ್ನು ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ. ಚುನಾವಣೆ ಬಾಂಡ್ ಹಗರಣದಿಂದ ಇವರ ಭ್ರಷ್ಠಾಚಾರದ ಬಗ್ಗೆ ಸುಪ್ರೀಂ ಕೋರ್ಟ್ ಬಯಲಿಗೆಳೆದಿರುವುದು ದೇಶಕ್ಕೆ ತಿಳಿದಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.

ತಾಲೂಕಿನ ಬಣಕಲ್, ಕಸಬಾ, ಗೋಣಿಬೀಡು, ಬಾಳೂರು ಹೋಬಳಿ ವ್ಯಾಪ್ತಿಯಲ್ಲಿ ಸೋಮವಾರ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ತಾವು ಸಂಸದರಾಗಿದ್ದಾಗ ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಅನುಮೋದನೆಯಾಗಿತ್ತು ಆದರೆ ನಂತರ 10 ವರ್ಷ ಕಳೆದರೂ ರಸ್ತೆ ಅಗಲೀಕರಣ ಮಾಡಲು ಬಿಜೆಪಿಯವರಿಗೆ ಸಾಧ್ಯವಾಗಲಿಲ್ಲ. ಅಲ್ಲದೇ ಹಿಂದಿನ ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಮಂತ್ರಿ ಕೂಡ ಆಗಿದ್ದರು ಇಲ್ಲಿನ ಕಾಫಿ ಬೆಳೆಗಾರರ ಸಮಸ್ಯೆ, ಅಡಕೆ ರೋಗ ನಿವಾರಣೆ ಸೇರಿದಂತೆ ರೈತರ ಹಾಗೂ ಜನರ ಸಮಸ್ಯೆ ನಿವಾರಿಸಲಿಲ್ಲ. ಪೆಟ್ರೋಲ್ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನ ನೆಮ್ಮದಿಯಿಂದ ಬದುಕದಂತೆ ಮಾಡಿದ್ದಾರೆ. ಯಾವುದೇ ಅಭಿವೃದ್ಧಿ ಹಾಗೂ ಜನಪರ ಯೋಜನೆ ರೂಪಿಸದೇ ಕೇವಲ ಮೋದಿ ಹೆಸರೇಳಿಕೊಂಡು ಪುನಃ ಮತ ಕೇಳಿದರೆ ಜನ ಬೆಂಬಲಿಸುತ್ತಾರೆಂಬ ಭ್ರಮೆಯಲ್ಲಿ ಬಿಜೆಪಿಯವರಿದ್ದಾರೆಂದು ದೂರಿದರು.

ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ಕಪ್ಪು ಹಣ ತಂದು ಎಲ್ಲರ ಅಕೌಂಟ್ ಗೆ 15 ಲಕ್ಷ ಹಾಕುತ್ತೇವೆಂದು ಇದುವರೆಗೂ ಹಾಕಿಲ್ಲ. ಆ ಕಪ್ಪು ಹಣ ಕಪ್ಪಾಗಿಯೇ ಉಳಿದಿದೆ. ಭ್ರಷ್ಟಾಚಾರ ರಹಿತ ಆಡಳಿತದ ಬಗ್ಗೆ ಮಾತನಾಡುವವರು ಚುನಾವಣೆ ಬಾಂಡ್ ಹಣಗರಣದಿಂದ ಇವರ ಭ್ರಷ್ಠಾಚಾರದ ಬಗ್ಗೆ ಸುಪ್ರಿಂಕೋರ್ಟ್ ಬಯಲಿಗೆಳೆದಿದೆ. ಉಜ್ವಲ ಯೋಜನೆಯಲ್ಲಿ ಉಚಿತ ಗ್ಯಾಸ್ ಯಾರಿಗೂ ಬರುತ್ತಿಲ್ಲ. ರಾಜ್ಯ ಸರಕಾರ 5 ಗ್ಯಾರಂಟಿ ನೀಡಿದಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಕೂಡ 5 ಗ್ಯಾರಂಟಿ ಘೋಷಿಸಿದೆ. ಇದರಿಂದ ಜನರ ಸಂಕಷ್ಠ ನಿವಾರಣೆಯಾಗುತ್ತದೆ ಅದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago