ರಾಜ್ಯ ನ್ಯೂಸ್

ನಾರಾಯಣಗುರುಗಳ ಪಠ್ಯವನ್ನು ಸಮಾಜ-ವಿಜ್ಞಾನ ವಿಷಯಕ್ಕೆ ಸೇರಿಸುವಂತೆ  ಶಿಕ್ಷಣ ಸಚಿವರಲ್ಲಿ  ಮನವಿ – Vishwanews24

ನಾರಾಯಣಗುರುಗಳ ಪಠ್ಯವನ್ನು ಸಮಾಜ-ವಿಜ್ಞಾನ ವಿಷಯಕ್ಕೆ ಸೇರಿಸುವಂತೆ  ಶಿಕ್ಷಣ ಸಚಿವರಲ್ಲಿ  ಮನವಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರೊಂದಿಗೆ ಸಚಿವರಾದ ವಿ ಸುನಿಲ್ ಕುಮಾರ್ ರವರು ಶಿಕ್ಷಣ ಸಚಿವರಾದ ಬಿಸಿ ನಾಗೇಶ್ ರವರನ್ನು ಭೇಟಿ ಮಾಡಿ ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯವನ್ನು ಸಮಾಜ-ವಿಜ್ಞಾನ ವಿಷಯಕ್ಕೆ ಸೇರಿಸುವಂತೆ ಮನವಿ ಮಾಡಿದರು.

ಈ ಬಾರಿ ಪಠ್ಯ ಪುಸ್ತಕದಲ್ಲಿ ಬ್ರಹ್ಮಶ್ರೀ ಗುರುನಾರಾಯಣ ಗುರುಗಳ ಕುರಿತಂತೆ ಅಳವಡಿಸಲಾಗಿದ್ದ ವಿಷಯಗಳ ಬಗ್ಗೆ, ಗೊಂದಲಗಳು ನಿರ್ಮಾಣವಾಗಿದ್ದು, ಈ ಕುರಿತು ಹಲವರು ನಮ್ಮ ಬಳಿ ಚರ್ಚೆಯನ್ನು ಮಾಡಿರುತ್ತಾರೆ. ಬ್ರಹ್ಮ ಶ್ರೀ ನಾರಾಯಣಗುರುಗಳ ವಿಷಯಗಳು ಈ ಹಿಂದೆ ಸಮಾಜ ವಿಜ್ಞಾನ ವಿಷಯದಲ್ಲಿ ಇದ್ದು, ಅದನ್ನು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದರು. ಈ ವರ್ಷದಿಂದ ಅದನ್ನು ಕನ್ನಡ ವಿಷಯಕ್ಕೆ ವರ್ಗಾಯಿಸಲಾಗಿದೆ. ಕನ್ನಡ ವಿಷಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯವನ್ನು ಸೇರಿಸಿರುವುದರ ಬಗೆ ಹಲವು ಆಕ್ಷೇಪಣೆಗಳು ವ್ಯಕ್ತವಾಗುತ್ತಿವೆ. ಕಾರಣ ಕನ್ನಡದ ಬದಲು ಸಮಾಜ ವಿಜ್ಞಾನದಲ್ಲಿದ್ದರೆ ಎಲ್ಲಾ ವಿದ್ಯಾರ್ಥಿಗಳು ಅಭ್ಯಾಸ ಮಾಡುವುದಕ್ಕೆ ಸಾಧ್ಯವಾಗುತ್ತದೆ ಮತ್ತು ಅದು ಸರ್ವ ಸಮ್ಮತವಾಗಿರುತ್ತದೆ ಎಂಬುದು ವಿವಿಧ ಸಂಘಟನೆಗಳ ಹಾಗೂ ರಾಜ್ಯದ ಗಣ್ಯರ ಅಭಿಪ್ರಾಯವಾಗಿದೆ. ಕನ್ನಡ ಭಾಷಾ ವಿಷಯವನ್ನು ಎಲ್ಲರೂ ಅಭ್ಯಾಸ ಮಾಡಲು ಸಾಧ್ಯವಿಲ್ಲ. ಇದರಿಂದಾಗಿ ಬೇರೆ ಭಾಷಾ ಮಾಧ್ಯಮದ ವಿದ್ಯಾರ್ಥಿಗಳು ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯದಿಂದ ವಂಚಿತರಾಗಲಿದ್ದಾರೆ.

ಈ ಹಿನ್ನೆಲೆಯಲ್ಲಿ ಎಲ್ಲಾ ಭಾಷಾ ಮಾಧ್ಯಮದ ವಿದ್ಯಾರ್ಥಿಗಳಿಗೆ ನಾರಾಯಣಗುರುಗಳ ತತ್ವ ಆದರ್ಶಗಳು ತಿಳಿಯಬೇಕೆಂದಾದಲ್ಲಿ ಸಮಾಜ ವಿಜ್ಞಾನ ವಿಷಯಕ್ಕೆ ಸೇರಿಸುವುದು ಸೂಕ್ತವೆಂಬುದು ನಾಡಿನ ಅನೇಕ ಶೈಕ್ಷಣಿಕ ತಜ್ಞರ ಹಾಗೂ ಹಿರಿಯರ ಒತ್ತಾಸೆಯಾಗಿದೆ. ಆದುದರಿಂದ, ಬ್ರಹ್ಮ, ಶ್ರೀ ನಾರಾಯಣಗುರುಗಳ ಪಠ್ಯವನ್ನು ಸಮಾಜ ವಿಜ್ಞಾನ ವಿಷಯಕ್ಕೆ ವರ್ಗಾಯಿಸಲು ಅದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳಬೇಕೆಂದು ಸಚಿವರು ಮನವಿಯಲ್ಲಿ ವಿನಂತಿಸಿದ್ದಾರೆ

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

18 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

18 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

18 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

19 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

19 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago