Featured

ನಾಲ್ಕು ಚಕ್ರದ ವೈಯಕ್ತಿಕ ವಾಹನವಿದ್ದು ಬಿಪಿಎಲ್‌ ಕಾರ್ಡ್‌ ಹೊಂದಿದ್ದರೆ ದಂಡ ವಸೂಲಿ – Vishwanews24

ನಾಲ್ಕು ಚಕ್ರದ ವೈಯಕ್ತಿಕ ವಾಹನವಿದ್ದು ಬಿಪಿಎಲ್‌ ಕಾರ್ಡ್‌ ಹೊಂದಿದ್ದರೆ ದಂಡ ವಸೂಲಿ

ಬೆಂಗಳೂರು: ಬಿಪಿಎಲ್ ಕಾರ್ಡ್ ಅಕ್ರಮವನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಇದೀಗ ನಾಲ್ಕು ಚಕ್ರ ವಾಹನಗಳನ್ನು ಹೊಂದಿರುವಂತ ಬಿಪಿಎಲ್ ಪಡಿತರ ಚೀಟಿದಾರರ ಮಾಹಿತಿಯನ್ನು ಕಲೆ ಹಾಕುತ್ತಿದ್ದು, ಅಂತಹ ವ್ಯಕ್ತಿಗಳಿಗೆ ದಂಡವನ್ನು ಹಾಕೋದಕ್ಕಾಗಿ ಪಟ್ಟಿಯನ್ನು ತಯಾರಿಸುತ್ತಿದೆ ಎಂಬುದಾಗಿ ಹೇಳಲಾಗುತ್ತಿದೆ. ಈ ಮೂಲಕ ನಾಲ್ಕು ಚಕ್ರಗಳ ವಾಹನ ಹೊಂದಿ, ಅಂತ್ಯೋದಯ ಆಹಾರ ಪಡಿತರ ಕಾರ್ಡ್ ಹೊಂದಿರೋರಿಗೆ ಶಾಕ್ ನೀಡೋದಕ್ಕೆ ಮುಂದಾಗಿದೆ.

ಏನಿದು ಅನರ್ಹತೆ? :
ನಾಲ್ಕು ಚಕ್ರಗಳ ವಾಹನ ಹೊಂದಿರುವವರು ಅಂತ್ಯೋದಯ, ಬಿಪಿಎಲ್‌ ಪಡಿತರ ಚೀಟಿ ಹೊಂದಿದ್ದರೆ, ಅಂಥವರು ದಂಡ ರಹಿತವಾಗಿ 2019ರ ಸೆ.3ರೊಳಗೆ ಆಯಾ ತಾಲೂಕು ಕಚೇರಿಯ ಆಹಾರ ಶಾಖೆಗೆ ತೆರಳಿ ಪಡಿತರ ಚೀಟಿ ವಾಪಸ್‌ ಕೊಟ್ಟು, ರದ್ದು ಮಾಡಿಸುವಂತೆ ಸರ್ಕಾರ ಸೂಚನೆ ನೀಡಿತ್ತು. ಬಳಿಕ ಅವಧಿಯನ್ನು ಅ.15ರ ತನಕ ವಿಸ್ತರಿಸಿತು. ಹೀಗೆ ಒಟ್ಟು ನಾಲ್ಕಾರು ಬಾರಿ ಸರೆಂಡರ್‌ಗೆ ಅವಕಾಶ ನೀಡಲಾಗಿತ್ತು. ಆದರೂ ರದ್ದು ಮಾಡದೇ ಸೌಲಭ್ಯ ಪಡೆಯುತ್ತಿರುವ ಅನರ್ಹ ಪಡಿತರ ಚೀಟಿದಾರರಿಗೆ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗಿದೆ.

ಅನರ್ಹರಿಗೆ ನೋಟಿಸ್‌ :

ನಾಲ್ಕು ಚಕ್ರಗಳ ವಾಹನ ಹೊಂದಿರುವ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರ ಕುಟುಂಬಗಳ ಮಾಹಿತಿ ನೀಡುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಸಾರಿಗೆ ಇಲಾಖೆಯನ್ನು ಕೋರಿತ್ತು. ಇಲಾಖೆಯು ಅಂಥವರ ಪಟ್ಟಿ ಸಿದ್ಧಪಡಿಸಿ ಮಾಹಿತಿ ನೀಡಿದೆ. ಅದರ ಅನ್ವಯ ಆಯಾ ತಾಲೂಕು ಕಚೇರಿಯ ಆಹಾರ ಶಿರಸ್ತೇದಾರ/ನಿರೀಕ್ಷಕರಿಗೆ ಅನರ್ಹ ಪಡಿತರ ಚೀಟಿದಾರರ ಪಟ್ಟಿ ಕಳುಹಿಸಲಾಗಿದೆ. ನಿಯಮ ಉಲ್ಲಂ ಸಿದವರಿಗೆ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿದ್ದಾರೆ. ದಾಖಲೆಗಳು, ಹೆಸರಿನ ವ್ಯತ್ಯಾಸ ಗೊಂದಲ ಇದ್ದಲ್ಲಿ ಸ್ಥಳ ಪರಿಶೀಲಿಸುವ ಅಧಿಕಾರವನ್ನು ನೀಡಲಾಗಿದ್ದು, ಅನರ್ಹರು ದಂಡ ಪಾವತಿಸಲೇ ಬೇಕಿದೆ.

ಮೂರು ದಿನ ಕಾಲಾವಕಾಶ:
ನೋಟಿಸ್‌ ತಲುಪಿದ 3 ದಿನಗಳ ಒಳಗೆ ಕಾರ್ಡುದಾರ ತಾಲೂಕು ಕಚೇರಿಯ ಆಹಾರ ವಿಭಾಗಕ್ಕೆ ಹಾಜರಾಗಬೇಕು. ಅಲ್ಲಿ ಪಾವತಿಸಬೇಕಾದ ದಂಡದ ಮೊತ್ತವನ್ನು ತಿಳಿಸಲಾಗುತ್ತದೆ. ದಂಡ ಮೊತ್ತವನ್ನು ಸರ್ಕಾರದ ಟ್ರೆಜರಿಗೆ ಪಾವತಿಸಬೇಕಾದ ಕಾರಣ ಚಲನ್‌ ನೀಡಲಾಗುತ್ತದೆ. ಬ್ಯಾಂಕ್‌ನಲ್ಲಿ ದಂಡ ಮೊತ್ತ ಕಟ್ಟಿದ ರಶೀದಿಯನ್ನು ಪುನಃ ಆಹಾರ ನಿರೀಕ್ಷಕರಿಗೆ ನೀಡಬೇಕು. ಬಳಿಕ ಅಂತ್ಯೋದಯ ಅಥವಾ ಬಿಪಿಎಲ್‌ ಕಾರ್ಡನ್ನು ಎಪಿಎಲ್‌ ಆಗಿ ಪರಿವರ್ತಿಸಲಾಗುತ್ತದೆ. ರಶೀದಿ ಒಪ್ಪಿಸುವ ತನಕ ಕಾರ್ಡನ್ನು ಅಮಾನತಿನಲ್ಲಿಡಲಾಗುತ್ತದೆ.

ಮಾರುಕಟ್ಟೆ ಮೌಲ್ಯ ಆಧರಿಸಿ ದಂಡ:
ಪಡಿತರ ಚೀಟಿದಾರ ವಾಹನ ಖರೀದಿಸಿದ ದಿನಾಂಕ, ಪಡಿತರ ಚೀಟಿ ನೋಂದಣಿ ಆದ ದಿನಾಂಕವನ್ನು ಇಲಾಖೆಯು ವೆಬ್‌ಸೈಟ್‌ನಲ್ಲಿ ಗಮನಿಸುತ್ತದೆ. ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಮೊದಲೇ ವಾಹನ ಹೊಂದಿದ್ದರೆ ಆತ ಸುಳ್ಳು ಮಾಹಿತಿ ನೀಡಿ ಕಾರ್ಡ್‌ ಪಡೆದಿದ್ದಾನೆ ಎಂದರ್ಥ. ಅಂಥವರಿಗೆ ದಂಡ ಹೆಚ್ಚಿರುತ್ತದೆ. ಪಡಿತರ ಚೀಟಿ ಆದ ಬಳಿಕ ವಾಹನ ಖರೀದಿಸಿದ್ದರೆ, ವಾಹನ ಪಡೆದ ದಿನದಿಂದ ದಂಡ ಅನ್ವಯ ಆಗುತ್ತದೆ. ಕಾರ್ಡುದಾರ ಈ ತನಕ ಪಡೆದಿರುವ ಪಡಿತರ ಸಾಮಗ್ರಿಗೆ ಈಗಿನ ಮಾರುಕಟ್ಟೆ ಮೌಲ್ಯ ಆಧರಿಸಿ ದಂಡ ಕಟ್ಟಬೇಕು. ಅಂದರೆ ಪಡಿತರ ಇಲಾಖೆಯಿಂದ 1 ರೂ.ಗೆ ಅಕ್ಕಿ ಪಡೆಯುತ್ತಿದ್ದರೆ ಈಗಿನ ಮಾರುಕಟ್ಟೆ ಮೌಲ್ಯ ಕೆ.ಜಿ.ಗೆ 28 ರೂ. ಎಂದು ಪರಿಗಣಿಸಬಹುದು. ಆರಂಭದಿಂದ ಈ ತನಕ ಪಡೆದ ಪಡಿತರ ಸಾಮಗ್ರಿಗೆ ಈಗಿನ ಮಾರುಕಟ್ಟೆ ಮೌಲ್ಯ ಪ್ರಕಾರವೇ ದಂಡ ಪಾವತಿಸಬೇಕು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago