Featured

ನಾಳೆಯಿಂದ ಚುನಾವಣಾ ಅಖಾಡಕ್ಕೆ ಇಳಿಯುತ್ತೇನೆ, ನಮ್ಮ ಸರ್ಕಾರ ಪತನಕ್ಕೆ ಕಾರಣವಾದ 15 ಶಾಸಕರು ಸೋಲಬೇಕು : ಕುಮಾರಸ್ವಾಮಿ -Vishwanews24

ಬೆಂಗಳೂರು: ಕಾಂಗ್ರೆಸ್ ನನ್ನ ಪ್ರಮುಖ ಶತ್ರುವಲ್ಲ. ನನ್ನ ಮತ್ತು ಸಿದ್ದರಾಮಯ್ಯನವರ ನಡುವೆ ಹೋರಾಟ ಇರಬಹುದು. ಆದರೆ, ಅವರು ನನ್ನ ಶತ್ರುವಲ್ಲ. ನಮ್ಮ ಸರ್ಕಾರ ಪತನಕ್ಕೆ ಕಾರಣವಾದ 15 ಶಾಸಕರು ಚುನಾವಣೆಯಲ್ಲಿ ಸೋಲಬೇಕು.  ಎಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

14 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿ ಮಾತನಾಡಿರುವ ಎಚ್​.ಡಿ. ಕುಮಾರಸ್ವಾಮಿ, ನನಗೆ ಬಿಜೆಪಿ ಮೇಲೆ ವ್ಯಾಮೋಹ ಇಲ್ಲ. ಕಾಂಗ್ರೆಸ್ ಮೇಲೂ ವ್ಯಾಮೋಹವಿಲ್ಲ. ಆ ಎರಡೂ ಪಕ್ಷಗಳಿಗೆ ಬೇಕಾಗಿದ್ದಾಗ ನಮ್ಮ ಮೇಲೆ ವ್ಯಾಮೋಹ ಬರುತ್ತದೆ. ನಮ್ಮ ಸರ್ಕಾರ ಬೀಳಲು ಅನರ್ಹ ಶಾಸಕ ಡಾ. ಸುಧಾಕರ್ ಕಾರಣ. ಈಗ ಅವರೇ ನನ್ನ ಭೇಟಿ ಮಾಡಲು ಕಾಯುತ್ತಿದ್ದಾರೆ. ಕುಮಾರಸ್ವಾಮಿ ನನಗೆ ಆತ್ಮೀಯ, ಅವರ ಮೇಲೆ ನನಗೆ ಸಿಟ್ಟಿಲ್ಲ ಅಂತಿದ್ದಾರೆ. ಸುಧಾಕರ್ ಅವರ ಇತಿಹಾಸವೇನೆಂದು ನನಗೆ ಗೊತ್ತಿದೆ. ನನ್ನ ಬಗ್ಗೆ ಏನೆಲ್ಲ ಮಾತಾಡಿದ್ದಾನೆ ಎಂಬುದು ಕೂಡ ಗೊತ್ತಿದೆ. ಈಗ ಇದ್ದಕ್ಕಿದ್ದಂತೆ ಅವರಿಗೆ ನನ್ನ ನೆನಪಾಗಿದೆ ಎಂದು  ವ್ಯಂಗ್ಯವಾಡಿದ್ದಾರೆ.

ನಾನು ನಾಳೆಯಿಂದ ಚುನಾವಣಾ ಅಖಾಡಕ್ಕೆ ಇಳಿಯುತ್ತೇನೆ. ನಾನು ರಾಜಕೀಯಕ್ಕೆ ಸುಮ್ಮನೆ ಬಂದವನಲ್ಲ. ಆರಂಭದಿಂದಲೂ ಹೋರಾಟ ಮಾಡಿಕೊಂಡೇ ಬಂದಿದ್ದೇನೆ. ಯಾವ ಪಕ್ಷದವರು ಏನು ಮಾಡಿದ್ದಾರೆ ಎಂದು ಚರ್ಚೆ ಮಾಡೋಣ. ನಮ್ಮದು ಸಣ್ಣ ಪಕ್ಷ ಇರಬಹುದು. ಆದರೆ, ನಮ್ಮ ಪಕ್ಷವನ್ನು ಬುಡಸಮೇತ ಕೀಳೋದಕ್ಕೆ ಯಾರಿಂದಲೂ ಆಗೋದಿಲ್ಲ. ಅದರ ಮೂಲ ಎಲ್ಲಿದೆ ಅಂತ ಅವರಿಗೆ ಗೊತ್ತಿದೆ. ಆ ಕಾರಣದಿಂದಲೇ ಅಂತಹ ಪ್ರಯತ್ನ ಮಾಡುವುದು ಅಷ್ಟು ಸುಲಭವಲ್ಲ ಎಂದು ಅವರಿಗೆ ಅರ್ಥವಾಗಿದೆ ಎಂದು ಎಚ್​ಡಿಕೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago