Featured

ನಾಳೆಯಿಂದ `KPTCL’ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ : ರಾಜ್ಯಾದ್ಯಂತ ವಿದ್ಯುತ್ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ – Vishwanews24

ನಾಳೆಯಿಂದ `KPTCL’ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ : ರಾಜ್ಯಾದ್ಯಂತ ವಿದ್ಯುತ್ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ಪವರ್ ಟ್ರಾನ್ಸ್ ಮಿಷನ್ ಕಾರ್ಪೋರೇಷನ್ ಲಿಮಿಟೆಡ್ ಮತ್ತು ರಾಜ್ಯದ ಎಲ್ಲ ಐದು ವಿದ್ಯುತ್ ಸರಬರಾಜು ಕಂಪನಿಗಳ ಮುಷ್ಕರರು ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದು, ರಾಜ್ಯಾದ್ಯಂತ ವಿದ್ಯುತ್ ಸಂಬಂಧಿತ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ವೇತನ ಪರಿಷ್ಕರಣೆ ಹೆಚ್ಚಿಸುವಂತೆ ಆಗ್ರಹಿಸಿ ಕವಿಪ್ರನಿ ನೌಕರರ ಸಂಘ ಮತ್ತು ಸಂಸ್ಥೆಗಳ ಒಕ್ಕೂಟ ನೀಡಿದ್ದ ಮುಷ್ಕರದ ನೋಟೀಸ್ ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದೇ ಇರುವ ಹಿನ್ನಲೆಯಲ್ಲಿ ಅನಿವಾರ್ಯವಾಗಿ ನಿಗದಿಯಂತೆ ಮಾರ್ಚ್ 16 ರಿಂದ ಸಾಮೂಹಿಕವಾಗಿ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ತಮ್ಮ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಕವಿಪ್ರನಿ ನೌಕರರ ಸಂಘ ಮತ್ತು ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರಾದ ಆರ್. ಹೆಚ್. ಲಕ್ಷ್ಮೀಪತಿ ಇತ್ತೀಚೆಗೆ ಹೇಳಿದ್ದರು.

ಇತ್ತೀಚೆಗೆ ನಡೆದ ಸಂಸ್ಥೆಗಳ ಒಕ್ಕೂಟದ ಸಭೆ ನಡೆಸಿದ ನಂತರ ಈ ವಿಷಯವನ್ನು ತಿಳಿಸಿದರು. ವೇತನ ಶ್ರೇಣಿಯನ್ನು ಹೆಚ್ಚಿಸುವಂತೆ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಈಗಾಗಲೇ ಆಡಳಿತ ಮಂಡಳಿಗೆ 14 ದಿನಗಳ ಮುಷ್ಕರ ನೋಟೀಸ್ ಜಾರಿ ಮಾಡಲಾಗಿತ್ತು. ನೋಟೀಸ್ ಜಾರಿ ಮಾಡಿ ಹತ್ತುದಿನಗಳ ಕಳೆದರೂ ಇಲ್ಲಿಯವರೆಗೂ ನಮ್ಮ ಮಂಡಳಿಯಿಂದ ನಮ್ಮ ಬೇಡಿಕೆಗಳಿಗೆ ಪೂರಕವಾದ ಸ್ಪಂದನೆ ದೊರೆತಿಲ್ಲ. ಆದ್ದರಿಂದ ಅನಿವಾರ್ಯವಾಗಿ ಈಗಾಗಲೇ ನಿಗದಿಯಾಗಿರುವಂತೆ ಮಾರ್ಚ್ 16, 2023 ರಿಂದ ಸಾಮೂಹಿಕವಾಗಿ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ತಮ್ಮ ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರವನ್ನು ನಡೆಸಲು ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಿದ್ದೇವೆ ಎಂದು ಹೇಳಿದರು.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

5 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

5 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

6 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

6 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

7 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

7 hours ago