ನಾಳೆ ಭಾರತ್ ಬಂದ್ : ಏನು ಇರುತ್ತೆ? ಏನು ಇರಲ್ಲ? Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ 10 ಕಾರ್ಮಿಕ ಸಂಘಟನೆಗಳು ಬುಧವಾರ ದೇಶವ್ಯಾಪಿ ಬಂದ್‍ಗೆ ಕರೆ ನೀಡಿವೆ.

ಬಸ್ ಇರುತ್ತೆ:
ಮುಷ್ಕರದಲ್ಲಿ ಭಾಗಿಯಾಗದಂತೆ ಸಾರಿಗೆ ನೌಕರರ ಮೇಲೆ ಎಸ್ಮಾ(ಅಗತ್ಯ ಸೇವೆ ನಿರ್ವಹಣಾ ಕಾಯ್ದೆ) ಅಸ್ತ್ರವನ್ನು ಪ್ರಯೋಗಿಸಲು ಸರ್ಕಾರ ಮುಂದಾಗಿದೆ. ಎಸ್ಮಾ ಜಾರಿಗೆ ಹೆದರಿದ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನೌಕರರು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಕೆಲ ನೌಕರರು ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಂಚ ವ್ಯತ್ಯಯವಾಗುವ ಸಾಧ್ಯತೆಯಿದೆ.

ಶಾಲೆ ಇರುತ್ತೆ:
ಖಾಸಗಿ ಶಾಲಾ-ಕಾಲೇಜುಗಳು ಬಂದ್ ಬೆಂಬಲಿಸದ ಕಾರಣ ಶಾಲಾ -ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ. ಆಯಾ ಶಾಲಾ ಆಡಳಿತ ಮಂಡಳಿಗೆ ರಜೆ ನೀಡುವ ಅಧಿಕಾರವನ್ನು ನೀಡಲಾಗಿದೆ ಎಂದು ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದ್ದಾರೆ.

ರಿಕ್ಷಾ ಇರುತ್ತೆ:
ಸಿಐಟಿಯು ಅಡಿ ಬರುವ ಆಟೋ ಚಾಲಕರ ಸಂಘಟನೆಗಳ ಮಾತ್ರ ಬೆಂಬಲ ನೀಡಿದ್ದು ಬೆಂಗಳೂರು ನಗರ ಆಟೋ ಚಾಲಕರ ಸಂಘದಿಂದ ಬೆಂಬಲ ಇಲ್ಲ. ಆದರ್ಶ ಆಟೋ ಯೂನಿಯನ್‍ನಿಂದ ಬೆಂಬಲ ನೀಡಿಲ್ಲ. ಎಂದಿನಂತೆ ಆಟೋ, ಊಬರ್, ಟ್ಯಾಕ್ಸಿ ಸಂಚಾರ ಇರಲಿದೆ.

ಭಾರತ್ ಬಂದ್‍ಗೆ ಹೋಟೆಲ್ ಸಂಘ ಬೆಂಬಲ ಇಲ್ಲ. ಮಾಲ್‍ಗಳು ಕೂಡ ನಾಳೆ ತೆರೆದಿರುತ್ತವೆ. ಬಂದ್‍ಗೆ ಟ್ಯಾಕ್ಸಿ ಮಾಲೀಕರ ಬೆಂಬಲ ನೀಡಿಲ್ಲ. ಲಾರಿ ಸಂಚಾರ ಕೂಡ ಇರಲಿದ್ದು ಅಗತ್ಯ ವಸ್ತುಗಳ ಸಾಗಾಣೆ ಎಂದಿನಂತಿರಲಿವೆ.