Featured

ನಾಳೆಯಿಂದ 9 ದಿನ  ಹಾಸನಾಂಬ ದೇವಿ ದರ್ಶನಕ್ಕೆ ಅವಕಾಶ , ಆನ್​​ಲೈನ್​ ಬುಕ್ಕಿಂಗ್​ ಲಭ್ಯ – vishwanews24

ನಾಳೆಯಿಂದ ಹಾಸನಾಂಬ ದೇಗುಲ ಬಾಗಿಲು ಓಪನ್​, 9 ದಿನ ದರ್ಶನಕ್ಕೆ ಅವಕಾಶ , ಆನ್​​ಲೈನ್​ ಬುಕ್ಕಿಂಗ್​ ಲಭ್ಯ

ಹಾಸನ: ಹಾಸನಾಂಬ ದೇಗುಲದ ಬಾಗಿಲನ್ನು ಗುರುವಾರ ರಂದು ತೆರೆಯಲಾಗುತ್ತದೆ. ನವೆಂಬರ್ 3ರವರೆಗು ಮಾತ್ರ ದೇಗುಲದ ಬಾಗಿಲು ತೆರೆದಿರುತ್ತದೆ. ವರ್ಷದಿಂದ ವರ್ಷಕ್ಕೆ ಹಲವು ಆಕರ್ಷಣೆಗಳೊಂದಿಗೆ ಗಮನ ಸೆಳೆಯುತ್ತಿರುವ ಹಾಸನಾಂಬೆ ಉತ್ಸವದಲ್ಲಿ ಈ ವರ್ಷ ದಸರಾ ಮಾದರಿಯ ದೀಪಾಲಂಕಾರ, ಇದೇ ಮೊದಲಬಾರಿಗೆ ಫಲಪುಷ್ಪ ಪ್ರದರ್ಶನ, ಹಾಟ್ ಏರ್ ಬಲೂನ್, ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ಅಕ್ಟೋಬರ್ 24ರ ಗುರುವಾರ ಮದ್ಯಾಹ್ನ 12 ಗಂಟೆಗೆ ದೇಗುಲದ ಗರ್ಭಗುಡಿ ಬಾಗಿಲು ತೆರೆಯುತ್ತದೆ. ಕಳೆದ ಬಾರಿ 14 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದರು. ಈ ವರ್ಷ ಸುಮಾರು 20 ರಿಂದ 25 ಲಕ್ಷ ಭಕ್ತರು ಬರುವ ನಿರೀಕ್ಷೆಯಲ್ಲಿ ಜಿಲ್ಲಾಡಳಿತ ಇದ್ದು, ಇದಕ್ಕಾಗಿ ಭರ್ಜರಿ ತಯಾರಿ ನಡೆಸಿದೆ. ದೇಗುಲವನ್ನು ಆಕರ್ಷಕವಾಗಿ ಅಲಂಕಾರ ಮಾಡಲಾಗಿದ್ದು ದೇಗುಲದ ಆವರಣದಲ್ಲಿ ಭಕ್ತರ ದರ್ಶನಕ್ಕಾಗಿ ಸರತಿ ಸಾಲುಗಳ ಬ್ಯಾರಿಕೇಡ್, ಸಾಂಪ್ರದಾಯಿಕ ಮಾದರಿಯ ಮಾಡೆಲ್​ಗಳು, ಮಳೆ, ಬಿಸಿಲಿನಿಂದ ರಕ್ಷಣೆಗಾಗಿ ಜ್ಮನ್ ಟೆಂಟ್ ಮತ್ತು ದೊನ್ನೆ ಪ್ರಸಾದ ವಿತರಣೆಗೂ ವ್ಯವಸ್ಥೆ ಮಾಡಲಾಗಿದೆ.

ವರ್ಷದಿಂದ ವರ್ಷಕ್ಕೆ ಹಲವು ವಿಶೇಷತೆಗಳನ್ನು ಒಳಗೊಂಡು ನಡೆಯುತ್ತಿರುವ ಹಾಸನಾಂಬೆ ದೇವಿ ಹಾಗೂ ಸಿದ್ದೇಶ್ವರಸ್ವಾಮಿ ಜಾತ್ರಾಮಹೋತ್ಸವದಲ್ಲಿ ಈ ಬಾರಿ ನಗರದಲ್ಲಿ ಮೈಸೂರು ದಸರಾ ಮಾದರಿಯ ಚಿತ್ತಾಕರ್ಷಕ ಲೈಟಿಂಗ್ ಮಾಡಲಾಗಿದೆ. ಲೈಟಿಂಗ್ ವೀಕ್ಷಣೆಗೆ ಡಬಲ್ ಡೆಕ್ಕರ್ ಬಸ್ ಇರಲಿದೆ.

“ಬರುವ ಭಕ್ತರ ಗಮನ ಸೆಳೆಯಲು ಹಾಟ್ ಏರ್ ಬಲೂನ್ ಸಂಚಾರ, ಪ್ಯಾರಾ ಗ್ಲೈಡಿಂಗ್, ರಾಜ್ಯಮಟ್ಟದ ಸಮೂಹ ನೃತ್ಯ ಸ್ಪರ್ಧೆ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕಳೆದ ವರ್ಷ ಆದ ಕೆಲ ಲೋಪಗಳನ್ನು ಸರಿಪಡಿಸಿಕೊಂಡು, ಈ ವರ್ಷ ಅದ್ಧೂರಿ ಹಬ್ಬ ಆಚರಣೆಗೆ ತಯಾರಿ ಮಾಡಿಕೊಂಡಿದ್ದೇವೆ. ಹಾಸನಾಂಬ ಆ್ಯಪ್​, ದರ್ಶನಕ್ಕೆ ಆನ್ಲೈನ್ ಬುಕ್ಕಿಂಗ್ ವ್ಯವಸ್ಥೆ ಸೇರಿ ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಒಟ್ಟಿನಲ್ಲಿ ನಾಡಿನ ಮೂಲೆ ಮೂಲೆಯಿಂದ ಬರುವ ಭಕ್ತರಿಗಾಗಿ ಸಕಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ” ಎಂದು ಜಿಲ್ಲಾದಿಕಾರಿ ಸಿ ಸತ್ಯಭಾಮ ಹೇಳಿದರು.

ಹಾಸನದಲ್ಲಿ ಹುತ್ತದ ರೂಪದಲ್ಲಿ ನೆಲೆಸಿರುವ ಶಕ್ತಿದೇವತೆ ಹಾಸನಾಂಬೆ ದೇಗುಲದಲ್ಲಿ ದೇವಿ ದರ್ಶನ ಸಿಗುವುದು ವರ್ಷಕ್ಕೆ ಒಮ್ಮೆ ಮಾತ್ರ. ಪ್ರತೀ ವರ್ಷ ಅಶ್ವಯುಜ ಮಾಸದ ಅಷ್ಟಮಿಯ ಗುರುವಾರ ದೇಗುಲದ ಬಾಗಿಲು ತೆರೆಯಲಾಗುತ್ತೆ. ಈ ವರ್ಷ ಅಕ್ಟೋಬರ್ 24ರ ಮದ್ಯಾಹ್ನ ದೇಗುಲದ ಬಾಗಿಲು ತೆರೆದರೆ ನವೆಂಬರ್ 3ಕ್ಕೆ ಮದ್ಯಾಹ್ನ 12ಕ್ಕೆ ಗರ್ಭಗುಡಿ ಬಾಗಿಲನ್ನು ಮುಚ್ಚಲಾಗುತ್ತೆ.

ಒಟ್ಟು 11 ದಿನ ದೇಗುಲದ ಬಾಗಿಲು ತೆರೆದಿರಲಿದೆ. ಆದರೆ 9 ದಿನಗಳು ಮಾತ್ರ ಭಕ್ತರ ದರ್ಶನಕ್ಕೆ ಅವಕಾಶ ಸಿಗಲಿದೆ. ದಿನದ 24 ಗಂಟೆಗಳೂ ಕೂಡ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಭಕ್ತರಿಗೆ ದರ್ಶನಕ್ಕೆ ಬೇಕಾದ ವಿಶೇಷ ವ್ಯವಸ್ಥೆ ಮಾಡಲಾಗಿದೆ.

ನೇರ ದರ್ಶನ ಪಡೆಯ ಬಯಸುವ ಭಕ್ತರಿಗೆ 1000 ರೂ. ಟಿಕೆಟ್ 300 ರೂ. ಟಿಕೆಟ್ ಹಾಗೂ ವಿಶೇಷ ಗಣ್ಯರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಹಾಗೂ ಸಾಮಾನ್ಯ ಭಕ್ತರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

“ಈ ವರ್ಷ ಮೊದಲದಿನ ಬಾಗಿಲು ತೆರೆದ ನಂತರ ದೇಗುಲ ಶುದ್ದಿ ಮಾಡಲಾಗುತ್ತೆ. ಮರುದಿನ ಬೆಳಿಗ್ಗೆಯಿಂದ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಇರುತ್ತೆ. ದೇವಿಗೆ ಒಟ್ಟು ನಾಲ್ಕು ಬಾರಿ ಬೇರೆ ಬೇರೆ ರೀತಿಯ ವಿಶಿಷ್ಟ ಅಲಂಕಾರ, ವಸ್ತ್ರಧಾರಣೆ ಮಾಡಲಾಗುತ್ತದೆ. ಈ ನಡುವೆ ನೈವೇದ್ಯದ ಸಂದರ್ಭ ಹೊರತು ಪಡಿಸಿ ದಿನದ 24 ಗಂಟೆಯೂ ದರ್ಶನಕ್ಕೆ ಅವಕಾಶವಿರುತ್ತದೆ” ಎಂದು ದೇಗುಲದ ಪ್ರಧಾನ ಅರ್ಚಕರು ಮಾಹಿತಿ ನೀಡಿದರು.

ವರ್ಷದಿಂದ ವರ್ಷಕ್ಕೆ ಹಾಸನಾಂಬ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆ ಏರುತ್ತಲೇ ಇದೆ. ಹಾಸನಾಂಬೆ ದೇಗುಲಕ್ಕೆ ಈ ವರ್ಷ ಬರೊಬ್ಬರಿ 20 ರಿಂದ 25 ಲಕ್ಷ ಸಂಖ್ಯೆ ಭಕ್ತರು ಬರುವ ಸಾಧ್ಯತೆ ಇದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago