ನಾಳೆ ಅಥವಾ ನಾಡಿದ್ದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ : ಸಿಎಂ ಬೊಮ್ಮಾಯಿ – Vishwanews24

Featured, ರಾಜ್ಯ ನ್ಯೂಸ್

ಹೊಸ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ – ನಾಳೆ ಅಥವಾ ನಾಡಿದ್ದು ಬಿಜೆಪಿ ಪಟ್ಟಿ ಪ್ರಕಟ : ಸಿಎಂ ಬೊಮ್ಮಾಯಿ

ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ನವದೆಹಲಿಗೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ನಾಳೆ ಅಥವಾ ನಾಡಿದ್ದು ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚೆ ನಡೆಯುತ್ತಿದೆ. ಈಗಾಗಲೇ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆದಿದೆ. ಮೊದಲ ಪಟ್ಟಿಯಲ್ಲಿ ಹೊಸ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಇನ್ನೂ ಚರ್ಚೆ ನಡೆಯಬೇಕಾಗಿದ್ದು, ಹೀಗಾಗಿ ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ- ಕೆಲವು ಹಾಲಿ ಶಾಸಕರಿಗೆ ಟಿಕೆಟ್ ಸಿಗಲ್ಲ :  ಬಿಎಸ್ ವೈ  – Vishwanews24

ಇಂದು ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಮತ್ತೊಮ್ಮೆ ಚರ್ಚೆ ನಡೆಸಿ ಫೈನಲ್ ಮಾಡಿ ನಾಳೆ ಅಥವಾ ನಾಡಿದ್ದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Leave a Reply