ಬೆಂಗಳೂರು: ನಟ, ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಒಂದಲ್ಲ, ಎರಡಲ್ಲ ಬರೋಬ್ಬರಿ ನಾಲ್ಕು ವೋಟರ್ ಐಡಿ ಹೊಂದಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ದೂರು ದಾಖಲಾಗಿದೆ.
ದೂರು ನೀಡಿದ ವಕೀಲ ಅರುಣ್, ನಟ ಪ್ರಕಾಶ ರಾಜ್ ನಾಮಪತ್ರ ರದ್ದುಗೊಳಿಸುವಂತೆ ಬೆಂಗಳೂರು ಕೇಂದ್ರ ಆರ್ಒ ಅವರಿಗೂ ದೂರು ನೀಡಿದ್ದು, ಅವರು ನಾಲ್ಕು ಕಡೆ ವೋಟರ್ ಐಡಿ ಹೊಂದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ವೋಟರ್ ಐಡಿ ಹೊಂದುವುದು ಕಾನೂನು ಪ್ರಕಾರ ಅಪರಾಧ. ಕೂಡಲೇ ಅವರ ಉಮೇದುವಾರಿಕೆಯನ್ನು ರದ್ದು ಮಾಡಬೇಕು ಎಂದು ವಕೀಲರಾದ ಜಗನ್ ಕುಮಾರ್ ಆಯೋಗಕ್ಕೆ ಮನವಿ ಮಾಡಿದ್ದಾರೆ.
ಬೆಂಗಳೂರನ ಶಾಂತಿನಗರ, ತಮಿಳನಾಡಿನ ವೇಲಚ್ಚೇರಿಯಲ್ಲಿ ಎರಡು ಕಡೆ ಹಾಗೂ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ, ಒಟ್ಟು ನಾಲ್ಕು ಭಾಗದಲ್ಲಿ ವೋಟರ್ ಐಡಿಯನ್ನು ನಟ ಪ್ರಕಾಶ ರೈ ಹೊಂದಿದ್ದಾರೆ. ಎಲ್ಲಾ ಕಡೆಯಲ್ಲೂ ಪ್ರಕಾಶ್ ರಾಜ್ s/o ಮಂಜುನಾಥ್ ರೈ ಅಂತಲೇ ಇದ್ದು, ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ವಕೀಲ ಅರಣ್ ದೂರಿನಲ್ಲಿ ಒತ್ತಾಯಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…