ನವದೆಹಲಿ: ನಾಳೆಯಿಂದ 2000 ರೂಪಾಯಿಗಳ ನೋಟುಗಳನ್ನು ಬದಲಾಯಿಸಿಕೊಳ್ಳುವುದಕ್ಕೆ ಆರಂಭಗೊಳ್ಳಲಿದೆ. ಸಾರ್ವಜನಿಕರು ಬ್ಯಾಂಕ್ ಗಳಲ್ಲಿ 2000 ಮುಖಬೆಲೆಯ ನೋಟುಗಳನ್ನು ಬದಲಾಯಿಸಿಕೊಳ್ಳುವುದಕ್ಕೆ ಯಾವುದೇ ನಮೂನೆಯ ಅರ್ಜಿ ಭರ್ತಿ ಮಾಡುವ ಅಗತ್ಯವಿಲ್ಲ.ಅಲ್ಲದೇ ಐಡಿ ಕಾರ್ಡ್ ಕೂಡ ಕೊಡಬೇಕಾಗಿಲ್ಲ.
ಭಾರತೀಯ ರಿಸರ್ವ್ ಬ್ಯಾಂಕ್ 2 ಸಾವಿರ ನೋಟುಗಳನ್ನು ಹಿಂಪಡೆದ ಬಳಿಕ, ಅಂತಹ ನೋಟುಗಳ ಬದಲಾವಣೆ ಪ್ರಕ್ರಿಯೆ ನಾಳೆಯಿಂದ ಆರಂಭಗೊಳ್ಳಲಿದೆ. ನೋಟುಗಳ ವಿನಿಮಯ ಅಥವಾ ಠೇವಣಿಗೆ ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಅಲ್ಲದೇ ಗುರುತಿನ ಚೀಟಿ ಸೇರಿದಂತೆ ಯಾವುದೇ ದಾಖಲೆಗಳನ್ನು ತೋರಿಸುವ ಅಗತ್ಯವಿರುವುದಿಲ್ಲ.
2 ಸಾವಿರ ಮುಖಬೆಲೆಯ ನೋಟುಗಳ ವಿನಿಮಯಕ್ಕೆ ಹಲವು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದವು. ಇದಕ್ಕೆ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯ ಸ್ಪಷ್ಟೀಕರಣದ ಮಾಹಿತಿ ಬಿಡುಗಡೆ ಮಾಡಿದೆ. ಅದರಂತೆ ಮೇ.23ರಿಂದ ಆರಂಭವಾಗಲಿರುವ 2000 ನೋಟುಗಳ ವಿನಿಮಯ, ಠೇವಣಿಗೆ ನಮೂನೆಯನ್ನು ಭರ್ತಿ ಮಾಡುವುದು, ಗುರುತಿನ ಚೀಟಿ ಯಾವುದರ ಅಗತ್ಯವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ.
ಅಂದಹಾಗೇ 2000 ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಆರ್ ಬಿ ಐ ಮೇ.19ರಂದು ಆದೇಶ ಹೊರಡಿಸಿದೆ. ಮೇ.23ರಿಂದ ಸೆಪ್ಟೆಂಬರ್ 30, 2023ರ ಒಳಗಾಗಿ ಸಾರ್ವಜನಿಕರು 2000 ಮುಖಬೆಲೆಯ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳುವುದಕ್ಕೆ ಅವಕಾಶ ಕಲ್ಪಿಸಿದೆ. ನಾಳೆಯಿಂದ ಎಲ್ಲಾ ಬ್ಯಾಂಕ್ ಶಾಖೆಗಳಲ್ಲಿ ನೋಟುಗಳ ವಿನಿಮಯ ಆರಂಭವಾಗಲಿದೆ.
ಒಂದು ಬಾರಿಗೆ 20,000ರೂವರೆಗೆ ವಿನಿಮಯ ಮಾಡಿಕೊಳ್ಳಬೇಕು. 2000 ನೋಟುಗಳ ಠೇವಣಿಗೆ ಗರಿಷ್ಠ ಮಿತಿ ನಿಗದಿಪಡಿಸಿರುವುದಿಲ್ಲ. ಕರೆನ್ಸಿ ವಿನಿಮಯ ಉಚಿತವಾಗಿದ್ದು, ಯಾವುದೇ ಶುಲ್ಕ ಪಾವತಿಯ ಅಗತ್ಯವಿರುವುದಿಲ್ಲ. ಅರ್ಜಿ ಭರ್ತಿಮಾಡಿಕೊಡುವುದಾಗಲೀ, ಐಡಿ ಕಾರ್ಡ್ ಸಲ್ಲಿಸುವ ಅಗತ್ಯವೂ ಇರುವುದಿಲ್ಲ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…