ಬೆಂಗಳೂರು: ಕಾಂಗ್ರೆಸ್ ನನ್ನ ಪ್ರಮುಖ ಶತ್ರುವಲ್ಲ. ನನ್ನ ಮತ್ತು ಸಿದ್ದರಾಮಯ್ಯನವರ ನಡುವೆ ಹೋರಾಟ ಇರಬಹುದು. ಆದರೆ, ಅವರು ನನ್ನ ಶತ್ರುವಲ್ಲ. ನಮ್ಮ ಸರ್ಕಾರ ಪತನಕ್ಕೆ ಕಾರಣವಾದ 15 ಶಾಸಕರು ಚುನಾವಣೆಯಲ್ಲಿ ಸೋಲಬೇಕು. ಎಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
14 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿ ಮಾತನಾಡಿರುವ ಎಚ್.ಡಿ. ಕುಮಾರಸ್ವಾಮಿ, ನನಗೆ ಬಿಜೆಪಿ ಮೇಲೆ ವ್ಯಾಮೋಹ ಇಲ್ಲ. ಕಾಂಗ್ರೆಸ್ ಮೇಲೂ ವ್ಯಾಮೋಹವಿಲ್ಲ. ಆ ಎರಡೂ ಪಕ್ಷಗಳಿಗೆ ಬೇಕಾಗಿದ್ದಾಗ ನಮ್ಮ ಮೇಲೆ ವ್ಯಾಮೋಹ ಬರುತ್ತದೆ. ನಮ್ಮ ಸರ್ಕಾರ ಬೀಳಲು ಅನರ್ಹ ಶಾಸಕ ಡಾ. ಸುಧಾಕರ್ ಕಾರಣ. ಈಗ ಅವರೇ ನನ್ನ ಭೇಟಿ ಮಾಡಲು ಕಾಯುತ್ತಿದ್ದಾರೆ. ಕುಮಾರಸ್ವಾಮಿ ನನಗೆ ಆತ್ಮೀಯ, ಅವರ ಮೇಲೆ ನನಗೆ ಸಿಟ್ಟಿಲ್ಲ ಅಂತಿದ್ದಾರೆ. ಸುಧಾಕರ್ ಅವರ ಇತಿಹಾಸವೇನೆಂದು ನನಗೆ ಗೊತ್ತಿದೆ. ನನ್ನ ಬಗ್ಗೆ ಏನೆಲ್ಲ ಮಾತಾಡಿದ್ದಾನೆ ಎಂಬುದು ಕೂಡ ಗೊತ್ತಿದೆ. ಈಗ ಇದ್ದಕ್ಕಿದ್ದಂತೆ ಅವರಿಗೆ ನನ್ನ ನೆನಪಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ನಾನು ನಾಳೆಯಿಂದ ಚುನಾವಣಾ ಅಖಾಡಕ್ಕೆ ಇಳಿಯುತ್ತೇನೆ. ನಾನು ರಾಜಕೀಯಕ್ಕೆ ಸುಮ್ಮನೆ ಬಂದವನಲ್ಲ. ಆರಂಭದಿಂದಲೂ ಹೋರಾಟ ಮಾಡಿಕೊಂಡೇ ಬಂದಿದ್ದೇನೆ. ಯಾವ ಪಕ್ಷದವರು ಏನು ಮಾಡಿದ್ದಾರೆ ಎಂದು ಚರ್ಚೆ ಮಾಡೋಣ. ನಮ್ಮದು ಸಣ್ಣ ಪಕ್ಷ ಇರಬಹುದು. ಆದರೆ, ನಮ್ಮ ಪಕ್ಷವನ್ನು ಬುಡಸಮೇತ ಕೀಳೋದಕ್ಕೆ ಯಾರಿಂದಲೂ ಆಗೋದಿಲ್ಲ. ಅದರ ಮೂಲ ಎಲ್ಲಿದೆ ಅಂತ ಅವರಿಗೆ ಗೊತ್ತಿದೆ. ಆ ಕಾರಣದಿಂದಲೇ ಅಂತಹ ಪ್ರಯತ್ನ ಮಾಡುವುದು ಅಷ್ಟು ಸುಲಭವಲ್ಲ ಎಂದು ಅವರಿಗೆ ಅರ್ಥವಾಗಿದೆ ಎಂದು ಎಚ್ಡಿಕೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…