Featured

ನಾಳೆ ದೆಹಲಿಯಲ್ಲಿ ಅನಾವರಣಗೊಳ್ಳಲಿದೆ ಕರ್ನಾಟಕದ ಸ್ತಬ್ದಚಿತ್ರ `ನಾರಿಶಕ್ತಿ’  – Vishwanews24

ನಾಳೆ ದೆಹಲಿಯಲ್ಲಿ ಅನಾವರಣಗೊಳ್ಳಲಿದೆ ಕರ್ನಾಟಕದ ಸ್ತಬ್ದಚಿತ್ರ `ನಾರಿಶಕ್ತಿ’

ಬೆಂಗಳೂರು : ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸ್ತ್ರೀಸಬಲೀಕರಣವನ್ನು ಪ್ರತಿಬಿಂಬಿಸುವ ‘ನಾರಿ ಶಕ್ತಿ’ ಸ್ತಬ್ಧಚಿತ್ರವು ಸಿದ್ಧಗೊಂಡಿದೆ.

ನಾಡಿನ ಹೆಮ್ಮೆಯ ಪ್ರತೀಕವಾಗಿರುವ ಸ್ತಬ್ಧಚಿತ್ರವು ಜ.26 ರಂದು ರಾಜಧಾನಿಯ ಕರ್ತವ್ಯ ಪಥದಲ್ಲಿ(ರಾಜ್ಪಥ್) ಸಾಗುವುದರೊಂದಿಗೆ ಕರ್ನಾಟಕ ಹಿರಿಮೆಯ ಕೀರ್ತಿ ಪತಾಕೆ ಹಾರಿಸಲಿದೆ. ಇದರೊಂದಿಗೆ ಸತತವಾಗಿ ಹದಿನಾಲ್ಕು ವರ್ಷಗಳಿಂದ ಸ್ತಬ್ಧಚಿತ್ರದೊಂದಿಗೆ ಪಾಲ್ಗೊಂಡ ದೇಶದ ಏಕೈಕ ರಾಜ್ಯವೆಂಬ ಶ್ರೇಯವನ್ನು ಕರ್ನಾಟಕ ತನ್ನದಾಗಿಸಿಕೊಳ್ಳಲಿದೆ.

ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರವು ಕರ್ನಾಟಕ ರಾಜ್ಯದ ಪಾಲಿಗೆ ಅತ್ಯಂತ ಸ್ಮರಣೀಯವಾದುದು. ಹಲವು ಅಡೆ ತಡೆಗಳನ್ನು ಎದುರಿಸಿ, ಕೊನೆಯ ಹಂತದಲ್ಲಿ ರಾಜ್ಯವು ಪಥ ಸಂಚಲನಕ್ಕೆ ರಹದಾರಿ ಪಡೆದುಕೊಂಡಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಸ್ತಬ್ಧಚಿತ್ರವನ್ನು ಸಿದ್ಧಪಡಿಸುವ ಸವಾಲನ್ನು ಹಿಮ್ಮೆಟ್ಟಿಸಿ ಅಚ್ಚರಿಯ ರೀತಿಯಲ್ಲಿ ಸಿದ್ಧಗೊಂಡಿದೆ. ಕರ್ನಾಟಕದ ಹಿರಿಮೆ ಮತ್ತು ಕನ್ನಡ ಅಸ್ಮಿತೆಯ ಪ್ರತೀಕದಂತಿರುವ ಈ ಸ್ತಬ್ಧಚಿತ್ರವು ಕೇವಲ 10 ದಿನಗಳಲ್ಲಿ ರೂಪುಗೊಂಡಿದೆ. ಸ್ತಬ್ಧಚಿತ್ರದ ವೈಶಿಷ್ಟ ಪೂರ್ಣತೆಯಿಂದಲೇ ಗಮನ ಸೆಳೆಯುವ ಕರ್ನಾಟಕ ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಲೇ ಸಾಗಿದೆ. ಈ ಬಾರಿಯದ್ದು ಅಲ್ಪಾವಧಿಯಲ್ಲಿ ಬೆರಗುಗೊಳಿಸುವಂತಹ ಐತಿಹಾಸಿಕ ಸಾಧನೆಯಂತೆ ಕಂಗೊಳಿಸುತ್ತಿದೆ.

ಗಣರಾಜ್ಯೋತ್ಸವದ ಸ್ತಬ್ಧಚಿತ್ರಕ್ಕಾಗಿ ಇಲಾಖೆಯು ಕರ್ನಾಟಕದ ಮಹಿಳೆಯರ ಶೌರ್ಯ,’ ಕರ್ನಾಟಕದ ಹೆಮ್ಮೆ, ಕರ್ನಾಟಕದ ಪುμÉ್ಪೂೀದ್ಯಮ, ಕರ್ನಾಟಕ: ಸಿರಿಧಾನ್ಯದ ನಾಯಕ ಮತ್ತು ‘ನಾರಿ ಶಕ್ತಿ’ ಎಂಬ ಐದು ವಿಷಯಗಳನ್ನು ಆಯ್ಕೆ ಮಾಡಿಕಳುಹಿಸಿತ್ತು. ಇದರಲ್ಲಿ ಸ್ತ್ರೀ ಸಬಲೀಕರಣವನ್ನು ಬಿಂಬಿಸುವ ‘ನಾರಿ ಶಕ್ತಿ’ ವಿಷಯವನ್ನು ವಿಷಯ ಆಯ್ಕೆಯ ಪರಿಣತರ ತಂಡ’ವು ಅಂತಿಮಗೊಳಿಸಿತ್ತು. ಅದಕ್ಕನುಗಣವಾಗಿ ಈ ಬಾರಿಯ ಸ್ತಬ್ಧಚಿತ್ರದಲ್ಲಿ ಕರ್ನಾಟಕಕ್ಕೆ ಕೀರ್ತಿ ತಂದ ಮೂವರು ಮಹಿಳಾ ಸಾಧಕಿಯರ ಸಾಧನೆಯನ್ನು ಪ್ರದರ್ಶಿಸುತ್ತಿರುವುದಾಗಿ ಆಯುಕ್ತರು ತಿಳಿಸಿದರು.

‘ಆಜಾದಿ ಕ ಅಮೃತ ಮಹೋತ್ಸವʼದ ಅಂಗವಾಗಿ ಸೂಲಗಿತ್ತಿ ನರಸಮ್ಮ, ವೃಕ್ಷ ಮಾತೆ ತುಳಸಿ ಗೌಡ ಹಾಲಕ್ಕಿ ಮತ್ತು ಸಾಲುಮರದ ತಿಮ್ಮಕ್ಕ ಅವರುಗಳ ಸಾಧನೆಗಳನ್ನು ‘ನಾರಿ ಶಕ್ತಿ’ (ವುಮನ್ ಪವರ್) ಹೆಸರಿನಲ್ಲಿ ರಾಜ್ಯವು 2023 ರ ಗಣರಾಜ್ಯೋತ್ಸವದ ಸ್ತಬ್ಧಚಿತ್ರದಲ್ಲಿ ಪ್ರಸ್ತುತ ಪಡಿಸಿದೆ. ಇವರುಗಳು ಸಮಾಜಕ್ಕೆ ನೀಡಿದ ನಿಸ್ವಾರ್ಥ ಕೊಡುಗೆಗಾಗಿ ಕೇಂದ್ರ ಸರ್ಕಾರ ‘ಪದ್ಮಶ್ರೀ’ ಪುರಸ್ಕಾರದಿಂದ ಗೌರವಿಸಿದೆ. ಕರ್ನಾಟಕದ ಅತಿ ಹಿಂದುಳಿದ ಹಳ್ಳಿಗಳಲ್ಲಿ, ಸಾಮಾನ್ಯ ಕುಟುಂಬಗಳಲ್ಲಿ ಹುಟ್ಟಿ ಬೆಳೆದರೂ ಇವರುಗಳ ಸಾಧನೆಗೆ ಅವರ ಹುಟ್ಟು, ಜಾತಿ, ಅಂತಸ್ತು ಯಾವುದು ಅಡ್ಡ ಬಂದಿಲ್ಲ. ತಮ್ಮ ಸಾಧನೆಗಳ ಮೂಲಕವೇ ಜಾಗತಿಕವಾಗಿ ಗಮನ ಸೆಳೆದವರು. ಇವರ ಸಾಧನೆಗಾಗಿ ಕರ್ನಾಟಕ ಮತ್ತು ದೇಶವೇ ಹೆಮ್ಮೆಪಡುತ್ತದೆ. ಇದನ್ನು ಪ್ರತಿಬಿಂಬಿಸುವ ರೀತಿಯಲ್ಲಿ ಸ್ತಬ್ಧಚಿತ್ರವನ್ನು ರೂಪಿಸಿದೆ ಎಂದು ಅವರು ನುಡಿದರು.

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

53 minutes ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 hour ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 hours ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

2 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

3 hours ago