ಸಾಫ್ಟ್ವೇರ್ ಅಪ್ಡೇಟ್ ಹಿನ್ನೆಲೆ ಎಸ್ಕಾಂಗಳಲ್ಲಿ 10 ದಿನಗಳ ಕಾಲ ಎಲ್ಲ ಅನ್ಲೈನ್ ಸೇವೆಗಳು ಸ್ಥಗಿತಗೊಳ್ಳಲಿದೆ ಅಂತ ಇಂಧನ ಇಲಾಖೆ ಪ್ರಕಟಣೆ ಹೊರಡಿಸಿದೆ. ಅದರಂತೆ ಬೆಸ್ಕಾಂ, ಜೆಸ್ಕಾಂ, ಸೆಸ್ಕ್, ಮೆಸ್ಕಾಂ, ಹೆಸ್ಕಾಂನಲ್ಲಿ ಆನ್ಲೈನ್ ಸೇವೆಗಳು ಸಿಗುವುದಿಲ್ಲ ಎಂದು ಈ ಮೂಲಕ ತಿಳಿಸಲಾಗಿದೆ.
ಮಾರ್ಚ್ 10 ರಿಂದ 19 ರವರೆಗೆ ರಾಜ್ಯದ ಎಲ್ಲ ಎಸ್ಕಾಂಗಳ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಕೆ ಸೇರಿ ಯಾವ ಆನ್ಲೈನ್ ಸೇವೆಗಳು ಲಭ್ಯವಿರೋದಿಲ್ಲ. ಆದರೆ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಮಾಡಲ್ಲ. ನಿರಂತರವಾಗಿ ವಿದ್ಯುತ್ ನೀಡಲಾಗುತ್ತದೆ. ಸಾಫ್ಟ್ ವೇರ್ ಅಪ್ಗ್ರೇಡ್ ಸಂದರ್ಭದಲ್ಲಿ ವಿದ್ಯುತ್ ಪಾವತಿ ಮಾಡೋದಕ್ಕೆ ಕಷ್ಟ ಆಗಬಹುದು.
ಆದರೆ ಆ ಸಂದರ್ಭ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದಿಲ್ಲ ಎಂದು ಇಂಧನ ಇಲಾಖೆ ಮಾಹಿತಿ ನೀಡಿದೆ. ಸರ್ವರ್ ಅಪ್ ಗ್ರೇಡ್ ಆರಂಭವಾದ ಬಳಿಕ ಸ್ಥಿರಗೊಳ್ಳಲು 15 ದಿನಗಳ ಕಾಲಾವಕಾಶ ಇರುತ್ತದೆ. ಹೀಗಾಗಿ ಈ ವೇಳೆ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಇದಕ್ಕೆ ಗ್ರಾಹಕರು ಸಹಕರಿಸಬೇಕು ಎಂದು ಇಲಾಖೆ ಮನವಿ ಮಾಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…