ನವದೆಹಲಿ: ಸ್ವಚ್ಛ ಭಾರತ ಅಭಿಯಾನದ ಮೂಲಕ ನಾಲ್ಕು ವರ್ಷದಲ್ಲಿ 9 ಕೋಟಿ ಶೌಚಗೃಹ ನಿರ್ಮಾಣವಾಗಿದೆ. 4.5 ಲಕ್ಷ ಹಳ್ಳಿಗಳು ಬಯಲುಶೌಚ ಸಮಸ್ಯೆಯಿಂದ ಮುಕ್ತವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಸ್ವಚ್ಛ ಭಾರತ ಅಭಿಯಾನಕ್ಕೆ 4 ವರ್ಷವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಆಯೋಜಿಸಿದ್ದ ವಿಡಿಯೋ ಕಾನ್ಫೆರೆನ್ಸ್ನಲ್ಲಿ ಮಾತನಾಡಿ, ಸ್ವಚ್ಛತೆಯಿಂದ ಆರೋಗ್ಯಕರ ಭಾರತ ನಿರ್ಮಾಣ ಸಾಧ್ಯವಾಗುವುದರ ಜತೆ ಭಾರತದ ಆರ್ಥಿಕ ಅಭಿವೃದ್ಧಿ ಸಾಧ್ಯ. ಶೌಚಗೃಹ ಹೆಚ್ಚಳದಿಂದ ಇನ್ನೂ ಹೆಚ್ಚಿನ ಸ್ವಚ್ಛತೆ ಸಾಧ್ಯವಾಗುತ್ತದೆ ಎಂದರು.
ಗಾಂಧಿ ಕನಸು ನನಸಾಗಿಸುವುದೇ ನಮ್ಮ ಆದ್ಯತೆ. ಸ್ವಚ್ಛತೆ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವುದು ಅಗತ್ಯ. ಪ್ರವಾಸಿತಾಣಗಳಲ್ಲಿ ಸ್ವಚ್ಛತೆಗೆ ಆದ್ಯತೆ ಸಿಗಬೇಕು ಎಂದರು.
ಸ್ವಚ್ಛತಾ ಆಂದೋಲದ ಮೂಲಕವೇ ಇಚ್ಟು ಶೌಚಗೃಹ ನಿರ್ಮಾಣ ಸಾಧ್ಯವಾಗಿದೆ. ಈಗ ಅನೈರ್ಮಲ್ಯದಿಂದ ದೇಶದಲ್ಲಿ ಸಾವಿನ ಸಂಖ್ಯೆ ಇಳಿಕೆಯಾಗಿದೆ. ಹಾಗಾಗಿ ಸ್ವಚ್ಛ ಭಾರತ ಪರಿಣಾಮಕಾರಿ ಆಂದೋಲನವಾಗಬೇಕು. ಈ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಿ ಎಂದು ಮನವಿ ಮಾಡಿದರು.
ಇದೇ ವೇಳೆ ‘ಸ್ವಚ್ಛತೆಯೇ ಭಾರತ್’ (Swachchata Hi Bharath) ಅಭಿಯಾನಕ್ಕೆ ಚಾಲನೆ ನೀಡಿದರು. ಸಂವಾದದಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್, ಉದ್ಯಮಿ ರತನ್ ಟಾಟಾ ಕೂಡ ಪಾಲ್ಗೊಂಡಿದ್ದರು.
ಅಮಿತಾಬ್ ಪ್ರಶಂಸೆ
ಪ್ರಧಾನಿ ಮೋದಿ ಅವರ ಸ್ವಚ್ಛತಾ ಆಂದೋಲಕ್ಕೆ ಅಮಿತಾಬ್ ಪ್ರಶಂಸೆ ವ್ಯಕ್ತಪಡಿಸಿದ್ದು, ಸ್ವಚ್ಛತೆಗಾಗಿ ನೀವೇನೇ ಹೇಳಿದರೂ ಮಾಡಲು ಸಿದ್ಧ ಎಂದು ಭರವಸೆ ನೀಡಿದ್ದಾರೆ.
ಸ್ವಚ್ಛತಾ ಅಭಿಯಾನಕ್ಕೆ ಯೋಧರ ಸಾಥ್
ಯೋಧರ ವಿಷಯದಲ್ಲಿ ನಾವು ಏನೇ ಹೇಳಿದರೂ ಕಡಿಮೆ ಎಂದ ಪ್ರಧಾನಿ, ಭಾರತವನ್ನು ಸಂಕಷ್ಟದಿಂದ ಮುಕ್ತಿಗೊಳಿಸಲು ಹೋರಾಟ ಮಾಡುತ್ತಿದ್ದೀರ. ನೀವು ಯಾವಾಗಲೂ ದೇಶದ ಒಳಿತಿಗಾಗಿ ಹೋರಾಡುತ್ತೀರಿ. ಸ್ವಚ್ಛತಾ ಆಂದೋಲನದಲ್ಲೂ ನೀವು ಸಾಥ್ ನೀಡಿದ್ದೀರಿ. ನಿಮ್ಮ ಕಾರ್ಯವನ್ನು ನೋಡಲು ನಾನು ಬರುತ್ತೇನೆ ಎಂದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…