ಬೆಂಗಳೂರು: ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಈ ಹಿಂದೆ ರಾಜ್ಯ ಸರಕಾರ ಆದೇಶಿಸಿದ್ದ ‘ಭಾನುವಾರದ ಲಾಕ್ ಡೌನ್’ ನಾಳೆ ಇರುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ಸಚಿವಾಲಯದ ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಸದ ಬಳಿಕ ಕೋವಿಡ್-19 ಸೋಂಕು ನಿಯಂತ್ರಣದ ಮತ್ತೊಂದು ವಿಧಾನವಾಗಿ ಭಾನುವಾರದ ಲಾಕ್ ಡೌನ್ ಗೆ ರಾಜ್ಯ ಸರಕಾರ ಆದೇಶಿಸಿತ್ತು. ನಂತರ ಮೊದಲ ಭಾನುವಾರ ಅಂದರೆ ಮೇ 24ರಂದು ಲಾಕ್ ಡೌನ್ ಮಾಡಲಾಗಿತ್ತು. ರಾಜ್ಯದಲ್ಲಿ ಈ ಲಾಕ್ ಡೌನ್ ಬಹುತೇಕ ಯಶಸ್ವಿಯಾಗಿತ್ತು.
ಆದರೆ ಅದರ ನಂತರದ ಭಾನುವಾರ ಅಂದರೆ ( ಮೇ 31) ರಂದು ಈ ಲಾಕ್ ಡೌನ್ ತೆರವುಗೊಳಿಸಲಾಗಿತ್ತು. ಸದ್ಯ ಬಹುತೇಕ ಎಲ್ಲಾ ಲಾಕ್ ಡೌನ್ ನಿರ್ಬಂಧಗಳು ಸಡಿಲವಾಗಿರುವ ಕಾರಣ ಇನ್ನೂ ಈ ಭಾನುವಾರದ ಲಾಕ್ ಡೌನ್ ಮುಂದುವರಿಯುವುದು ಅನುಮಾನ ಎನ್ನಲಾಗಿದೆ. ಆದರೆ ರಾತ್ರಿಯ ವೇಳೆಯ ಕರ್ಫ್ಯೂ ಯಥಾಸ್ಥಿತಿಯಂತೆ ಮುಂದುವರಿಯಲಿದೆ ಎನ್ನಲಾಗಿದೆ.
ನಾಳೆ (ಜೂ.7) ರವಿವಾರ ಲಾಕ್ ಡೌನ್ ರದ್ದಾಗಿರುವ ಬಗ್ಗೆ ಅಧಿಕೃತ ಆದೇಶ ಇಂದು ಸಂಜೆಯ ವೇಳೆಗೆ ಮುಖ್ಯಮಂತ್ರಿ ಸಚಿವಾಲಯದಿಂದ ಬರುವ ನಿರೀಕ್ಷೆಯಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…