ನಾಳೆ ಪಾಂಡವಪುರದಲ್ಲಿ ಸಿಎಂ ಕುಮಾರಸ್ವಾಮಿಯಿಂದ ಭತ್ತ ಕಟಾವು..

Featured, ಜಿಲ್ಲೆ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಭತ್ತದ ನಾಟಿ ಮಾಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇದೀಗ ಅದನ್ನು ಕಟಾವು ಮಾಡಲು ತೆರಳಲಿದ್ದಾರೆ.

ಡಿ.7 ರ ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಭೇಟಿ ನೀಡಿ ಭತ್ತ ಕಟಾವು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಅಂದೇ ಸಂಜೆ 5:30ರ ವೇಳೆಗೆ ಇತ್ತೀಚೆಗೆ ಬಸ್ ದುರಂತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ಪಾಂಡವಪುರ ತಾಲೂಕಿನ ವದೆಸಮುದ್ರ ಗ್ರಾಮದಲ್ಲಿ ಪರಿಹಾರದ ಚೆಕ್ ವಿತರಣೆ ಮಾಡಲಿದ್ದಾರೆ.

ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಮತ್ತು ಅರಳಕುಪ್ಪೆ ಗ್ರಾಮದ ವ್ಯಾಪ್ತಿಗೆ ಸೇರಿದ ಗದ್ದೆಯಲ್ಲಿ ರೈತರಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಆಗಸ್ಟ್ ತಿಂಗಳಲ್ಲಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ತಾವೇ ಸ್ವತಃ ರೈತರಾಗಿ ಗದ್ದೆಗಿಳಿದು ನಾಟಿ ಮಾಡಿದ್ದರು.ಸಿಎಂ ನಾಟಿ ಮಾಡುತ್ತಿರುವ ವೇಳೆ ಉಳುವ ಯೋಗಿಯ ನೋಡಲ್ಲಿ ರೈತ ಗೀತೆ ಮೇಳೈಸಿತ್ತು. ಇದೀಗ ಭತ್ತ ಕೊಯ್ಲಿಗೆ ಸಿದ್ದರಾಗಿದ್ದಾರೆ ಸಿಎಂ ಕುಮಾರಸ್ವಾಮಿ..

vishwanews24