Featured

ನಾಳೆಯಿಂದ ಹಾಸನಾಂಬೆ ಉತ್ಸವ ; ದೇವಿಯ ದರ್ಶನ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ – vishwanews24

ನಾಳೆಯಿಂದ ಹಾಸನಾಂಬೆ ಉತ್ಸವ ; ದೇವಿಯ ದರ್ಶನ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ

ಹಾಸನ, : ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನೋತ್ಸವ ನಾಳೆಯಿಂದ ಆರಂಭಗೊಳ್ಳಲಿದೆ. ಅಕ್ಟೋಬರ್​ 9ರಿಂದ 23ರವರೆಗೆ ಹಾಸನಾಂಬೆ ಉತ್ಸವ ನಡೆಯಲಿದ್ದು, ಅ.10ರಿಂದ 22ರ ತನಕ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರಲಿದೆ. ಜಾತ್ರಾಮಹೋತ್ಸವಕ್ಕೆ ಅಗತ್ಯ ತಯಾರಿಯನ್ನ ಜಿಲ್ಲಾಡಳಿತ ಈಗಲೇ ಕೈಗೊಂಡಿದ್ದು, ದೇವಿಯ ದರ್ಶನ ವಿಚಾರದಲ್ಲಿ ಈ ಬಾರಿ ಒಂದಿಷ್ಟು ಬದಲಾವಣೆ ಮಾಡಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಸುಗಮ ದರ್ಶನಕ್ಕೆ ಭಕ್ತರಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಸಾಮಾನ್ಯ ದರ್ಶನಕ್ಕೆ ಒಂದು ಸಾಲು, ಟಿಕೆಟ್ ಖರೀದಿಸಿ ಬರುವವರಿಗಾಗಿ ಎರಡು ಸಾಲು ಮತ್ತು ಶಿಷ್ಟಾಚಾರಕ್ಕೆ ಒಂದು ಸರತಿ ಸಾಲಿನ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 10.30ರಿಂದ 12.30 ರವರೆಗೆ ಮಾತ್ರ ವಿಐಪಿಗಳಿಗೆ ದರ್ಶನಕ್ಕೆ ಅವಕಾಶವಿರಲಿದೆ. ಗಣ್ಯರ ಜೊತೆ ಬರುವ ನಾಲ್ವರಿಗೆ ಮಾತ್ರ ಶಿಷ್ಟಾಚಾರದ ಅಡಿ ದರ್ಶನಕ್ಕೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ. ದೇವಿ ದರ್ಶನಕ್ಕೆ ಬರುವ ಗಣ್ಯರು ಮೊದಲೇ ಮಾಹಿತಿ ನೀಡಿ ಬರಬೇಕು. ನಿಗದಿತ ಸಮಯದ ನಂತರ ಶಿಷ್ಟಾಚಾರ ಕೌಂಟರ್ ಬಂದ್ ಮಾಡಲಾಗುತ್ತದೆ. ವಿಐಪಿಗಳು ತಮ್ಮ ವಾಹನಗಳನ್ನು ಐಬಿಯಲ್ಲಿ ನಿಲ್ಲಿಸಿ, ಜಿಲ್ಲಾಡಳಿತದ ವಾಹನದಲ್ಲಿ ದೇವಾಲಯಕ್ಕೆ ಹೋಗಬೇಕು ಎಂದು ಡಿಸಿ ತಿಳಿಸಿದ್ದಾರೆ.

ಗೋಲ್ಡ್ ಕಾರ್ಡ್‌ ಪಡೆದು ಬರುವವರಿಗೂ ಸಮಯದ ಪರಿಮಿತಿ ನೀಡಲಾಗಿದ್ದು, ಬೆಳಿಗ್ಗೆ 7.30ರಿಂದ 10 ಗಂಟೆಯವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಉಳಿದ ಸಮಯದಲ್ಲಿ ಸಾಮಾನ್ಯ ಭಕ್ತರಿಗೆ ದರ್ಶನ ಇರುತ್ತದೆ. ಕುಡಿಯುವ ನೀರು, ಮಜ್ಜಿಗೆ ಸೇರಿ ಆರೋಗ್ಯ ಇಲಾಖೆ, ಅಗ್ನಿಶಾಮಕದಳ, ಪೊಲೀಸ್ ಇಲಾಖೆ ಒಳಗೊಂಡಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಹಾಸನಾಂಬೆ ದರ್ಶನಕ್ಕೆ ಬರುವವರಿಗಾಗಿ ಆನ್‌ಲೈನ್ ಬುಕ್ಕಿಂಗ್, ವಾಟ್ಸ್ಯಾಪ್​ ಚಾಟ್‌ಬಾಟ್ ಪರಿಚಯಿಸಲಾಗಿದೆ. ಎಐ ಟೆಕ್ನಾಲಜಿ ಮೂಲಕ ದೇವಿ ದರ್ಶನದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಬಹುದು. ಜಾತ್ರೆ ಪ್ರಯುಕ್ತ ವಸ್ತು ಪ್ರದರ್ಶನ, ಡಾಗ್ ಶೋ, ಪಾಕ ಸ್ಪರ್ಧೆ, ಹೆಲಿ ಟೂರಿಸಂ, ಫಲಪುಷ್ಪ ಪ್ರದರ್ಶನಗಳನ್ನು ಏರ್ಪಡಿಸಲಾಗಿದೆ. ಹನ್ನೆರಡು ಟೂರ್ ಪ್ಯಾಕೇಜ್​ ಗಳನ್ನ ಪರಿಚಯಿಸಿರೋದಾಗಿ ಎಂದು ಕೆ.ಎಸ್. ಲತಾಕುಮಾರಿ ಹೇಳಿದ್ದಾರೆ.

ಡ್ರೆಸ್​ ಕೋಡ್​ ನಿಗದಿ

ಈ ಬಾರಿ‌ ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ಜಿಲ್ಲಾಡಳಿತ ಡ್ರೆಸ್ ಕೋಡ್ ನಿಗದಿಪಡಿಸಿದೆ. ದೇವಾಲಯಕ್ಕೆ ಬರುವ ಭಕ್ತರು ಸಾಂಪ್ರದಾಯಿಕ ಉಡುಗೆಯಲ್ಲಿ ಬಂದು ದೇವಿ ದರ್ಶನ ಮಾಡಬೇಕು ಎಂದು ಡಿಸಿ ಮನವಿ ಮಾಡಿದ್ದಾರೆ.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

8 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

9 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

9 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

9 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

9 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

11 hours ago