ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ತಿರುಗಾಟ ಡಿಸೆಂಬರ್ 7ರಂದು ಆರಂಭವಾಗಲಿದೆ. ಸಂಜೆ 5.15ಕ್ಕೆ ದೇವಸ್ಥಾನದಲ್ಲಿ ತಾಳಮದ್ದಳೆ ನಡೆಯಲಿದೆ. ಸಂಜೆ 6.45ಕ್ಕೆ ಕಲಾವಿದರಿಗೆ ಗೆಜ್ಜೆ ಹಸ್ತಾಂತರ, ರಾತ್ರಿ 8.30ಕ್ಕೆ ಚೌಕಿ ಪೂಜೆ ಬಳಿಕ ಆರು ರಂಗಸ್ಥಳಗಳಲ್ಲಿ ಏಕಕಾಲಕ್ಕೆ ಪೂರ್ವರಂಗ ಪ್ರದರ್ಶನ, 10.30ಕ್ಕೆ ಪಾಂಡವಾಶ್ವಮೇಧ ಯಕ್ಷಗಾನ ಬೆಳಗ್ಗಿನವರೆಗೆ ನಡೆಯಲಿದೆ ಎಂದು ಕಟೀಲು ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಈ ಬಾರಿ ಅಧಿಕಮಾಸದ ಕಾರಣ ತಿರುಗಾಟ ತಡವಾಗಿ ಆರಂಭವಾಗುತ್ತಿದ್ದು, ಮೇ 25ರತನಕ 167 ದಿನಗಳ ಯಕ್ಷಗಾನದ ತಿರುಗಾಟ ನಡೆಯಲಿದೆ. ಆಸ್ರಣ್ಣರು ಕಲಾವಿದರಿಗೆ ಗೆಜ್ಜೆ ಕೊಡುವ ಮೂಲಕ ತಿರುಗಾಟ ಆರಂಭವಾಗಲಿದ್ದ, ಅದಕ್ಕೂ ಮುನ್ನ ದೇವರ ಎದುರು ಮೇಳದ ದೇವರು, ಆಭರಣ, ಆಯುಧ, ಇತ್ಯಾದಿಗಳನ್ನು ಇಟ್ಟು ಪೂಜೆ ನಡೆಯಲಿದೆ ಎಂದು ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ ಹೇಳಿದ್ದಾರೆ.
ಈ ವರುಷ ಆರು ಮೇಳಗಳಿಂದ ಒಟ್ಟು 1002 ಸೇವೆಯಾಟಗಳು ಪ್ರದರ್ಶಿತವಾಗಲಿವೆ. ಪ್ರತಿ ವರ್ಷ 450 ಆಟಗಳು ಕಾಯಂ ಇದ್ದ ಕಾರಣ ಸುಮಾರು 550 ಆಟಗಳನ್ನು ಮಾತ್ರ ನೀಡಲು ಸಾಧ್ಯವಾಗಿದೆ. ಕಳೆದ ವರ್ಷ 774 ಹೊಸ ಆಟಗಳು ಬುಕಿಂಗ್ ಆಗಿವೆ ಎಂದು ಅವರು ತಿಳಿಸಿದ್ದಾರೆ. ವರ್ಷಂಪ್ರತಿ ಮೇಳದ ಉಡುಗೆ, ಮಣಿಸಾಮಾನು, ಪರಿಕರಗಳನ್ನು ರಿಪೇರಿ ಮಾಡಲಾಗುತ್ತಿದ್ದು, ಈ ಬಾರಿ ವೇಷ ಭೂಷಣಗಳನ್ನು ಹೊಸದಾಗಿ ತಯಾರಿಸಿದ್ದು, ಮಣಿ ಸಾಮಾನುಗಳಲ್ಲದೆ ಕಿರೀಟ ಮತ್ತಿತರ ಸಾಮಾಗ್ರಿ ಹೊಸದಾಗಿ ಸಿದ್ಧವಾಗಿವೆ. ಐದಾರು ಕಲಾವಿದರು ಹೊಸದಾಗಿ ಮೇಳಗಳಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮೇಳಕ ಸಂಚಾಲಕ ಕಲ್ಲಾಡಿ ದೇವೀಪ್ರಸಾದ ಶೆಟ್ಟಿ ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…