ಉಡುಪಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ಸೆ. 27ರಂದು ಉಡುಪಿಯ ಅಜ್ಜರಕಾಡು ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸಂಜೆ 6ಕ್ಕೆ ಜಿಲ್ಲಾಸ್ಪತ್ರೆಗೆ ಆಗಮಿಸಿ ಕುಂದುಕೊರತೆ ಪರಿಶೀಲಿಸಲಿದ್ದಾರೆ. ಬಳಿಕ ಆಸ್ಪತ್ರೆಯಲ್ಲಿ ವಾಸ್ತವ್ಯ ಇರಲಿದ್ದಾರೆ.
1962ರಲ್ಲಿ ಸಬ್ ಡಿವಿಷನ್ ಆಸ್ಪತ್ರೆಯಾಗಿ ಆರಂಭಗೊಂಡ ಅಜ್ಜರಕಾಡು ಆಸ್ಪತ್ರೆ ವಾಸ್ತವವಾಗಿ ಇಂದಿಗೂ ಜಿಲ್ಲಾಸ್ಪತ್ರೆ ದರ್ಜೆಯ ಸೌಲಭ್ಯ ಹೊಂದಿಲ್ಲ. 1997ರಲ್ಲಿ ಉಡುಪಿ ಜಿಲ್ಲೆ ರಚನೆಯಾದ ಬಳಿಕ ನಾಮಫಲಕದಲ್ಲಿ ಮಾತ್ರ ಜಿಲ್ಲಾಸ್ಪತ್ರೆ ಎಂದಿದೆ. ಸೌಲಭ್ಯಗಳು ತಾಲೂಕು ಮಟ್ಟದ್ದಾಗಿಯೇ ಇವೆ.
ದಾನಿಗಳ ನೆರವಿನಿಂದ ಕೆಲವು ಸವಲತ್ತು ಒದಗಿಸಲಾಗಿದ್ದರೂ ವೈದ್ಯರು, ಸಿಬಂದಿಯ ಕೊರತೆ ತೀವ್ರವಾಗಿದೆ. ಪ್ರಸ್ತುತ ದಿನವೊಂದಕ್ಕೆ ಸುಮಾರು 890ರಿಂದ 900 ಮಂದಿ ರೋಗಿಗಳು ಹೊರರೋಗಿ ವಿಭಾಗಕ್ಕೆ ಬರುತ್ತಾರೆ.
ಆಸ್ಪತ್ರೆಯಲ್ಲಿ ಇರುವುದು 124 ಹಾಸಿಗೆಗಳು ಮಾತ್ರ. ಆದರೆ ಅನಿವಾರ್ಯವಾಗಿ 160ರಷ್ಟು ರೊಗಿಗಳನ್ನು ದಾಖಲಿಸಿಕೊಳ್ಳಲಾಗಿದೆ. ಇರುವ ವೈದ್ಯರು, ಸಿಬಂದಿಯ ಗರಿಷ್ಠ ಸೇವೆಯಿಂದ ಕೆಲವು ಸೇವೆಗಳು ಉತ್ತಮ ಮಟ್ಟದಲ್ಲಿ ದೊರೆಯುತ್ತಿದ್ದರೂ ಜಿಲ್ಲಾಸ್ಪತ್ರೆ ದರ್ಜೆಗೆ ಏರದಿದ್ದರೆ ಸಾರ್ವಜನಿಕರಿಗೆ ಅಗತ್ಯ ಸೇವೆಗಳು ದೊರೆಯುವುದು ಅಸಾಧ್ಯ. ಈ ಹಿನ್ನೆಲೆಯಲ್ಲಿ ಶ್ರೀರಾಮುಲು ಭೇಟಿ ಮತ್ತು ವಾಸ್ತವ್ಯ ಮಹತ್ವ ಪಡೆದುಕೊಂಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…