Featured

ನಾಳೆ (ಡಿ.15 ) ಉಡುಪಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಉಪಸ್ಥಿತಿಯಲ್ಲಿ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶ

ನಾಳೆ (ಡಿ.15 ) ಉಡುಪಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಉಪಸ್ಥಿತಿಯಲ್ಲಿ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶ

ಪಕ್ಷದ ಸಂಘಟನಾತ್ಮಕ ದೃಷ್ಠಿಯಿಂದ ಬಿಜೆಪಿ ಜಿಲ್ಲಾ ಮಟ್ಟದ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶವು ಡಿ.15 ಬುಧವಾರ ಬೆಳಿಗ್ಗೆ ಗಂಟೆ 10.00ರಿಂದ ಉಡುಪಿ ಪುರ ಭವನದಲ್ಲಿ ನಡೆಯಲಿದೆ.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ರವರ ಉಪಸ್ಥಿತಿಯಲ್ಲಿ ಜಿಲ್ಲೆಯ ಶಾಸಕರು ಮತ್ತು ಪಕ್ಷದ ವಿವಿಧ ಸ್ತರದ ಮುಖಂಡರ ಸಮಾಗಮದೊಂದಿಗೆ ನಡೆಯಲಿರುವ ಶಕ್ತಿಕೇಂದ್ರ ಪ್ರಮುಖರ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ, ರಾಜ್ಯ, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು
ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರು, ಮಂಡಲಗಳ ಪದಾಧಿಕಾರಿಗಳು, ಮಹಾ ಶಕ್ತಿಕೇಂದ್ರಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಕ್ತಿ ಕೇಂದ್ರಗಳ ಪ್ರಮುಖರು ಭಾಗವಹಿಸಲಿದ್ದಾರೆ.

ಬೆಳಿಗ್ಗೆ 10.00 ರಿಂದ 10.30 ಉಪಹಾರ ಮತ್ತು ನೋಂದಣಿ; 10.30ಕ್ಕೆ ಸಮಾವೇಶದ ಉದ್ಘಾಟನೆ; 11.00ಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್. ಸಂತೋಷ್ ಜೀ ಯವರಿಂದ ದಿಕ್ಸೂಚಿ ಭಾಷಣ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

13 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

13 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

14 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

14 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

14 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

14 hours ago