ಮಂಗಳೂರು,: ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ನಿಮಿತ್ತ ನಾಳೆ (ಮೇ 3) ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದು, ಮೂಲ್ಕಿ ಬಳಿಯ ವಿಶಾಲ ಮೈದಾನದಲ್ಲಿ ಬೃಹತ್ ಸಮಾವೇಶಕ್ಕೆ ಎಲ್ಲ ಸಿದ್ಧತೆ ನಡೆದಿದೆ.
ಎರಡೂ ಜಿಲ್ಲೆಗಳ ಮಧ್ಯಭಾಗದ ಮೂಲ್ಕಿಯ ಕೊಳ್ನಾಡಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಿರುವುದರಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಂದ ಲಕ್ಷಾಂತರ ಮಂದಿ ಆಗಮಿಸಲು ಅನುಕೂಲವಾಗಲಿದೆ.
ಈಗಾಗಲೇ ವೇದಿಕೆ ಮತ್ತು ಪೆಂಡಾಲ್ ಕೆಲಸಗಳು ಮುಕ್ತಾಯದ ಹಂತದಲ್ಲಿದ್ದು, ವಾಹನಗಳ ಪಾರ್ಕಿಂಗ್‌ಗೆ ಸಾಕಷ್ಟು ಸ್ಥಳಾವಕಾಶವನ್ನು ಒದಗಿಸಲಾಗಿದೆ. ಇಂದು ಮಧ್ಯಾಹ್ನದೊಳಗೆ ಎಲ್ಲ ಕೆಲಸ ಪೂರ್ಣಗೊಂಡು ಇಡೀ ಪ್ರದೇಶವನ್ನು ಭದ್ರತಾ ಸಿಬ್ಬಂದಿಗೆ ಬಿಟ್ಟುಕೊಡಲಾಗುತ್ತದೆ.
ಬೆಳಗ್ಗೆ 9 ಗಂಟೆಗೆ ಸಮಾವೇಶ
ಪ್ರಧಾನಿ ಮೋದಿ ಅವರ ಸಾರ್ವಜನಿಕ ಸಭೆ ಬೆಳಗ್ಗೆ 10 ಗಂಟೆಗೆ ನಿಗದಿಯಾಗಿದ್ದು, ಆಗಮಿಸುವ ಕಾರ್ಯಕರ್ತರು, ಸಾರ್ವಜನಿಕರು ಬೆಳಗ್ಗೆ 9 ಗಂಟೆಯೊಳಗೆ ಸಮಾವೇಶದ ಸ್ಥಳಕ್ಕೆ ಆಗಮಿಸುವಂತೆ ಬಿಜೆಪಿ ಮುಖಂಡರು ಕಾರ್ಯಕರ್ತರಿಗೆ ಸೂಚಿಸಿದ್ದಾರೆ. ಭದ್ರತಾ ಕಾರಣಗಳಿಂದಾಗಿ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹೊತ್ತಿಗೆ ಸಮಾವೇಶದ ಪರಿಸರದಲ್ಲಿ ಸಾರ್ವಜನಿಕರ ಸಂಚಾರವನ್ನು ಸಂಪೂರ್ಣ ನಿರ್ಬಂಧಿಸಲಾಗುತ್ತದೆ.
ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.
ಹಳೆಯಂಗಡಿ ಜಂಕ್ಷನ್‌ನಿಂದ ಮೂಲ್ಕಿ ವಿಜಯ ಸನ್ನಿಧಿಯವರೆಗೆ ರಾಷ್ಟ್ರೀಯ ಹೆದ್ದಾರಿ 66 ರಸ್ತೆಯ ಎರಡೂ ಬದಿಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಹಾಗೆಯೇ ಬಾರಿಕೇಡ್ ಪಾಯಿಂಟ್ಸ್ ಕಾರ್ನಾಡ್ ಬೈಪಾಸ್, ಕಾರ್ನಾಡ್ ಜಂಕ್ಷನ್, ಮುಲ್ಕಿ ರೈಲ್ವೆ ಸ್ಟೇಷನ್ ಕ್ರಾಸ್(ಕಿನ್ನಿಗೋಳಿ),ಎಸ್.ಕೋಡಿ ಕ್ರಾಸ್ ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ಬರುವ ಎಲ್ಲ ವಾಹನಗಳು ಮೂಲ್ಕಿ ವಿಜಯ ಸನ್ನಿದಿಯ ಬಳಿ ಎಡಕ್ಕೆ ತಿರುಗಿ ಕಿನ್ನಿಗೋಳಿ-ಕಟೀಲು-ಬಜಪೆ-ಕಾವೂರು ಮಾರ್ಗವಾಗಿ ಮಂಗಳೂರು ಕಡೆ ಹೋಗಬೇಕು. ಹಾಗೆ ಮಂಗಳೂರಿನಿಂದ ಉಡುಪಿಗೆ ತೆರಳುವ ವಾಹನಗಳು ಕೆಪಿಟಿ ಜಂಕ್ಷನ್‌ನಲ್ಲಿ ಬಲಕ್ಕೆ ತಿರುಗಿ ಬೊಂದೇಲ್-ಕಾವೂರು-ಬಜಪೆ-ಕಟೀಲು-ಕಿನ್ನಿಗೋಳಿ- ಮೂಲ್ಕಿ ಕಡೆಗೆ ಅಥವಾ ಕುಳೂರು ಜಂಕ್ಷನ್‌ನಲ್ಲಿ ಬಲಕ್ಕೆ ಚಲಿಸಿ ಕಾವೂರು-ಬಜಪೆ, ಕಟೀಲು-ಕಿನ್ನಿಗೋಳಿ ಮಾರ್ಗವಾಗಿ ಮೂಲ್ಕಿ ಕಡೆಗೆ ಸಂಚರಿಸಬೇಕು.
ಸುರತ್ಕಲ್ ಕಡೆಯಿಂದ ಉಡುಪಿ ಕಡೆಗೆ ತೆರಳುವ ವಾಹನಗಳು ಹಳೆಯಂಗಡಿ ಜಂಕ್ಷನ್ ಬಳಿ ಬಲಕ್ಕೆ ತಿರುಗಿ ಪಕ್ಷಿಕೆರೆ-ಎಸ್.ಕೋಡಿ ಮಾರ್ಗವಾಗಿ ಮೂಲ್ಕಿ ಕಡೆಗೆ ಸಂಚರಿಸಬೇಕು. ರಾಷ್ಟ್ರೀಯ ಹೆದ್ದಾರಿಯಿಂದ ಕೆ.ಎಸ್.ರಾವ್ ನಗರಕ್ಕೆ ಹೋಗುವ ರಸ್ತೆ, ಕೊಲ್ನಾಡು ಜಂಕ್ಷನ್‌ನಿಂದ ಕೈಗಾರಿಕಾ ಪ್ರದೇಶಕ್ಕೆ ತೆರಳುವ ರಸ್ತೆಯ ಎರಡೂ ಬದಿಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.
ವಾಹನ ನಿಲುಗಡೆ ಪ್ರದೇಶಗಳು ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಬಸ್‌ಗಳು ಬೆಳಗ್ಗೆ 9 ಗಂಟೆಯ ಒಳಗಾಗಿ ಸಾರ್ವಜನಿಕರನ್ನು ಕಾರ್ಯಕ್ರಮ ಸ್ಥಳದ ಪ್ರವೇಶ ದ್ವಾರದಲ್ಲಿ ಇಳಿಸಿ ಜಾಗತಿಕ ಬಂಟರ ಸಂಘದ ಬಳಿಯ ವಾಹನ ನಿಲುಗಡೆ ಪ್ರದೇಶದಲ್ಲಿ ವಾಹನಗಳನ್ನು ನಿಲುಗಡೆ ಮಾಡಬೇಕು.
ಉಡುಪಿ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಬಸ್‌ಗಳು ಕಾರ್ನಾಡು ಬೈಪಾಸ್‌ನಲ್ಲಿ ಸಾರ್ವಜನಿಕರನ್ನು ಇಳಿಸಿ ಯುಟರ್ನ್ ಮಾಡಿ ಜಾಗತಿಕ. ಬಂಟರ ಸಂಘದ ಬಳಿಯ ಪಡುಬೈಲ್ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬೇಕು. ಮಂಗಳೂರು ಹಾಗೂ ಉಡುಪಿ ಕಡೆಯಿಂದ ಬರುವ ಸಾರ್ವಜನಿಕ ಲಘುವಾಹನಗಳು ಹಾಗೂ ದ್ವಿಚಕ್ರ ವಾಹನಗಳು ಕಾರ್ಯಕ್ರಮ ಸ್ಥಳದ ಎದುರಿನ ಅಂದರೆ ಉಡುಪಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಎಡಬದಿಯಲ್ಲಿ ನಿಲುಗಡೆ ಮಾಡಬೇಕು. ಮಂಗಳೂರು ಕಡೆಯಿಂದ ಆಗಮಿಸುವ ಸಾರ್ವಜನಿಕ ಲಘುವಾಹನಗಳ ಹಾಗೂ ದ್ವಿಚಕ್ರ ವಾಹನಗಳು ಮಂಗಳೂರು–ಉಡುಪಿ ರಸ್ತೆಯಲ್ಲಿರುವ ಸುಂದರರಾಮ್ ಶೆಟ್ಟಿ ಕನ್ವೆನ್ಶನ್ ಹಾಲ್ ಬಳಿಯ ವಾಹನ ನಿಲುಗಡೆ ಸ್ಥಳದಲ್ಲಿ ನಿಲುಗಡೆ ಮಾಡಬೇಕು. ಕಾರ್ಯಕ್ರಮಕ್ಕೆ ಬರುವ ವಿಐಪಿ ವಾಹನಗಳು ಕಾರ್ಯಕ್ರಮ ಸ್ಥಳದ ಪಶ್ಚಿಮ ಬದಿಯಲ್ಲಿನ ಅಂದರೆ ಮಂಗಳೂರು -ಉಡುಪಿ ರಸ್ತೆಯ ಎಡಬದಿಯ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆ ಮಾಡಬೇಕು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…