ನಾಳೆ “ಭಾನುವಾರದ ಲಾಕ್ ಡೌನ್’ ಇರುವುದಿಲ್ಲ”ಅಧಿಕೃತ ಆದೇಶ ಇಂದು ಸಂಜೆಯ ವೇಳೆಗೆ ಮುಖ್ಯಮಂತ್ರಿ ಸಚಿವಾಲಯದಿಂದ ಬರುವ ನಿರೀಕ್ಷೆ: vishwanews24

ಬೆಂಗಳೂರು: ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಈ ಹಿಂದೆ ರಾಜ್ಯ ಸರಕಾರ ಆದೇಶಿಸಿದ್ದ ‘ಭಾನುವಾರದ ಲಾಕ್ ಡೌನ್’ ನಾಳೆ ಇರುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ಸಚಿವಾಲಯದ ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಸದ ಬಳಿಕ ಕೋವಿಡ್-19 ಸೋಂಕು ನಿಯಂತ್ರಣದ ಮತ್ತೊಂದು ವಿಧಾನವಾಗಿ ಭಾನುವಾರದ ಲಾಕ್ ಡೌನ್ ಗೆ ರಾಜ್ಯ ಸರಕಾರ ಆದೇಶಿಸಿತ್ತು. ನಂತರ ಮೊದಲ ಭಾನುವಾರ ಅಂದರೆ ಮೇ 24ರಂದು ಲಾಕ್ ಡೌನ್ ಮಾಡಲಾಗಿತ್ತು. ರಾಜ್ಯದಲ್ಲಿ ಈ ಲಾಕ್ ಡೌನ್ ಬಹುತೇಕ ಯಶಸ್ವಿಯಾಗಿತ್ತು.

ಆದರೆ ಅದರ ನಂತರದ ಭಾನುವಾರ ಅಂದರೆ ( ಮೇ 31) ರಂದು ಈ ಲಾಕ್ ಡೌನ್ ತೆರವುಗೊಳಿಸಲಾಗಿತ್ತು. ಸದ್ಯ ಬಹುತೇಕ ಎಲ್ಲಾ ಲಾಕ್ ಡೌನ್ ನಿರ್ಬಂಧಗಳು ಸಡಿಲವಾಗಿರುವ ಕಾರಣ ಇನ್ನೂ ಈ ಭಾನುವಾರದ ಲಾಕ್ ಡೌನ್ ಮುಂದುವರಿಯುವುದು ಅನುಮಾನ ಎನ್ನಲಾಗಿದೆ. ಆದರೆ ರಾತ್ರಿಯ ವೇಳೆಯ ಕರ್ಫ್ಯೂ ಯಥಾಸ್ಥಿತಿಯಂತೆ ಮುಂದುವರಿಯಲಿದೆ ಎನ್ನಲಾಗಿದೆ.

ನಾಳೆ (ಜೂ.7) ರವಿವಾರ ಲಾಕ್ ಡೌನ್ ರದ್ದಾಗಿರುವ ಬಗ್ಗೆ ಅಧಿಕೃತ ಆದೇಶ ಇಂದು ಸಂಜೆಯ ವೇಳೆಗೆ ಮುಖ್ಯಮಂತ್ರಿ ಸಚಿವಾಲಯದಿಂದ ಬರುವ ನಿರೀಕ್ಷೆಯಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago